ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

B N Ravikumar: ಮೀಸಲಾತಿ ಲೆಕ್ಕಾಚಾರ ಏನೇ ಇರಲಿ, ಗೆಲುವು ನಮ್ಮದೇ: ಶಾಸಕ ಬಿ.ಎನ್.ರವಿಕುಮಾರ್

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏಳು ಜಿಲ್ಲಾ ಪಂಚಾಯಿತಿ ಹಾಗೂ 17 ತಾಲೂಕು ಪಂಚಾಯಿತಿ ಕ್ಷೇತ್ರಗಳಿವೆ. ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬೂತ್ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಲಾಗುವುದು. ಅಭ್ಯರ್ಥಿಗಳ ಆಯ್ಕೆಯಲ್ಲಿ ಆಯಾ ಕ್ಷೇತ್ರಗಳ ಸ್ಥಳೀಯ ಮುಖಂಡರಿಗೆ ಪ್ರಮುಖ ಜವಾಬ್ದಾರಿ ನೀಡಲಾಗುವುದು ಎಂದರು.

ಶಿಡ್ಲಘಟ್ಟ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಯಾವುದೇ ವರ್ಗಕ್ಕೆ ಮೀಸಲಾತಿ ನಿಗದಿಯಾರೂ ಶಿಡ್ಲಘಟ್ಟ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್(MLA B N Ravikumar) ಹೇಳಿದರು.

ತಾಲೂಕಿನ ಮೇಲೂರು ಗ್ರಾಮದ ತಮ್ಮ ಸ್ವಗೃಹದಲ್ಲಿ ವಿಜಯದಶಮಿ ಅಂಗವಾಗಿ ಆಯುಧ ಪೂಜೆ ನೆರವೇರಿಸಿ, ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಕ್ಷೇತ್ರದ ಜನತೆಗೆ ಹಬ್ಬದ ಶುಭಾಶಯ ಕೋರಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆ ಕುರಿತು ವಿವರಿಸಿದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏಳು ಜಿಲ್ಲಾ ಪಂಚಾಯಿತಿ ಹಾಗೂ 17 ತಾಲೂಕು ಪಂಚಾಯಿತಿ ಕ್ಷೇತ್ರಗಳಿವೆ. ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬೂತ್ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಲಾಗುವುದು. ಅಭ್ಯರ್ಥಿಗಳ ಆಯ್ಕೆಯಲ್ಲಿ ಆಯಾ ಕ್ಷೇತ್ರಗಳ ಸ್ಥಳೀಯ ಮುಖಂಡರಿಗೆ ಪ್ರಮುಖ ಜವಾಬ್ದಾರಿ ನೀಡಲಾಗುವುದು ಎಂದರು.

ಇದನ್ನೂ ಓದಿ: MLA B N Ravikumar: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಎನ್‌ಡಿಎ ಮುಖಂಡರ ಸಭೆ: ಸಂಘಟಿತ ಹೋರಾಟಕ್ಕೆ ಶಾಸಕ ಬಿ.ಎನ್.ರವಿಕುಮಾರ್ ಕರೆ

ಮೀಸಲಾತಿ ಯಾವುದೇ ರೀತಿಯಲ್ಲಿ ಪ್ರಕಟವಾದರೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಂಘಟಿತ ಪ್ರಯತ್ನದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ. ಸ್ಥಳೀಯ ಮುಖಂಡರ ನಿರ್ಧಾರ ಹಾಗೂ ಕಾರ್ಯಕರ್ತರ ಶ್ರಮ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ತಿಳಿಸಿದರು.

ಮೀಸಲಾತಿ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ರಾಜಕೀಯ ಲೆಕ್ಕಾಚಾರ ನಡೆಸುತ್ತಿದೆ ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದ ಅವರು, ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಶಕ್ತಿಯ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದರು.

ಈ ಸಂದರ್ಭದಲ್ಲಿ ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ತಾದೂರು ರಘು, ಹನುಮಂತಪುರ ನವೀನ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಲಕ್ಷ್ಮಿಪತಿ, ಚಂದ್ರಶೇಖರ್ ಹಾಗೂ ಗಜೇಂದ್ರ ಉಪಸ್ಥಿತರಿದ್ದರು.

25 ವರ್ಷಗಳ ಪಕ್ಷದ ಸೇವೆಗೆ ಬೆಂಬಲ ನೀಡಿ: ರವಿಕುಮಾರ್

ಆಗ್ನೇಯ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್(K M Suresh) ಅವರು ಕಳೆದ 25 ವರ್ಷಗಳಿಂದ ಬಿಜೆಪಿಯ ಕಾರ್ಯಕರ್ತರಾಗಿ ಪಕ್ಷದ ಸಂಘಟನೆಗೆ ಶ್ರಮಿಸಿದ್ದಾರೆ. ಅವರ ಸುದೀರ್ಘ ಸೇವೆಯನ್ನು ಪರಿಗಣಿಸಿ ಪದವೀಧರ ಮತದಾರರು ಬೆಂಬಲ ನೀಡಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ಮನವಿ ಮಾಡಿದರು.

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ, ಮತದಾರರನ್ನು ನೇರವಾಗಿ ಸಂಪರ್ಕಿಸುವ ಮೂಲಕ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.