ಚಿಕ್ಕಬಳ್ಳಾಪುರ: ಕಂದಾಯ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ “25000 ಕಂದಾಯ ಸೇವೆಗಳ ದಾಖಲೆ ವಿತರಣೆ”, “ವಿಶೇಷ ಕಂದಾಯ ಗ್ರಾಮ ಅಭಿಯಾನ 2.0 ಕ್ಕೆ ಚಾಲನೆ”ಯನ್ನು ಫೆ.27 ರಂದು ಬೆಳಿಗ್ಗೆ 11 ಗಂಟೆಗೆ ಚೊಕ್ಕಹಳ್ಳಿಯ ಬಳಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ.ಕಂದಾಯ ಸೇವೆಗಳ ದಾಖಲೆ ವಿತರಣೆ ಯನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಇ. ಪ್ರದೀಪ್ ಈಶ್ವರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ.ಮಲ್ಲೇಶ್ ಬಾಬು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಧ್ಯಕ್ಷ ಡಾ. ಬಿ.ಸಿ. ಮುದ್ದುಗಂಗಾಧರ್, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್. ಸಂಪAಗಿ, ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷ ಆಂಜಿನಪ್ಪ, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಗಮದ ಅಧ್ಯಕ್ಷ ಬಿ.ಜಿ. ಗಣೇಶ್ ಭಾಗವಹಿಸುವರು.
ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿ ಗೌಡ, ವಿಧಾನ ಪರಿಷತ್ತು ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ, ಡಾ. ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್ ಶಿವಶಂಕರರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಜಿಲ್ಲಾ ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂ ದರ್ ಕುಮಾರ್ ಕಟಾರಿಯಾ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಜಸ್ತಾಸ್, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್, ಸರ್ಕಾರದ ಕಾರ್ಯದರ್ಶಿಗಳು, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ. ಎನ್. ಮಂಜುಳ, ಕಂದಾಯ ಆಯುಕ್ತರಾದ ಸಿ.ಎನ್.ಮೀನಾ ನಾಗರಾಜ್, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತರಾದ ಎಸ್.ಹೊನ್ನಾಂಬ, ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕ ಗಳ ಆಯುಕ್ತ ಮುಲ್ಲೈ ಮುಹಿಲನ್ ಎಂ.ಪಿ., ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ವೆಂಕಟರಾಜ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾಋಇ ಕೇಂದ್ರ ಹಾಗೂ ನಿರ್ದೇಶಕ (ಪ್ರ) ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯ, ಕಂದಾಯ ಆಯುಕ್ತಾಲಯದ ನಿರ್ದೇಶಕ ಎಂ.ಎಸ್.ದಿವಾಕರ ಭಾಗವಹಿಸುವರು.
ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಮತ್ತು ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಮಸ್ತ ನಾಗರಿಕರು ಭಾಗವಹಿಸುವರು.