ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ರಕ್ಷಾ ಬಂಧನ ಸಹೋದರತ್ವ, ಪ್ರೀತಿ–ವಿಶ್ವಾಸದ ಪ್ರತೀಕ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ

ಪುರಾತನ ಕಾಲದಿಂದಲೂ ರಕ್ಷಾ ಬಂಧನದ ಆಚರಣೆ ನಡೆದುಕೊಂಡು ಬಂದಿದೆ. ಶ್ರೀಕೃಷ್ಣ ಮತ್ತು ದ್ರೌಪದಿಯ ಪ್ರಸಂಗವನ್ನು ಉಲ್ಲೇಖಿಸಿದ ಅವರು, ಪರಸ್ಪರರ ಕಷ್ಟಕ್ಕೆ ಸ್ಪಂದಿಸುವುದು, ರಕ್ಷಣೆ ನೀಡು ವುದು ಹಾಗೂ ಸಹೋದರತ್ವದ ಭಾವನೆಯನ್ನು ಬೆಳೆಸುವುದು ರಕ್ಷಾ ಬಂಧನದ ಆಶಯ ವಾಗಿದೆ. ಈ ಹಬ್ಬದ ಆಚರಣೆಯನ್ನು ಕೇವಲ ಸಂಪ್ರದಾಯಕ್ಕೆ ಸೀಮಿತಗೊಳಿಸದೆ, ಸಮಾಜದಲ್ಲಿ ಪರಸ್ಪರ ಗೌರವ, ಸಹಕಾರ ಮತ್ತು ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಸಂಕಲ್ಪವಾಗಿ ಆಚರಿಸಬೇಕು

ರಕ್ಷಾ ಬಂಧನವು ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಮಹತ್ವ ಹೊಂದಿದ್ದು, ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ ಹಾಗೂ ರಕ್ಷಣೆಯ ಸಂಕೇತವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ತಿಳಿಸಿದರು.

ಚಿಕ್ಕಬಳ್ಳಾಪುರ : ರಕ್ಷಾ ಬಂಧನವು ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಮಹತ್ವ ಹೊಂದಿದ್ದು, ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ ಹಾಗೂ ರಕ್ಷಣೆಯ ಸಂಕೇತವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ತಿಳಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ವೈದ್ಯಕೀಯ ಇಲಾಖೆ ಹಾಗೂ ಆರ್ಯವೈಶ್ಯ ಮಂಡಳಿ ಮಹಿಳಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ರಕ್ಷಾ ಬಂಧನ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಮಾಜಿ ಸೈನಿಕನಿಗೆ ಲಂಚದ ಬೇಡಿಕೆ ಆರೋಪ; ತಾಲೂಕು ಕಚೇರಿ ಮುಂದೆ ಅಸ್ವಸ್ಥ, ಸ್ಥಿತಿ ಚಿಂತಾಜನಕ

ಪುರಾತನ ಕಾಲದಿಂದಲೂ ರಕ್ಷಾ ಬಂಧನದ ಆಚರಣೆ ನಡೆದುಕೊಂಡು ಬಂದಿದೆ. ಶ್ರೀಕೃಷ್ಣ ಮತ್ತು ದ್ರೌಪದಿಯ ಪ್ರಸಂಗವನ್ನು ಉಲ್ಲೇಖಿಸಿದ ಅವರು, ಪರಸ್ಪರರ ಕಷ್ಟಕ್ಕೆ ಸ್ಪಂದಿಸುವುದು, ರಕ್ಷಣೆ ನೀಡುವುದು ಹಾಗೂ ಸಹೋದರತ್ವದ ಭಾವನೆಯನ್ನು ಬೆಳೆಸುವುದು ರಕ್ಷಾ ಬಂಧನದ ಆಶಯ ವಾಗಿದೆ. ಈ ಹಬ್ಬದ ಆಚರಣೆಯನ್ನು ಕೇವಲ ಸಂಪ್ರದಾಯಕ್ಕೆ ಸೀಮಿತಗೊಳಿಸದೆ, ಸಮಾಜದಲ್ಲಿ ಪರಸ್ಪರ ಗೌರವ, ಸಹಕಾರ ಮತ್ತು ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಸಂಕಲ್ಪವಾಗಿ ಆಚರಿಸಬೇಕು ಎಂದು ಹೇಳಿದರು.

