ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA B N Ravikumar: ಜೂನ್ 20ರೊಳಗೆ ವಾಸವಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ

ಮಳೆಗಾಲ ಆರಂಭಕ್ಕೂ ಮುನ್ನ ರಸ್ತೆ ಕಾಮಗಾರಿ ಪೂರ್ಣಗೊಳ್ಳದಿದ್ದರೆ ವಾಹನ ಸವಾರರು, ಶಾಲಾ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಕಷ್ಟ ಅನುಭವಿಸಬೇಕಾಗುತ್ತದೆ. ಈ ಹಿನ್ನೆಲೆ ಯಲ್ಲಿ ಜೂನ್ 20ರೊಳಗೆ ಕಾಮಗಾರಿ ಸಂಪೂರ್ಣ ಮುಗಿಸಿ ಸಾರ್ವಜನಿಕ ಬಳಕೆಗೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಗಡುವು ನೀಡಿದರು.

ಶಿಡ್ಲಘಟ್ಟ: ನಗರದ ವಾಸವಿ ರಸ್ತೆಯ ಕಾಮಗಾರಿ ವಿಳಂಬವಾಗಿರುವ ಕುರಿತು ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಸಕ ಬಿ.ಎನ್. ರವಿಕುಮಾರ್(MLA B N Ravikumar) ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ರಸ್ತೆಯ ದುಸ್ಥಿತಿ ಹಾಗೂ ನಿಧಾನಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ರವಿಕುಮಾರ್ ಸಂಬಂಧಪಟ್ಟ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕ ರಿಗೆ ಅನಗತ್ಯ ತೊಂದರೆ ಆಗದಂತೆ ತಕ್ಷಣ ಕ್ರಮ ಕೈಗೊಂಡು ಕಾಮಗಾರಿಯನ್ನು ವೇಗ ಗೊಳಿಸಬೇಕೆಂದು ಸೂಚಿಸಿದರು.

ಇದನ್ನೂ ಓದಿ: Shidlaghatta News: ಖಾಸಗಿ ಬೋರ್‌ವೆಲ್ ಮಾಲೀಕರು ನಗರಸಭೆಗೆ ಸಹಕರಿಸಿ : ಸಾರ್ವಜನಿಕರಿಗೆ ನೀರು ಮಿತ ಬಳಕೆಗೆ ಮನವಿ

ಮಳೆಗಾಲ ಆರಂಭಕ್ಕೂ ಮುನ್ನ ರಸ್ತೆ ಕಾಮಗಾರಿ ಪೂರ್ಣಗೊಳ್ಳದಿದ್ದರೆ ವಾಹನ ಸವಾರರು, ಶಾಲಾ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಕಷ್ಟ ಅನುಭವಿಸಬೇಕಾಗುತ್ತದೆ. ಈ ಹಿನ್ನೆಲೆ ಯಲ್ಲಿ ಜೂನ್ 20ರೊಳಗೆ ಕಾಮಗಾರಿ ಸಂಪೂರ್ಣ ಮುಗಿಸಿ ಸಾರ್ವಜನಿಕ ಬಳಕೆಗೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಗಡುವು ನೀಡಿದರು.

cbpm6b

ಸ್ಥಳೀಯ ನಿವಾಸಿಗಳು ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ. ವಿಶೇಷವಾಗಿ ಶಾಲಾ ವಾಹನಗಳು ಹಾಗೂ ಪಾದಚಾರಿಗಳಿಗೆ ಹೆಚ್ಚಿನ ತೊಂದರೆಯಾಗುತ್ತಿದೆ ಎಂದು ಶಾಸಕರ ಗಮನಕ್ಕೆ ತಂದರು. ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಶಾಸಕ ರವಿಕುಮಾರ್ ಗುಣಮಟ್ಟದ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳ ಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ನಗರ ಅಭಿವೃದ್ಧಿ ಕೋಶದ ಮಾಧವಿ, ನಗರಸಭೆ ಕಮಿಷನರ್ ಅಮೃತ ಜಿ., ಸಭಾ ಅಂಜುಮ್, ಅನಂತ ಗೌಡ, ಉಮೇಶ್, ರಘು, ತಾದೂರು ರಘು, ವಿಜಯಕುಮಾರ್, ರಾಜೇಶ್, ಮಹೇಶ್, ರೂಪಸಿ ರಮೇಶ್, ಲಕ್ಷ್ಮೀನಾರಾಯಣ ಬಾಬು ಸೇರಿದಂತೆ ಹಲವು ಅಧಿಕಾರಿ ಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.