ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Protest: ಡಿ.ಸಿ.ಕಚೇರಿ ಎದುರು ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬೃಹತ್ ಪ್ರತಿಭಟನೆ

ಸುಮಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರಕಾರ ಕಡೆಗಣಿಸಿದೆ. ಅತೀ ಕಡಿಮೆ ವೇತನಕ್ಕೆ ದುಡಿಯುತ್ತಿರುವ ನಮಗೆ ಕನಿಷ್ಠ ೩೧ ಸಾವಿರ ವೇತನ ನಿಗದಿಗೊಳಿಸಬೇಕು. ಅಲ್ಲದೇ ಖಾಸಗಿಯವರಿಗೆ ಗುತ್ತಿಗೆ ನೀಡದಂತೆ, ಇಲಾಖೆಯಿಂದಲೇ ನೇರವಾಗಿ ವೇತನ ಕೊಡಬೇಕು. ಕಾರ್ಮಿಕ ಕಾನೂನಿಯ ಅನ್ವಯ ವಾರಕ್ಕೊಂದು ರಜೆ, ಕೆಲಸ ಸಮಯ ನಿಗದಿಗೊಳಿಸಬೇಕು ಎಂದು ಮನವಿ ಮಾಡಿದರು.

Protest: ಡಿ.ಸಿ.ಕಚೇರಿ ಎದುರು ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬೃಹತ್ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದರು.

Profile Ashok Nayak Jan 20, 2025 11:07 PM

Source : Chikkaballapur Reporter

ಚಿಕ್ಕಬಳ್ಳಾಪುರ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದರು.

ನಗರ ಹೊರವಲಯ ಜಿಲ್ಲಾಡಳಿತ ಭವನದ ಎದುರು ಸೋಮವಾರ ಪ್ರತಿಭಟಿಸಿದ ಸಿಐಟಿಯುಸಿ ಪದಾಧಿಕಾರಿಗಳು ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿಯಪ್ಪ ಕೆ, ಸುಮಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರಕಾರ ಕಡೆಗಣಿಸಿದೆ. ಅತೀ ಕಡಿಮೆ ವೇತನಕ್ಕೆ ದುಡಿಯುತ್ತಿರುವ ನಮಗೆ ಕನಿಷ್ಠ ೩೧ ಸಾವಿರ ವೇತನ ನಿಗದಿಗೊಳಿಸಬೇಕು. ಅಲ್ಲದೇ ಖಾಸಗಿಯವರಿಗೆ ಗುತ್ತಿಗೆ ನೀಡದಂತೆ, ಇಲಾಖೆಯಿಂದಲೇ ನೇರವಾಗಿ ವೇತನ ಕೊಡಬೇಕು. ಕಾರ್ಮಿಕ ಕಾನೂನಿಯ ಅನ್ವಯ ವಾರಕ್ಕೊಂದು ರಜೆ, ಕೆಲಸ ಸಮಯ ನಿಗದಿಗೊಳಿಸಬೇಕು ಎಂದು ಮನವಿ ಮಾಡಿದರು.

ಸರಕಾರದ ವಿವಿಧ ಇಲಾಖೆಗಳ ವಿದ್ಯಾರ್ಥಿ ನಿಲಯಗಳಲ್ಲಿ, ವಸತಿ ಶಾಲೆಗಳಲ್ಲಿ ಸುಮಾರು ೧೫-೨೦ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿ, ಡೇಟಾ ಎಂಟ್ರಿ ಆಪರೇಟರ್‌ಗಳು, ಸಹಾಯಕರು, ಸ್ವಚ್ಛತಾ ಸಿಬ್ಬಂದಿ, ಕಾವಲುಗಾರರು ಸೇರಿದಂತೆ ವಿವಿಧ ಹೊರಗುತ್ತಿಗೆ ನೌಕರರಿಗೆ ಸೂಕ್ತ ಭದ್ರತೆ ಇಲ್ಲವಾಗಿದೆ ಎಂದು ದೂರಿದರು.

ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ನಿಲಯ ಪಾಲಕರು ಸೇರಿದಂತೆ ಅಧಿಕಾರಿ ವರ್ಗದವರು ಅಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ. ಸಿಬ್ಬಂದಿ ಮೇಲೆ ಶೋಷಣೆ ಮಾಡಲಾಗುತ್ತಿದೆ ಎಂದು ಧಿಕ್ಕಾರ ಕೂಗಿದರು.

