ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ತೋಟಗಾರಿಕೆ ಯೋಜನೆಗಳ ಪ್ರಗತಿ ಪರಿಶೀಲನೆ: ಗುರಿ ಸಾಧನೆಗೆ ಸಿಇಒ ಸೂಚನೆ

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಮಾವು ಪುನಶ್ಚೇತನ, ದ್ರಾಕ್ಷಿ, ಹೂವು ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳ ಪ್ರಗತಿ, ರೈತರಿಗೆ ಸಹಾಯಧನ ವಿತರಣೆ, ಪಕ್ಷಿ ನಿಯಂತ್ರಣ ಹೊದಿಕೆ, ಈರುಳ್ಳಿ ಶೇಖರಣ ಘಟಕ, ಪ್ಯಾಕ್ ಹೌಸ್ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.

ತೋಟಗಾರಿಕೆ ಯೋಜನೆಗಳ ಪ್ರಗತಿ ಪರಿಶೀಲನೆ

-

Profile
Ashok Nayak Aug 1, 2026 12:01 AM

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ನವೀನ್ ಭಟ್ (ಐಎಎಸ್) ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆ ಯ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಮಾವು ಪುನಶ್ಚೇತನ, ದ್ರಾಕ್ಷಿ, ಹೂವು ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳ ಪ್ರಗತಿ, ರೈತರಿಗೆ ಸಹಾಯಧನ ವಿತರಣೆ, ಪಕ್ಷಿ ನಿಯಂತ್ರಣ ಹೊದಿಕೆ, ಈರುಳ್ಳಿ ಶೇಖರಣ ಘಟಕ, ಪ್ಯಾಕ್ ಹೌಸ್ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.

ಇದನ್ನೂ ಓದಿ: Chikkaballapur News: ಶಿಕ್ಷಣದ ಜೊತೆಗೆ ಸ್ವಂತತನ ಬೆಳೆದಾಗಲೇ ಹಿಂಸೆ ದೂರವಾಗುತ್ತದೆ: ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್

ಕರ್ನಾಟಕ ರಾಜ್ಯ ತೋಟಗಾರಿಕೆ ಅಭಿವೃದ್ಧಿ ಏಜೆನ್ಸಿ (KSHDA) ವತಿಯಿಂದ ನರ್ಸರಿ ಅಭಿವೃದ್ಧಿ, ಕಸಿ ಸಸಿಗಳ ಉತ್ಪಾದನೆ ಮತ್ತು ಮಾರಾಟ ಹಾಗೂ ವಾರ್ಷಿಕ ಕ್ರಿಯಾ ಯೋಜನೆ ಕುರಿತು ಅಧಿಕಾರಿ ಗಳೊಂದಿಗೆ ಚರ್ಚಿಸಿ, ನಿಗದಿತ ಗುರಿಗಳನ್ನು ಸಮಯಕ್ಕೆ ಪೂರ್ಣಗೊಳಿಸುವಂತೆ ಸಿಇಒ ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ರೇಷ್ಮೆ ಇಲಾಖೆಯ ಉಪನಿರ್ದೇಶಕರು, ತೋಟಗಾರಿಕೆ, ಕೃಷಿ ಹಾಗೂ ರೇಷ್ಮೆ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಕೆಎಸ್‌ಎಚ್‌ಡಿಎ ಸಿಬ್ಬಂದಿ ಹಾಗೂ ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.