ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chinthamani News: ಚಿಂತಾಮಣಿ ನಗರದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಿ: ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕೆ ಆರ್ ಎಸ್ ಪಕ್ಷದಿಂದ ಮನವಿ

ಅನಿಯಮಿತ ವಾಹನ ನಿಲುಗಡೆ, ರಸ್ತೆ ಬದಿಯ ಅತಿಕ್ರಮಣ,ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಭಾರಿ ವಾಹನಗಳ ಅವ್ಯವಸ್ಥಿತ ಸಂಚಾರದಿಂದಾಗಿ ಸಾರ್ವಜನಿಕರು ಪ್ರತಿನಿತ್ಯ ತೀವ್ರ ತೊಂದರೆ ಅನು ಭವಿಸುತ್ತಿದ್ದಾರೆ. ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಮಹಿಳೆಯರು ಹಾಗೂ ತುರ್ತು ಸೇವೆಗಳ ವಾಹನಗಳು ರಸ್ತೆ ದಾಟಲು ಮತ್ತು ಸಂಚರಿಸಲು ಹರಸಾಹಸ ಪಡಬೇಕಾಗಿದ್ದು, ಅಪಘಾತಗಳ ಭಯವೂ ಹೆಚ್ಚಾಗಿದೆ

ಚಿಂತಾಮಣಿ: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ವಾಹನ ದಟ್ಟಣೆ ಹಾಗೂ ಅಸ್ತವ್ಯಸ್ತ ಸಂಚಾರ ಸಮಸ್ಯೆಯನ್ನು ನಿಯಂತ್ರಣಕ್ಕೆ ತರುವಂತೆ ಆಗ್ರಹಿಸಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಚಿಂತಾಮಣಿ ತಾಲ್ಲೂಕು ಸಮಿತಿಯು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕುಶಾಲ್ ಚೌಕ್ಸೆ ರವರಿಗೆ ಚಿಂತಾಮಣಿ ನಗರ ಠಾಣೆಯ ಸಬ್'ಇನ್ಸ್ಪೆಕ್ಟರ್ ರಮೇಶ್ ಮುಖಾಂತರ ಮನವಿ ಪತ್ರ ಸಲ್ಲಿಸಿದರು.

ನಗರದ ಪ್ರಮುಖ ರಸ್ತೆಗಳಾದ ಎಂ.ಜಿ.ರಸ್ತೆ, ಚೇಳೂರು ರಸ್ತೆ, ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ರಸ್ತೆ, ಶ್ರೀನಿವಾಸಪುರ ರಸ್ತೆ, ಎಸ್.ಎಲ್.ಎನ್.ಟಾಕೀಸ್ ಮುಂಭಾಗದ ರಸ್ತೆ ಹಾಗೂ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಅನಿಯಮಿತ ವಾಹನ ನಿಲುಗಡೆ, ರಸ್ತೆ ಬದಿಯ ಅತಿಕ್ರಮಣ,ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಭಾರಿ ವಾಹನಗಳ ಅವ್ಯವಸ್ಥಿತ ಸಂಚಾರದಿಂದಾಗಿ ಸಾರ್ವಜನಿಕರು ಪ್ರತಿನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: Chinthamani News: ಸಿಂಗಾಟ ಕದರೇನಹಳ್ಳಿ ದಲಿತ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಕಿರುಕುಳ: ಖಂಡಿಸಿ ಚಿಂತಾಮಣಿ ಡಿಎಸ್ಎಸ್ ನಿಂದ ಪ್ರತಿಭಟನೆ

ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಮಹಿಳೆಯರು ಹಾಗೂ ತುರ್ತು ಸೇವೆಗಳ ವಾಹನಗಳು ರಸ್ತೆ ದಾಟಲು ಮತ್ತು ಸಂಚರಿಸಲು ಹರಸಾಹಸ ಪಡಬೇಕಾಗಿದ್ದು, ಅಪಘಾತಗಳ ಭಯವೂ ಹೆಚ್ಚಾಗಿದೆ ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

ಚಿಂತಾಮಣಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚುವರಿಯಾಗಿ ನಿಯೋಜಿಸಬೇಕು. ಅನಧಿಕೃತ ರಸ್ತೆ ಬದಿಯ ವಾಹನ ನಿಲುಗಡೆ ಹಾಗೂ ಅತಿಕ್ರಮಣಗಳನ್ನು ತೆರವು ಗೊಳಿಸಲು ವಿಶೇಷ ಕಾರ್ಯಾಚರಣೆ ನಡೆಸಬೇಕು. ನಗರದೊಳಗೆ ಭಾರಿ ವಾಹನಗಳ ಪ್ರವೇಶಕ್ಕೆ ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ ನಿಯಂತ್ರಣ ಹೇರಬೇಕು ಎಂದು ಪಕ್ಷದ ಚಿಂತಾಮಣಿ ತಾಲ್ಲೂಕು ಅಧ್ಯಕ್ಷರಾದ ಅಬ್ದುಲ್ ಖಯ್ಯೂಮ್ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಶಿವಾರೆಡ್ಡಿ, ಜಿಲ್ಲಾ ಕಾರ್ಯದರ್ಶಿ ವಿಶ್ವನಾಥ, ತಾಲ್ಲೂಕು ಅಧ್ಯಕ್ಷ ಅಬ್ದುಲ್ ಖಯ್ಯೂಮ್, ತಾಲ್ಲೂಕು ಉಪಾಧ್ಯಕ್ಷ ನಾಗರಾಜ್, ಆಟೋ ಘಟಕ ಅಧ್ಯಕ್ಷ ಮೆಹಬೂಬ್ ಪಾಷಾ, ಚಂದ್ರು,‌ ಸಿದ್ದನಾರಾಯಣಸ್ವಾಮಿ, ಅಫ್ಜಲ್ ಪಾಷಾ, ಕೃಷ್ಣಪ್ಪ, ಆಫ್ರೋಜ್, ‌ಸರ್ದಾರ್,‌ ಮಹಬೂಬ್ ಪಾಷಾ,‌ ಚನ್ನಕೇಶವ ಸೇರಿದಂತೆ ಮತ್ತಿತರರು ಇದ್ದರು.