ತಾಪಮಾನ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ : ನ್ಯಾ.ನೇರಳೆ ವೀರಭದ್ರಯ್ಯ ಭವಾನಿ ಕಳವಳ
ವಾತಾವರಣದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ. ನಿಷೇಧಿತ ಪ್ಲಾಸ್ಟಿಕ್ ಬಳಕೆ, ಜಲಮೂಲಗಳ ಕಲುಷಿತಗೊಳಿಸುವುದು, ಅರಣ್ಯ ನಾಶದಿಂದ ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಹಸಿರನ್ನು ಉಳಿಸಿ, ಬೆಳೆಸುವುದು, ಮಾಲಿನ್ಯವನ್ನು ತಡೆಗಟ್ಟಿ ಪರಿಸರ ಸಮತೋಲನ ಕಾಪಾಡುವುದು ಭೂಮಿ ಮೇಲಿರುವ ಪ್ರತಿ ಜೀವಿಯ ಸುಸ್ಥಿರ ಜೀವನಕ್ಕೆ ನೆರವಾಗಲಿದೆ

ವಾತಾವರಣದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದನ್ನು ತಪ್ಪಿಸಲು ಪರಿಸರ ರಕ್ಷಣೆ ಕೆಲಸಗಳನ್ನು ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ ತಿಳಿಸಿದರು.

ಚಿಕ್ಕಬಳ್ಳಾಪುರ : ವಾತಾವರಣದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದನ್ನು ತಪ್ಪಿಸಲು ಪರಿಸರ ರಕ್ಷಣೆ ಕೆಲಸಗಳನ್ನು ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ವಕೀಲರ ಸಂಘ ಇವರ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ, “ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಅವರು ಮಾತನಾಡಿ ದರು.
ವಾತಾವರಣದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ. ನಿಷೇಧಿತ ಪ್ಲಾಸ್ಟಿಕ್ ಬಳಕೆ, ಜಲಮೂಲಗಳ ಕಲುಷಿತಗೊಳಿಸುವುದು, ಅರಣ್ಯ ನಾಶದಿಂದ ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಹಸಿರನ್ನು ಉಳಿಸಿ, ಬೆಳೆಸುವುದು, ಮಾಲಿನ್ಯವನ್ನು ತಡೆಗಟ್ಟಿ ಪರಿಸರ ಸಮತೋಲನ ಕಾಪಾಡುವುದು ಭೂಮಿ ಮೇಲಿರುವ ಪ್ರತಿ ಜೀವಿಯ ಸುಸ್ಥಿರ ಜೀವನಕ್ಕೆ ನೆರವಾಗಲಿದೆ ಎಂದರು.
ಇದನ್ನೂ ಓದಿ: Chikkaballapur News: ಮುಖ್ಯಮಂತ್ರಿಗಳಿಗೆ ಗಂಟೆಗಟ್ಟಲೆ ಕಾದ ಮಾಧ್ಯಮ ಮಿತ್ರರು
ಪರಿಸರ ರಕ್ಷಣೆಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಮುಂದಿನ ಪೀಳಿಗೆಗೂ ಉತ್ತಮ ಪರಿಸರ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಈ ದಿನಾಚರಣೆಯ ಉದ್ದೇಶವಾಗಿದೆ, ಮುಖ್ಯವಾಗಿ ಇಂದಿನ ನಾಗರಿಕರಾದ ನಾವು ನಮ್ಮ ಮಕ್ಕಳಲ್ಲಿ ಪರಿಸರದ ರಕ್ಷಣೆಯ ಅವಶ್ಯಕತೆಯ ಬಗ್ಗೆ ಜಾಗೃತಿ ಮೂಡಿಸಬೇಕು. ದಶಕಗಳಿಂದ ಪ್ಲಾಸ್ಟಿಕ್ ಮಾಲಿನ್ಯವು ಪ್ರಪಂಚದ ಮೂಲೆ ಮೂಲೆಗೂ ವ್ಯಾಪಿಸಿದೆ. ಪ್ಲಾಸ್ಟಿಕ್ ಉತ್ಪನ್ನಗಳ ಮೂಲಕ ನೀರು ಆಹಾರ ಸೇವಿಸುವುದರಿಂದ ಪ್ಲಾಸ್ಟಿಕ್ ನಮ್ಮ ದೇಹಗಳನ್ನು ಸೇರಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್ ಚೀಲಗಳ ಬದಲು ಬಟ್ಟೆ ಚೀಲ ಗಳನ್ನು ಬಳಸುವ ಅಭಿರುಚಿಯ ಜೀವನ ಶೈಲಿ ನಮದಾಗಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಮಾತನಾಡಿ, ಪ್ರತಿಯೊಬ್ಬರಿಗೂ ಹಸಿರೇ ಉಸಿರಾಗಬೇಕು. ಪರಿಸರ ಎಂಬುದು ಅತ್ಯಮೂಲ್ಯವಾದದ್ದು, ಅದರ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲಿ ಅರಿವು ಮೂಡಿಸ ಬೇಕು. ಗಿಡ ಮರ ಬೆಳೆಸುವುದು ನಮ್ಮ ಕರ್ತವ್ಯ ಆಗಬೇಕು. ಪ್ಲಾಸ್ಟಿಕ್ ಚೀಲಗಳ ಬದಲು ಬಟ್ಟೆಯ ಕೈ ಚೀಲಗಳನ್ನು ಹೆಮ್ಮೆಯಿಂದ ಬಳಸಬೇಕು. ಹೋಟೆಲ್ ಗಳಲ್ಲಿ ಇಡ್ಲಿ ತಯಾರಿಸುವಾಗ ಹಾಗೂ ಇತರೆ ಆಹಾರ ಪದಾರ್ಥಗಳನ್ನು ತಯಾರಿಸಲು ಪ್ಲಾಸ್ಟಿಕ್ ಬಳಸುವುದರಿಂದ ಅನುಭೋಗಿಗಳಿಗೆ ಕ್ಯಾನ್ಸರ್ ಆಗಲಿದೆ. ಯಾವುದೇ ಹೋಟೆಲ್ ನಲ್ಲಿ ಈ ರೀತಿಯ ಘಟನೆಗಳು ನಡೆಯಕೂಡದು. ಅಂತಹವರ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ ಎಂದರು.

