ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gauribidanur News: ಅಭಿವೃದ್ಧಿಗಿಂತ ಶಾಸಕರಿಗೆ ಪ್ರಚಾರವೇ ಮುಖ್ಯ: ಮಂಜುನಾಥ್ ಆರೋಪ

ಶಾಸಕರ ಬೆಂಬಲಿಗರು ವಿವಿಧ ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳಂತೆ ಕಾರ್ಯನಿರ್ವಹಿಸು ತ್ತಿದ್ದಾರೆ ಎಂಬ ದೂರುಗಳ ಬಗ್ಗೆಯೂ ತನಿಖೆ ಅಗತ್ಯವಿದೆ. ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾದ ಅನುದಾನ, ವಿವಿಧ ಕಾಮಗಾರಿಗಳಿಗೆ ಖರ್ಚಾದ ಮೊತ್ತದ ಸಂಪೂರ್ಣ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು

ಗೌರಿಬಿದನೂರು: ತಾಲೂಕಿನಲ್ಲಿ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ದೊಡ್ಡಮಟ್ಟದ ಪ್ರಚಾರ ಪಡೆಯುತ್ತಿದ್ದರೂ, ಹಲವು ಗ್ರಾಮಗಳಲ್ಲಿ ಮೂಲಸೌಕರ್ಯಗಳ ಸ್ಥಿತಿ ಶೋಚನೀಯವಾಗಿದೆ. ಅಭಿವೃದ್ಧಿಗಿಂತ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹೊಸೂರು ಎಚ್.ವಿ. ಮಂಜುನಾಥ್, ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ(MLA K.H. Puttaswamygowda)ರ ಆಡಳಿತದ ವಿರುದ್ಧ ಆರೋಪಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಹಲವು ಗ್ರಾಮಗಳಲ್ಲಿ ಚರಂಡಿಗಳು ಗಬ್ಬು ನಾರುತ್ತಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಬಡವರ ಕೆಲಸಗಳು ಹಣವಿಲ್ಲದೆ ನಡೆಯುತ್ತಿಲ್ಲ ಎಂಬ ಆರೋಪಗಳಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: Gauribidanur News: ಸ್ವಯಂ ತೆರವುಗೊಳಿಸದಿದ್ದರೆ ಮುನ್ಸೂಚನೆ ಇಲ್ಲದೆ ನಗರಸಭೆಯಿಂದ ಕಾರ್ಯಾಚರಣೆ: ಪೌರಾಯುಕ್ತ ರಮೇಶ್

ಶಾಸಕರ ಬೆಂಬಲಿಗರು ವಿವಿಧ ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳಂತೆ ಕಾರ್ಯನಿರ್ವಹಿಸು ತ್ತಿದ್ದಾರೆ ಎಂಬ ದೂರುಗಳ ಬಗ್ಗೆಯೂ ತನಿಖೆ ಅಗತ್ಯವಿದೆ. ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆ ಯಾದ ಅನುದಾನ, ವಿವಿಧ ಕಾಮಗಾರಿಗಳಿಗೆ ಖರ್ಚಾದ ಮೊತ್ತದ ಸಂಪೂರ್ಣ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳಲ್ಲಿಯೂ ಅಕ್ರಮದ ಆರೋಪಗಳಿದ್ದು, ಕೆಂಕರೇ ಗ್ರಾಮದ ಕೆರೆಗೆ ಸಂಬಂಧಿಸಿದಂತೆ ಮಾಹಿತಿ ಕೇಳಿದರೂ ನೀಡಿಲ್ಲ ಎಂದು ದೂರಿದರು. ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಬಗ್ಗೆಯೂ ತನಿಖೆಯಾಗಬೇಕು ಎಂದರು.

9cbpmm11ok

ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ, ಔಷಧಿ ಹಾಗೂ ಸ್ವಚ್ಛತೆಯ ಕೊರತೆಯಿದ್ದು, ಕಳೆದ ಮೂರು ವರ್ಷಗಳಲ್ಲಿ ಶಾಸಕರು ಎಷ್ಟು ಬಾರಿ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಕಾರ್ಯಕರ್ತರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಸಬ್‌ಇನ್ಸ್‌ಪೆಕ್ಟರ್ ಹರೀಶ್ ಕುಮಾರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡುವು ದಾಗಿ ತಿಳಿಸಿದರು.

“ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ ಎಂದು ಶಾಸಕ ಪುಟ್ಟಸ್ವಾಮಿಗೌಡರು ಘೋಷಿಸಲಿ. ಇಲ್ಲವಾದರೆ ಕಾಂಗ್ರೆಸ್ ಹೆಸರಿನಲ್ಲಿ ದ್ವಂದ್ವ ರಾಜಕೀಯ ಮಾಡಬಾರದು” ಎಂದು ಮಂಜುನಾಥ್ ಸವಾಲು ಹಾಕಿದರು.