ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಎಚ್.ಐ.ವಿ ಸೋಂಕು ಹರಡುವಿಕೆ ತಡೆಗಟ್ಟಲು ಜಾಗೃತಿ ಮೂಡಿಸಿ: ನ್ಯಾ.ಟಿ.ಪಿ.ರಾಮಲಿಂಗೇಗೌಡ

ಆರೋಗ್ಯವೇ ಭಾಗ್ಯ ಎಂದು ಕರೆಯಲಾಗುತ್ತದೆ. ಏಕೆಂದರೆ, ಆರೋಗ್ಯವಿದ್ದರೆ ಏನನ್ನಾದರೂ ಸಾಧಿಸ ಬಹುದು. ಆರೋಗ್ಯವಿಲ್ಲದಿದ್ದರೆ ಏನೇ ಸಾಧಿಸಿದರು ಪ್ರಯೋಜನವಿಲ್ಲ ಅದ್ದರಿಂದ ಸಮಾಜದಲ್ಲಿ ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡುವುದು ಆಡಳಿತಾಂಗದ ಮುಖ್ಯ ಕಾರ್ಯವಾಗಿರುತ್ತದೆ. ಅದ್ದ ರಿಂದ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ಕೆಲಸವನ್ನು ಪ್ರತಿ ವರ್ಷ ವಿಶ್ವಾ ದ್ಯಂತ ಮಾಡಲಾಗುತ್ತದೆ

ಎಚ್.ಐ.ವಿ ಸೋಂಕು ಹರಡುವಿಕೆ ತಡೆಗಟ್ಟಲು ಜಾಗೃತಿ ಮೂಡಿಸಿ

ಎಚ್ ಐ ವಿ ಸೋಂಕು ಹಾಗೂ ಏಡ್ಸ್ ಕಾಯಿಲೆಯನ್ನು ತಡೆಗಟ್ಟಲು ಜನಸಾಮಾನ್ಯರಲ್ಲಿ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಮುಖ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಟಿ.ಪಿ ಪಿ.ರಾಮಲಿಂಗೇಗೌಡ ತಿಳಿಸಿದರು. -

Ashok Nayak
Ashok Nayak Dec 2, 2025 10:59 AM

ಚಿಕ್ಕಬಳ್ಳಾಪುರ: ಎಚ್ ಐ ವಿ ಸೋಂಕು ಹಾಗೂ ಏಡ್ಸ್ ಕಾಯಿಲೆಯನ್ನು ತಡೆಗಟ್ಟಲು ಜನ ಸಾಮಾನ್ಯರಲ್ಲಿ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಮುಖ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಟಿ.ಪಿ ಪಿ.ರಾಮಲಿಂಗೇಗೌಡ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ನಂದಿ ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೆಡ್ ರಿಬ್ಬನ್ ಕ್ಲಬ್, ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಅಂಬೇಡ್ಕರ್  ಭವನದಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಪುಟ್ಟತಿಮ್ಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಂಚನಬಲೆ ಸದಾಶಿವ ನೆರವು

ಆರೋಗ್ಯವೇ ಭಾಗ್ಯ ಎಂದು ಕರೆಯಲಾಗುತ್ತದೆ. ಏಕೆಂದರೆ, ಆರೋಗ್ಯವಿದ್ದರೆ ಏನನ್ನಾದರೂ ಸಾಧಿಸ ಬಹುದು. ಆರೋಗ್ಯವಿಲ್ಲದಿದ್ದರೆ ಏನೇ ಸಾಧಿಸಿದರು ಪ್ರಯೋಜನವಿಲ್ಲ ಅದ್ದರಿಂದ ಸಮಾಜದಲ್ಲಿ ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡುವುದು ಆಡಳಿತಾಂಗದ ಮುಖ್ಯ ಕಾರ್ಯವಾಗಿರುತ್ತದೆ. ಅದ್ದರಿಂದ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ಕೆಲಸವನ್ನು ಪ್ರತಿ ವರ್ಷ ವಿಶ್ವಾದ್ಯಂತ ಮಾಡಲಾಗುತ್ತದೆ “ಎಚ್.ಐ.ವಿ ಸೋಂಕು ಹಾಗೂ ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿಸುವುದು” ಈ ವರ್ಷದ ಘೋಷವಾಕ್ಯವಾಗಿದೆ ಅಡೆತಡೆಗಳನ್ನು ನಿಯಂತ್ರಿಸಲು ಜನಸಾಮಾನ್ಯರಲ್ಲಿ ಅರಿವು ಮೂಡಿಸು ವುದು ಬಹಳ ಅಗತ್ಯವಾಗಿದೆ.ಒಳ್ಳೆಯ ಆರೋಗ್ಯ ಹೊಂದಿರಬೇಕು ಎಂದರೆ ಕೆಟ್ಟ ಹವ್ಯಾಸಗಳನ್ನು ಬಿಟ್ಟು ಒಳ್ಳೆಯ ದಾರಿಯಲ್ಲಿ ನಡೆಯಬೇಕು ಎಂದು ತಿಳಿಸಿದರು.