ಕಾನೂನು ಅರಿವು ಕಾರ್ಯಕ್ರಮದ ಮೂಲಕ ಮಹಿಳೆಯರು ತಮ್ಮ ಹಕ್ಕುಗಳು ಹಾಗೂ ಕಾನೂನು ರಕ್ಷಣೆಯ ಕುರಿತು ಅರಿವು ಪಡೆಯಬೇಕು. ಕಾನೂನಿನ ಅರಿವು ಹೊಂದಿರುವುದು ಮಹಿಳಾ ಸಬಲೀಕರಣದ ಪ್ರಮುಖ ಹೆಜ್ಜೆಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ ತಿಳಿಸಿದರು.

28cbpm13pp

ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟುವ ಜತೆಗೆ, ಸಂಕಷ್ಟಕ್ಕೆ ಒಳಗಾದವರಿಗೆ ಕಾನೂನು ನೆರವು ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸದಾ ಬದ್ಧವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹೇಳಿದರು.

ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ನಡೆದ ಸಂದರ್ಭದಲ್ಲಿ ಯಾವುದೇ ಭಯ ಅಥವಾ ಆತಂಕಕ್ಕೆ ಒಳಗಾಗದೆ ಪೊಲೀಸರನ್ನು ನೇರವಾಗಿ ಸಂಪರ್ಕಿಸಬೇಕು. ಅವರ ನೆರವಿಗೆ ಪೊಲೀಸ್ ಇಲಾಖೆ ಸದಾ ಸಿದ್ಧವಿದ್ದು, ಅಗತ್ಯ ರಕ್ಷಣೆ ಹಾಗೂ ಕಾನೂನು ನೆರವು ಕಲ್ಪಿಸಲಾಗುವುದು. ಸಮಾಜ ದಲ್ಲಿ ಮಹಿಳೆಯರು ಸುರಕ್ಷಿತವಾಗಿ ಬದುಕುವ ವಾತಾವರಣ ನಿರ್ಮಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಆರ್ಯವೈಶ್ಯ ಮಂಡಳಿ ಮಹಿಳಾ ಸಂಘದ ಸದಸ್ಯರು ನ್ಯಾಯಾಧೀಶರು, ವಕೀಲರು ಹಾಗೂ ವೈದ್ಯರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದರು. ಈ ಮೂಲಕ ಸಮಾಜದಲ್ಲಿ ಸಹೋದರತ್ವ, ಪರಸ್ಪರ ಗೌರವ ಹಾಗೂ ರಕ್ಷಣೆಯ ಸಂದೇಶ ಸಾರಲಾಯಿತು.

ನ್ಯಾಯಾಧೀಶರಾದ ಸಿದ್ದಣ್ಣ ಬಿ.ಹಂದ್ರಾಳ್, ಉಮೇಶ್ ಹೆಚ್.ಕೆ., ಶಿಲ್ಪ, ಬಿ.ಕೆ.ವಿ.ಅಭಿಲಾಷ್, ವೆಂಕಟೇಶ್, ವೈದ್ಯಾಧಿಕಾರಿ ಡಾ.ಜಿ.ಎಸ್.ಸಿದ್ದಲಿಂಗಪ್ಪ, ಆರ್ಯವೈಶ್ಯ ಮಂಡಳಿ ಮಹಿಳಾ ಸಂಘದ ಸದಸ್ಯರು ಸೇರಿದಂತೆ ವಕೀಲರು, ಪೊಲೀಸ್ ಹಾಗೂ ವೈದ್ಯಕೀಯ ಇಲಾಖೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.