ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLA Kothur Manjunath: ರೈತರ ನೆರವಿಗೆ 40 ಕೋಟಿ ಸಾಲ ನೀಡಲು ಸಿದ್ಧ: ಕೊತ್ತೂರು ಮಂಜುನಾಥ್

ಗ್ರಾಮೀಣ ಭಾಗದ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ಸಕಾಲದಲ್ಲಿ ಸಾಲ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು. ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು 40 ಕೋಟಿ ರೂ. ಸಾಲ ನೀಡಲು ಸಿದ್ಧನಿದ್ದೇನೆ. ಈ ಸಂಬಂಧ ಬ್ಯಾಂಕ್ ಸಿಬ್ಬಂದಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು

ರೈತರ ನೆರವಿಗೆ 40 ಕೋಟಿ ಸಾಲ ನೀಡಲು ಸಿದ್ಧ: ಕೊತ್ತೂರು ಮಂಜುನಾಥ್

-

Profile
Ashok Nayak Nov 18, 2026 1:05 AM

ಗುಡಿಬಂಡೆ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಆರ್ಥಿಕ ಅಭಿವೃದ್ಧಿಗೆ ಡಿಸಿಸಿ ಬ್ಯಾಂಕ್ ಮೂಲಕ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸುವುದು ತಮ್ಮ ಗುರಿಯಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೊತ್ತೂರು ಮಂಜುನಾಥ್( MLA Kothur Manjunath) ತಿಳಿಸಿದರು.

ಪಟ್ಟಣದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಮಾತನಾಡಿದರು.

ಗ್ರಾಮೀಣ ಭಾಗದ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ಸಕಾಲದಲ್ಲಿ ಸಾಲ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು. ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು 40 ಕೋಟಿ ರೂ. ಸಾಲ ನೀಡಲು ಸಿದ್ಧನಿದ್ದೇನೆ. ಈ ಸಂಬಂಧ ಬ್ಯಾಂಕ್ ಸಿಬ್ಬಂದಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ: Gudibande News: ಜಾವೆಲಿನ್ ಥ್ರೋನಲ್ಲಿ ರಾಜ್ಯಮಟ್ಟಕ್ಕೆ ಆದರ್ಶ ಆಯ್ಕೆ; ಹಲವು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಅರ್ಹತೆ

ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಪಿ. ರಾಮನಾಥ್ ಮಾತನಾಡಿ, ಬರಗಾಲದ ಹಿನ್ನೆಲೆಯಲ್ಲಿ ರೈತರ ಸಾಲ ಮರುಪಾವತಿಗೆ ಕಾಲಾವಕಾಶ ನೀಡಬೇಕು ಹಾಗೂ ಈ ಕುರಿತು ಸದನದಲ್ಲಿ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದ್ದೇವೆ. ಗುಡಿಬಂಡೆ ತಾಲೂಕಿಗೆ ಪ್ರಸ್ತುತ ನೀಡಲಾಗುತ್ತಿರುವ 15 ಕೋಟಿ ರೂ. ಸಾಲದ ಮೊತ್ತವನ್ನು 30 ಕೋಟಿ ರೂ.ಗೆ ಹೆಚ್ಚಿಸಬೇಕು. ಅನಗತ್ಯ ನಿಬಂಧನೆಗಳಿಲ್ಲದೆ ರೈತರಿಗೆ ಸಾಲ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಡಿಸಿಸಿ ಬ್ಯಾಂಕ್‌ನ ಹಿಂದಿನ ಹಗರಣದ ತನಿಖೆಯನ್ನೂ ಚುರುಕುಗೊಳಿಸಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಡಿಸಿಸಿ ಬ್ಯಾಂಕ್ ಗುಡಿಬಂಡೆ ನಿರ್ದೇಶಕ ಎಚ್. ಮಂಜುನಾಥರೆಡ್ಡಿ ಸೇರಿದಂತೆ ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.