ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ರೈಸಿಂಗ್ ಸ್ಟಾರ್ ತಂಡಕ್ಕೆ ರಾಜೀವ್ ಗೌಡ ರಂಜಾನ್ ಕಪ್ ಚಾಂಪಿಯನ್ ಪಟ್ಟ

ಯುವಕರು ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಂಡು ಕ್ರೀಡಾ ಸ್ಫೂರ್ತಿಯನ್ನು ಬೆಳೆಸಿಕೊಳ್ಳ ಬೇಕು. ಸ್ಥಳೀಯ ಮಟ್ಟದಲ್ಲಿ ಪ್ರತಿಭೆ ತೋರಿಸುತ್ತಿರುವ ಕ್ರೀಡಾಪಟುಗಳು ಮುಂದಿನ ದಿನಗಳಲ್ಲಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿ ದರು.

ರೈಸಿಂಗ್ ಸ್ಟಾರ್ ತಂಡಕ್ಕೆ ಚಾಂಪಿಯನ್ ಪಟ್ಟ

ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗೌಡ ರಂಜಾನ್ ಕಪ್ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಈ ರೋಚಕ ಪಂದ್ಯಾವಳಿಯಲ್ಲಿ ರೈಸಿಂಗ್ ಸ್ಟಾರ್ ತಂಡ ಅದ್ಭುತ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. -

Ashok Nayak
Ashok Nayak Mar 9, 2026 11:32 PM

ಶಿಡ್ಲಘಟ್ಟ: ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗೌಡ ರಂಜಾನ್ ಕಪ್ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಈ ರೋಚಕ ಪಂದ್ಯಾವಳಿಯಲ್ಲಿ ರೈಸಿಂಗ್ ಸ್ಟಾರ್ ತಂಡ ಅದ್ಭುತ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು.

ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಅಫ್ಸರ್ ಪಾಷಾ ಮಾತನಾಡಿ, ವಿಜೇತ ತಂಡಕ್ಕೆ ಶಿಡ್ಲಘಟ್ಟದ ಸಮಸ್ತ ಸಾರ್ವಜನಿಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಇದನ್ನೂ ಓದಿ: Shidlaghatta News: ಸಮಾಜದಲ್ಲಿ ದಾನಧರ್ಮ ರೂಢಿಯಾಗಲಿ: ಸೀಕಲ್ ರಾಮಚಂದ್ರಗೌಡ

ಪಂದ್ಯಾವಳಿಯನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಿದ ಶಿಡ್ಲಘಟ್ಟ 2023ರ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ಹಾಗೂ ಎಂಸಿಸಿ ತಂಡದ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಭಾರತ ತಂಡವು ಪ್ರಸ್ತುತ ಟಿ೨೦ ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿರುವುದನ್ನು ಸ್ಮರಿಸಿದ ಅವರು, ರಾಜೀವ್ ಗೌಡ ರಂಜಾನ್ ಕಪ್‌ನಲ್ಲಿ ರೈಸಿಂಗ್ ಸ್ಟಾರ್ ತಂಡವು ಜಯ ಸಾಧಿಸಿ ದಂತೆ ಭಾರತ ತಂಡವೂ ವಿಶ್ವಕಪ್‌ನಲ್ಲಿ ಯಶಸ್ಸು ಸಾಧಿಸಿ ದೇಶಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.

ಯುವಕರು ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಂಡು ಕ್ರೀಡಾ ಸ್ಫೂರ್ತಿಯನ್ನು ಬೆಳೆಸಿಕೊಳ್ಳ ಬೇಕು. ಸ್ಥಳೀಯ ಮಟ್ಟದಲ್ಲಿ ಪ್ರತಿಭೆ ತೋರಿಸುತ್ತಿರುವ ಕ್ರೀಡಾಪಟುಗಳು ಮುಂದಿನ ದಿನಗಳಲ್ಲಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ತಂಡದ ಸದಸ್ಯರು, ಸಂಘಟಕರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.