ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA B N Ravikumar: ಜನಪರ ಯೋಜನೆಗಳ ಮಾಹಿತಿ ಜನರಿಗೆ ತಲುಪಿದಾಗಲೇ ಸಾರ್ಥಕತೆ: ಶಾಸಕ ಬಿ.ಎನ್. ರವಿಕುಮಾರ್

ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಆರ್ಥಿಕವಾಗಿ ಹಿಂದುಳಿದ ಹಾಗೂ ದುರ್ಬಲ ವರ್ಗದ ಜನರ ಜೀವನಮಟ್ಟ ಸುಧಾರಿಸುವ ಉದ್ದೇಶ ಹೊಂದಿವೆ. ಆದ್ದರಿಂದ ಅಧಿಕಾರಿಗಳು ಯೋಜನೆಗಳ ಮಾಹಿತಿ ಯನ್ನು ಗ್ರಾಮಮಟ್ಟಕ್ಕೂ ತಲುಪಿಸಿ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸೌಲಭ್ಯ ದೊರೆಯುವಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು

ಶಿಡ್ಲಘಟ್ಟ: ಸರ್ಕಾರದ ಜನಪರ ಯೋಜನೆಗಳ ಮಾಹಿತಿ ಗ್ರಾಮಮಟ್ಟದವರೆಗೂ ತಲುಪಿದಾಗ ಮಾತ್ರ ಅರ್ಹ ಫಲಾನುಭವಿಗಳು ಅವುಗಳ ಸಂಪೂರ್ಣ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದು ಶಾಸಕ ಬಿ.ಎನ್.ರವಿಕುಮಾರ್(MLA B N Ravikumar) ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳಡಿ ರೇಷ್ಮೆ ಹುಳು ಸಾಕಾಣಿಕೆ ಫಲಾನುಭವಿಗಳಿಗೆ ಸಕಲಕರಣಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2025–26ನೇ ಸಾಲಿನಲ್ಲಿ 279 ಫಲಾನುಭವಿಗಳಿಗೆ 430 ಘಟಕಗಳನ್ನು ಒಳಗೊಂಡ 49.50 ಲಕ್ಷ ಮೌಲ್ಯದ ಸೌಲಭ್ಯಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಆರ್ಥಿಕವಾಗಿ ಹಿಂದುಳಿದ ಹಾಗೂ ದುರ್ಬಲ ವರ್ಗದ ಜನರ ಜೀವನಮಟ್ಟ ಸುಧಾರಿಸುವ ಉದ್ದೇಶ ಹೊಂದಿವೆ. ಆದ್ದರಿಂದ ಅಧಿಕಾರಿಗಳು ಯೋಜನೆಗಳ ಮಾಹಿತಿಯನ್ನು ಗ್ರಾಮಮಟ್ಟಕ್ಕೂ ತಲುಪಿಸಿ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸೌಲಭ್ಯ ದೊರೆಯುವಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: B N Ravikumar: "2028ರಲ್ಲಿ ಪ್ರದೀಪ್ ಗೆದ್ದರೆ ಅವರ ಮನೆಗೆ ವಾಚ್‌ಮನ್ ಆಗುತ್ತೇನೆ; ಸೋತರೆ ಕುಮಾರಣ್ಣ ಮನೆ ಮುಂದೆ ಕಾವಲು ಕಾಯಲಿ": ಬಿ.ಎನ್.ರವಿಕುಮಾರ್ ಬಹಿರಂಗ ಸವಾಲ್

ಸರ್ಕಾರದಿಂದ ದೊರೆತ ನೆರವನ್ನು ಫಲಾನುಭವಿಗಳು ಸಮರ್ಪಕವಾಗಿ ಬಳಸಿಕೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು. ಯೋಜನೆಗಳ ಸಮರ್ಪಕ ಅನುಷ್ಠಾನದಿಂದ ಗ್ರಾಮೀಣ ಕುಟುಂಬಗಳ ಆರ್ಥಿಕ ಸ್ಥಿತಿ ಇನ್ನಷ್ಟು ಬಲಗೊಳ್ಳಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪನಿರ್ದೇಶಕ ಮಾರೆಪ್ಪ ಬಿರಲದಿನ್ನಿ, ರೇಷ್ಮೆ ಸಹಾಯಕ ನಿರ್ದೇಶಕ ಅಕಮಲ್ ಪಾಷಾ, ಜೆಡಿಎಸ್ ಮುಖಂಡರಾದ ಮೇಲೂರು ಮಂಜುನಾಥ್, ತಾದೂರು ರಘು, ರಮೇಶ್, ನಂದ ಕಿಶನ್, ಸಿಪಿಐ ಆನಂದ್ ಕುಮಾರ್, ಪಿಎಸ್ಐ ವೇಣುಗೋಪಾಲ್, ರೇಷ್ಮೆ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

ಶಿಡ್ಲಘಟ್ಟವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರದ ಮೇಲೆ ಒತ್ತಡ: ಶಾಸಕ ರವಿಕುಮಾರ್

ಮುಂಗಾರು ಆರಂಭವಾಗಿ ಎರಡು ತಿಂಗಳು ಕಳೆದರೂ ಶಿಡ್ಲಘಟ್ಟ ಕ್ಷೇತ್ರದಲ್ಲಿ ಸಮರ್ಪಕ ಮಳೆ ಯಾಗದ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯ ಆರಂಭಿಸಲು ಸಾಧ್ಯವಾಗಿಲ್ಲ. ಈ ಕುರಿತು ರೈತ ಸಂಘದವರು ಸಲ್ಲಿಸಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ನಾಳೆ ಚಿಕ್ಕಬಳ್ಳಾ ಪುರಕ್ಕೆ ಆಗಮಿಸಲಿರುವ ಕಂದಾಯ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಅವರ ಗಮನಕ್ಕೆ ವಿಷಯ ವನ್ನು ತಂದು, ಶಿಡ್ಲಘಟ್ಟ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸುವುದಾಗಿ ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.

ಮಳೆಯ ಕೊರತೆಯಿಂದ ರೈತರಿಗೆ ಮಾತ್ರವಲ್ಲದೆ ದನಕರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ. ಈ ಎಲ್ಲ ವಿಚಾರಗಳನ್ನು ಜಿಲ್ಲಾ ಮಟ್ಟದ ಸಭೆಯಲ್ಲಿ ಪ್ರಸ್ತಾಪಿಸಿ ಸರ್ಕಾರದಿಂದ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.