ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Rajiv Gowda granted conditional bail :ಬೆದರಿಕೆ ಪ್ರಕರಣದ ಬೆನ್ನಲ್ಲೇ ರಾಜೀವ್ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು

ರಾಜೀವ್ ಗೌಡ ಪರವಾಗಿ ಹಿರಿಯ ವಕೀಲರಾದ ವಿವೇಕ್ ಸುಬ್ಬಾರೆಡ್ಡಿ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಆರೋಪ ರಾಜಕೀಯ ಪ್ರೇರಿತವಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಆರೋಪಿ ಸಿದ್ಧನಿದ್ದಾರೆ ಎಂದು ಅವರು ನ್ಯಾಯಾಲಯದ ಗಮನ ಸೆಳೆದರು. ಸದರಿ ಪ್ರಕರಣದಲ್ಲಿ ಯಾವುದೇ ನೇರ ಸಾಕ್ಷ್ಯಗಳಿಲ್ಲ, ಹೀಗಾಗಿ ಜಾಮೀನು ನಿರಾಕರಿಸುವ ಅಗತ್ಯವಿಲ್ಲ

ಜಾಮೀನು ಪಡೆದು ನ್ಯಾಯಾಲಯದಿಂದ ಹೊರ ಬರುತ್ತಿರುವ ರಾಜೀವ್‌ಗೌಡ

ಶಿಡ್ಲಘಟ್ಟ: ನಗರಸಭೆ ಪೌರಾಯುಕ್ತೆ ಅಮೃತ.ಜಿ. ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಜ.೨೬ ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಶಿಡ್ಲಘಟ್ಟದ ಜೆಎಂಎಫ್‌ಸಿ ನ್ಯಾಯಾಲಯವು ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದೆ.

ಜಾಮೀನು ಆದೇಶ ನೀಡುವ ಸಂದರ್ಭದಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆ,ವಿಜಯೋತ್ಸವ ಅಥವಾ ಸಾರ್ವಜನಿಕ ಗದ್ದಲಕ್ಕೆ ಅವಕಾಶ ನೀಡಬಾರದು ಎಂದು ನ್ಯಾಯಾಧೀಶ ಮಹಮ್ಮದ್ ರೋಷನ್ ಶಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜೀವ್ ಗೌಡ ಪರವಾಗಿ ಹಿರಿಯ ವಕೀಲರಾದ ವಿವೇಕ್ ಸುಬ್ಬಾರೆಡ್ಡಿ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಆರೋಪ ರಾಜಕೀಯ ಪ್ರೇರಿತವಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಆರೋಪಿ ಸಿದ್ಧನಿದ್ದಾರೆ ಎಂದು ಅವರು ನ್ಯಾಯಾಲಯದ ಗಮನ ಸೆಳೆದರು. ಸದರಿ ಪ್ರಕರಣದಲ್ಲಿ ಯಾವುದೇ ನೇರ ಸಾಕ್ಷ್ಯಗಳಿಲ್ಲ, ಹೀಗಾಗಿ ಜಾಮೀನು ನಿರಾಕರಿಸುವ ಅಗತ್ಯವಿಲ್ಲ ಎಂದು ವಾದಿಸಿದರು.

ಇದನ್ನೂ ಓದಿ: Rajiv Gowda Threatening case: ಧಮ್ಕಿ ಪ್ರಕರಣ: 14 ದಿನ ರಾಜೀವ್ ಗೌಡ ನ್ಯಾಯಾಂಗ ಬಂಧನ: ಪೊಲೀಸ್ ಕಸ್ಟಡಿ ಅರ್ಜಿ ವಜಾ

ಎರಡೂ ಪಕ್ಷಗಳ ವಾದ–ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಶರತ್ತು ಬದ್ಧ ಜಾಮೀ ನನ್ನು ಮಂಜೂರು ಮಾಡಿತು. ಜಾಮೀನಿನೊಂದಿಗೆ ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಗಳಿಗೆ ಅಡ್ಡಿಪಡಿಸಬಾರದು ಹಾಗೂ ಪ್ರಕರಣ ಸಂಬಂಧ ಯಾವುದೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು ಎಂಬಂತೆ ಹಲವು ಷರತ್ತುಗಳನ್ನು ವಿಧಿಸಿದೆ.

ಜೊತೆಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಈ ಬೆಳವಣಿಗೆ ಶಿಡ್ಲಘಟ್ಟ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು,ಮುಂದಿನ ಕಾನೂನು ಪ್ರಕ್ರಿಯೆಗಳತ್ತ ಎಲ್ಲರ ಗಮನ ನೆಟ್ಟಿದೆ.