Guarantee Scheme: ಗೃಹಲಕ್ಷ್ಮಿ ಸಮಸ್ಯೆ, ಬಸ್ ಕೊರತೆ ಸೇರಿ ವಿವಿಧ ಇಲಾಖೆಗಳ ಕಾರ್ಯವೈಖರಿ ಪರಿಶೀಲನೆ
ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಹಲವಾರು ಫಲಾನುಭವಿಗಳ ಖಾತೆಗೆ ಹಣ ಜಮೆಯಾಗ ದಿರುವುದು, ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಹಾಗೂ ತಾಂತ್ರಿಕ ಸಮಸ್ಯೆಗಳ ಕುರಿತು ಸದಸ್ಯರು ಅಧಿಕಾರಿಗಳ ಗಮನ ಸೆಳೆದರು. ಬಾಕಿ ಉಳಿದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು. -
ಶಿಡ್ಲಘಟ್ಟ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ(Guarantee Scheme)ಗಳ ಅನುಷ್ಠಾನದಲ್ಲಿ ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಮುನಿಯಪ್ಪ ಸೂಚಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳ ಸೌಲಭ್ಯಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಹೆಚ್ಚಿನ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಹಲವಾರು ಫಲಾನುಭವಿಗಳ ಖಾತೆಗೆ ಹಣ ಜಮೆಯಾಗ ದಿರುವುದು, ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಹಾಗೂ ತಾಂತ್ರಿಕ ಸಮಸ್ಯೆಗಳ ಕುರಿತು ಸದಸ್ಯರು ಅಧಿಕಾರಿಗಳ ಗಮನ ಸೆಳೆದರು. ಬಾಕಿ ಉಳಿದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಬಸ್‌ಗಳ ಕೊರತೆ ಹಾಗೂ ಸಮಯಕ್ಕೆ ಸರಿಯಾಗಿ ಬಸ್‌ಗಳ ಸಂಚಾರವಿಲ್ಲದ ಕಾರಣ ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಸಾರ್ವಜನಿಕರು ತೊಂದರೆ ಅನು ಭವಿಸುತ್ತಿರುವ ವಿಷಯವೂ ಸಭೆಯಲ್ಲಿ ಪ್ರಸ್ತಾಪವಾಯಿತು. ಈ ಬಗ್ಗೆ ಕೆಎಸ್‌ಆರ್‌ಟಿಸಿ ಅಧಿಕಾರಿ ಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ವರದಿ ಮಂಡಿಸಿದರು. ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಆದ್ಯತೆಯ ಮೇರೆಗೆ ಇತ್ಯರ್ಥಪಡಿಸಿ, ಸರ್ಕಾರದ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ವಹಿಸು ವಂತೆ ಸಭೆಯಲ್ಲಿ ಒತ್ತಿ ಹೇಳಲಾಯಿತು.
ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ಸಿಡಿಪಿಒ ವಿದ್ಯಾ ವಸ್ತ್ರದ್, ಬಳುವನ ಹಳ್ಳಿ ಬಿ.ಆರ್. ಮೂರ್ತಿ, ಸುರೇಶ್, ಎಂ. ಚರಣ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು ಉಪಸ್ಥಿತರಿದ್ದರು.