ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chinthamani News: ಎಲ್ಲಿಯೂ ಕಾಣದ ರ‍್ಯಾಂಪ್ ವ್ಯವಸ್ಥೆ ; ಅಸಡ್ಡೆ ಪ್ರಶ್ನಿಸಿ ಮುಖಂಡ ಕಿರಣ್ ನಾಯಕ್ ಆಕ್ರೋಶ

ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ರ‍್ಯಾಂಪ್ ವ್ಯವಸ್ಥೆ ಇರಬೇಕು. ಇದರಿಂದಾಗಿ ದೈಹಿಕ ನ್ಯೂನತೆಯಿಂದ ಕೂಡಿದ ಅಂಗವಿಕಲರು ಸರಾಗವಾಗಿ ಕಚೇರಿಗಳನ್ನು ತಲುಪಲು ಸಾಧ್ಯ ವಾಗುತ್ತದೆ. ಆದರೆ,ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಈ ಸೌಲಭ್ಯವೇ ಇಲ್ಲ.ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ರ‍್ಯಾಂಪ್ ವ್ಯವಸ್ಥೆ ಚಾಲ್ತಿಗೆ ಬರುತ್ತದೆ.

ತಾಲ್ಲೂಕಿನ ಉಪ್ಪಾರಪೇಟೆ ಗ್ರಾಮ ಪಂಚಾಯಿತಿಯಲ್ಲಿ ಅಂಗವಿಕಲರಿಗೆ ರ‍್ಯಾಂಪ್ ವ್ಯವಸ್ಥೆ ಕಲ್ಪಿಸದ ಕಾರಣ ಕಾರಣ ಆಕ್ರೋಶಗೊಂಡ ಅಂಗವಿಕಲರು ಪಂಚಾಯತಿ ಎದುರುಗಡೆ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ ಘಟನೆ ಗುರುವಾರ ನಡೆಯಿತು.

ಚಿಂತಾಮಣಿ : ತಾಲ್ಲೂಕಿನ ಉಪ್ಪಾರಪೇಟೆ ಗ್ರಾಮ ಪಂಚಾಯಿತಿಯಲ್ಲಿ ಅಂಗವಿಕಲರಿಗೆ ರ‍್ಯಾಂಪ್ ವ್ಯವಸ್ಥೆ ಕಲ್ಪಿಸದ ಕಾರಣ ಕಾರಣ ಆಕ್ರೋಶಗೊಂಡ ಅಂಗವಿಕಲರು ಪಂಚಾಯತಿ ಎದುರುಗಡೆ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ ಘಟನೆ ಗುರುವಾರ ನಡೆಯಿತು.

ಅಂಗವಿಕಲರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎಂಬುದು ಬರೀಬಾಯಿ ಮಾತಿಗೆ ಸೀಮಿತವಾಗಿದೆ. ಸರ್ಕಾರ ಅಂಗವಿಕಲರಿಗಾಗಿ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದರೂ ಸಮರ್ಪಕವಾಗಿ ತಲುಪುತ್ತಿಲ್ಲ. ಇದರಿಂದ ಸೌಲಭ್ಯಕ್ಕಾಗಿ ಬಲಾಡ್ಯರೊಂದಿಗೆ ಪರದಾಡಬೇಕಾದ ಸ್ಥಿತಿ ಏರ್ಪಟ್ಟಿದೆ.ಅಂಗವಿಕಲ ಎಂದು ಅನುಕಂಪ ತೋರಿಸುವವರೇ ಹೆಚ್ಚು.ಆದರೆ, ಸರ್ಕಾರಿ ಸೌಲಭ್ಯ ಒದಗಿಸಿಕೊಡುವಲ್ಲಿ ಆಡಳಿತಯಂತ್ರ ಹಿಂದೆ ಇದೆ ಎನ್ನುವುದು ಅಂಗವಿಕಲ ಸಮುದಾಯದ ಆರೋಪವಾಗಿದೆ.

ಇದನ್ನೂ ಓದಿ: Chikkaballapur News: ಚೌದರಿ ಗಾರ್ಮೆಂಟ್ಸ್ ನಿರ್ವಾಹಕರ ವಿರುದ್ಧ ಮಹಿಳಾ ಕಾರ್ಮಿಕರು ಜಟಾಪಟಿ

ಈ ವೇಳೆ ಮಾತನಾಡಿದ ವಿಕಲಚೇತನ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಿರಣ ನಾಯಕ್ ಮಾತನಾಡಿ ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ರ‍್ಯಾಂಪ್ ವ್ಯವಸ್ಥೆ ಇರಬೇಕು. ಇದರಿಂದಾಗಿ ದೈಹಿಕ ನ್ಯೂನತೆಯಿಂದ ಕೂಡಿದ ಅಂಗವಿಕಲರು ಸರಾಗವಾಗಿ ಕಚೇರಿಗಳನ್ನು ತಲುಪಲು ಸಾಧ್ಯವಾಗುತ್ತದೆ.ಆದರೆ,ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಈ ಸೌಲಭ್ಯವೇ ಇಲ್ಲ.ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ರ‍್ಯಾಂಪ್ ವ್ಯವಸ್ಥೆ ಚಾಲ್ತಿಗೆ ಬರುತ್ತದೆ.ಆದಾದ ನಂತರ ಮತ್ತೆ ಮೂಲೆಗುಂಪು ಆಗುತ್ತಿದೆ.ಇದರಿಂದ ಅಂಗವಿಕಲರು ಮೆಟ್ಟಿಲು ಗಳನ್ನು ಹತ್ತಿ ಕಚೇರಿ ತಲುಪಲು ಮತ್ತೊಬ್ಬರ ಸಹಾಯವನ್ನು ಪಡೆಯುವ ಅನಿವಾರ್ಯತೆ ಇದೆ.

ಐದರಿಂದ ಆರು ಮೆಟ್ಟಿಲು ಇರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಅಂಗವಿಕಲರು ಪ್ರವೇಶ ಮಾಡಲು ಬಹಳಷ್ಟು ಕಷ್ಟ ಪಡಬೇಕಾಗುತ್ತದೆ.ಅದ್ದರಿಂದ ಉಪ್ಪಾರಪೇಟೆ ಸೇರಿದಂತೆ ಚಿಂತಾಮಣಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ರ‍್ಯಾಂಪ್ ವ್ಯವಸ್ಥೆ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಾಲ್ಲೂಕ್ ಪಂಚಾಯತಿ ಎದುರುಗಡೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರಿಜ್ವಾನ್ ಬಾಷಾ, ರಿಹಾನ ತಾಜ್,ನೂರ್ ಜಾನ್, ರಾಮಕೃಷ್ಣ, ಮಂಜುಳಾ, ಮೊಹಮ್ಮದ್ ಅಜರುದ್ದೀನ್,ಮುನಿಯಪ್ಪ,ನಿಖಿಲ್, ಮುನೇಂದ್ರ,ಅAಜಮ್ಮ,ಕವಿತಾ, ಹರ್ಷಿತ್ ಸೇರಿದಂತೆ ಮತ್ತಿತರರು ಇದ್ದರು.