ಗುತ್ತಿಗೆದಾರರು ಹೊರಗುತ್ತಿಗೆ ನೌಕರರಿಗೆ ನೇಮಕಾತಿ ಅಧೇಶ, ಸಂಬಳದ ಚೀಟಿ, ಗುರುತಿನ ಚೀಟಿ, ಅನುಭವ ಪ್ರಮಾಣ ಪತ್ರ, ಇಎಸ್‌ಐ, ಪಿಎಫ್ ಸಹ ಕೊಡಬೇಕು. ಬೀದರ್ ಜಿಲ್ಲೆಯ ಮಾದರಿಯಲ್ಲಿ ಕಾರ್ಮಿಕ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ಮುಖಂಡ ಮುನಿಕೃಷ್ಣಪ್ಪ ಮಾತನಾಡಿ, ವಿವಿಧ ಇಲಾಖೆಗಳಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಂಖ್ಯೆ ಕಡಿತಗೊಳಿಸುವ ಆದೇಶವನ್ನು ರದ್ದುಗೊಳಿಸಬೇಕು. ೫೦ ಜನ ವಿದ್ಯಾರ್ಥಿಗಳಿಗೆ ಮೂವರು ಸಿಬ್ಬಂದಿಗಳ ಹಿಂದಿನ ಪದ್ಧತಿಯನ್ನು ಮುಂದುವರಿಸಬೇಕು. ಪ್ರತೀ ತಿಂಗಳು ೫ನೇ ತಾರೀಖು ವೇತನ ನೀಡಬೇಕು ಹಾಗೂ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

೧೦ ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ನೌಕರರನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದಡಿ ತರಬೇಕು. ಬಿಸಿಎಂ ಇಲಾಖೆಯಲ್ಲಿ ಕೆಲಸ ಕಳೆದುಕೊಂಡಿರುವ ನೌಕರರನ್ನು ಮರು ನೇಮಕ ಮಾಡಬೇಕು. ಅಡುಗೆ ಸಿಬ್ಬಂದಿಯಿAದ ಶೌಚಾಲಯ ಸ್ವಚ್ಛಗೊಳಿಸುವ ಕೆಲಸವನ್ನು ಮಾಡಿಸಬಾರದು. ನಿಲಯ ಪಾಲಕರು ವಸತಿ ನಿಲಯಗಳಿಗೆ ಅಗತ್ಯವಿರುವ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಸೂಕ್ತ ಪ್ರಮಾಣದಲ್ಲಿ ಒದಗಿಸಬೇಕು. ನಿವೃತ್ತಿ ನಂತರ ನೌಕರರ ಜೀವನ ನಿರ್ವಹ ಣೆಗೆ ೧೦ ಲಕ್ಷ ಪರಿಹಾರ ಕೊಡಬೇಕು ಎಂದು ಮನವಿ ಮಾಡಿದರು.

ಈ ಎಲ್ಲಾ ಬೇಡಿಕೆಗಳನ್ನು ಚರ್ಚಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಲಾಖೆಯ ಅಧಿಕಾರಿಗಳು ಒಳಗೊಂಡಂತೆ ಸಂಘದ ಮುಖಂಡರ ನೇತೃತ್ವದಲ್ಲಿ ಸಭೆಯನ್ನು ಕರೆಯಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ತಿಮ್ಮಣ್ಣ, ಮಂಜುನಾಥ್, ಭಾಗ್ಯಮ್ಮ, ಶಿವಪ್ಪ, ಮುದ್ದಪ್ಪ, ಬಿ ಎನ್ ವೆಂಕಟ ರಮಣ, ಶ್ರೀನಿವಾಸ್, ಸುನಿತಮ್ಮ, ತಬಸಮ್, ನಾರಯನಸ್ವಾಮಿ, ಪ್ರಸನ್ನಕುಮಾರ್, ಶಶಿಕಲಾ, ಪ್ರಮೀಳಮ್ಮ, ಪ್ರಮೀಳಾ, ಆಂಜಿನಪ್ಪ, ಕದುರಪ್ಪ, ಗೌರಮ್ಮ, ರಘುನಾಥ್, ನವೀನ್ ಕುಮಾರ್, ಶಿಲ್ಪಾ ಹಾಗೂ ಇತರರಿದ್ದರು.

ಇದನ್ನೂ ಓದಿ:Chikkaballapur Breaking: ಗ್ರಾಹಕರ ದೂರಿನ ಮೇರೆಗೆ ಆಹಾರ ಸುರಕ್ಷತೆ ಅಧಿಕಾರಿಗಳು ಕೇಕ್‌ವರ್ಲ್ಡ್‌ ಬೇಕರಿ ಮೇಲೆ ದಾಳಿ: ಪರಿಶೀಲನೆ