BNG 22

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಮಹೇಶ್ ಕುಮಾರ್ ಮಾತನಾಡಿ, ಏಡ್ಸ್ ರೋಗವು ಜಿಲ್ಲೆಯ ಬಾಗೇಪಲ್ಲಿ, ಗೌರಿಬಿದನೂರು ಮತ್ತು ಚಿಂತಾಮಣಿ ತಾಲೂಕಿನ ಗಡಿಭಾಗದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ್ಲಲಿ 2025 ಏಪ್ರಿಲ್ ನಿಂದ ಅಕ್ಟೋಬರ್ ವರೆಗೆ 223 ಎಚ್.ಐ.ವಿ ಸೊಂಕಿತ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಕಳೆದ 2009 ವರ್ಷದಿಂದ 2025 ಅಕ್ಟೋಬರ್ ಅಂತ್ಯದವರೆಗೂ ಬರೋಬ್ಬರಿ ೭,೬೦೩ ಮಂದಿ ಎಚ್ ಐವಿ ಸೋಂಕಿತರು ಪತ್ತೆ ಆಗಿದ್ದಾರೆ.

೩,೬೨೭ ಮಂದಿ ಪ್ರಸ್ತುತವೂ ಚಿಕಿತ್ಸೆ ಪಡೆಯುತ್ತಿದ್ದಾರೆ. ೨,೩೧೪ ಮಂದಿ ಮರಣ ಹೊಂದಿದ್ದರೆ, ೬೮೯ ರೋಗಿಗಳು ಹೊರ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ೧೮ ರಿಂದ ೪೫ರ ವಯಸ್ಕರಲ್ಲಿ ಹೆಚ್ಚು ಎಚ್ ಐವಿ ಸೋಂಕು  ದೃಢಪಟ್ಟಿದೆ . ಅನೇಕ ಅರಿವು ಮೂಡಿಸುವ ಕಾರ್ಯಕ್ರಮಗಳು ಮಾಡುವ ಮೂಲಕ ಕಳೆದ ವರ್ಷಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಎಚ್ ಐವಿ ರೋಗಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ ಎಂದು ತಿಳಿಸಿದರು.

ಏಡ್ಸ್ ರೋಗವು ಬಹುತೇಕ ಅಸುರಕ್ಷಿತ ಲೈಂಗಿಕ ಕ್ರಿಯೆ ಮೂಲಕ ಹೆಚ್ಚಾಗಿ ಹರಡುತ್ತದೆ ಹಾಗೂ ಸೋಂಕಿತ ಗರ್ಭಿಣಿಯರಿಂದ ಶಿಶುಗಳಿಗೂ ಹರಡುತ್ತದೆ. ಅಸುರಕ್ಷಿತ ಲೈಂಗಿಕ ಸಂಪರ್ಕ, ಒಬ್ಬರು ಬಳಸಿದ ಸೂಜಿ, ಕತ್ತರಿಯನ್ನು ಇನ್ನೊಬ್ಬರು ಬಳಸಿದಾಗ, ಸ್ತನ್ಯಪಾನದಿಂದ ಹೀಗೆ ಮುಂತಾದ ಕಾರಣಗಳಿಂದ ಏಡ್ಸ್ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುತ್ತದೆ.. ಏಡ್ಸ್ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಮೂಡಿಸಲಾಗುತ್ತಿದೆ ಎಂದರು.

ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪಾ ಅವರು 2025ರ ವಿಶ್ವ ಏಡ್ಸ್ ದಿನದ ಘೋಷವಾಕ್ಯವಾದ “ ಹೆಚ್.ಐ.ವಿ ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿ ಸೋಣ" ಎಂಬ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ವೇಳೆ, ಏಡ್ಸ್ ನ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮಾಲನಾಧಿಕಾರಿ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾ ಧಿಕಾರಿ ಡಾ.ಡಿ.ಟಿ ಉಮಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಅಭಿಲಾಷ್ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು ವಿದ್ಯಾರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿ ಗಳು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.