ಹೋಟೆಲ್ ನಿರ್ವಹಣೆ ಮಾಡುವವರು ಹಾಗೂ ಮಾಲೀಕರು ಜನರ ಆರೋಗ್ಯದ ಬಗ್ಗೆ ಕಾಳಜಿ ತೋರಿ ಸಾಮಾಜಿಕ ಜವಾಬ್ದಾರಿ ತೋರಬೇಕು. ಭಾರತೀಯರು ವಾರ್ಷಿಕ ಸರಾಸರಿ ೩೫ ಕೆಜಿ ರಷ್ಟು ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಮನೆಯಲ್ಲಿರುವ ಪ್ಲಾಸ್ಟಿಕ್ ಅನ್ನು ಶೇಖರಣೆ ಮಾಡಿ ಕಸ ಸಂಗ್ರಹಣೆ ವಾಹನಗಳಿಗೆ ನೀಡುವುದರ ಜೊತೆಗೆ ನಿಷೇಧಿತ ಪ್ಲಾಸ್ಟಿಕ್ ಅನ್ನು ಮನೆಗೆ ತರುವುದನ್ನು ಪ್ರತಿಯೊಬ್ಬರು ತಪ್ಪಿಸಿದರೆ ಪರಿಸರ ಉತ್ತಮವಾಗಿರುತ್ತದೆ. ಪ್ಲಾಸ್ಟಿಕ್ ಮುಕ್ತ ಚಿಕ್ಕಬಳ್ಳಾಪುರ ಎಂಬ ಅಭಿಯಾನವನ್ನು ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ವ್ಯಾಪಕ ವಾಗಿ ಕಳೆದ ಎರಡು ವರ್ಷಗಳಿಂದ ಹಮ್ಮಿಕೊಂಡು ಜಿಲ್ಲಾದ್ಯಂತ ೧೭ ಸಾವಿರ ಕೆಜಿ ಪ್ಲಾಸ್ಟಿಕ್ ವಶ ಪಡೆದುಕೊಂಡು ೧೮ ಲಕ್ಷ ರೂಪಾಯಿ ದಂಡ ವಿಧಿಸಿದ್ದೇವೆ. ಪ್ಲಾಸ್ಟಿಕ್ ಮುಕ್ತಗೊಳಿ ಸೋಣ ಎಂದು ಎಲ್ಲರು ಪಣತೊಟ್ಟು ಪರಿಸರ ರಕ್ಷಣೆಗೆ ಮುಂದಾಗೋಣ ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸಸಿ ನೆಡುವ ಮೂಲಕ ವಿದ್ಯಾರ್ಥಿಗಳಿಗೆ ಮತ್ತು ಸ್ಥಳೀಯರಲ್ಲಿ ಪರಿಸರ ರಕ್ಷಣೆಯ ಜಾಗೃತಿ ಮೂಡಿಸಿದರು. ಪರಿಸರ ದಿನಾಚರಣೆಯ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ, ಚಿತ್ರ ಕಲೆ, ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ನಂತರ “ಪ್ಲಾಸ್ಟಿಕ್ ಮಾಲಿನ್ಯವನ್ನು ಅಂತ್ಯಗೊಳಿಸೋಣ”ಎAಬ ಘೋಷ ವಾಕ್ಯ ಬಿಡುಗಡೆ ಮಾಡಲಾಯಿತು. ಆರ್,ಎಲ್,ಎಫ್,ಸಿ ಸಂಸ್ಥೆಯ ಬಟ್ಟೆಚೀಲವನ್ನು ಗಣ್ಯರು ಬಿಡುಗಡೆ ಮಾಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ ಅಭಿಲಾಷ್ ಅವರು ಮಾತನಾಡುತ್ತಾ ಪ್ರತಿವರ್ಷ ನಿಮ್ಮ ಜನ್ಮದಿನವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಒಂದು ಗಿಡ ನೆಡುವುದು ಹಾಗೂ ನಮ್ಮ ಮನೆಯ ಆವರಣದಲ್ಲಿ ನೈಸರ್ಗಿಕ ಔಷಧಿಯುಳ್ಳ ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡಬಹುದು ಎಂದು ಶಾಲಾ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ ಅಭಿಲಾಷ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಎಂ ವೆಂಕಟೇಶ್, ಉಪ ಅರಣ್ಯ ಸಂರಕ್ಷಣಾ ಧಿಕಾರಿ ಗಿರೀಶ್, ಜಿಲ್ಲಾ ಪರಿಸರ ಅಧಿಕಾರಿ ಡಾ. ದೊಡ್ಡಶಾನಯ್ಯ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲಿಂಗರಾಜಪ್ಪ, ಪೊಲೀಸ್ ಉಪಾಧೀಕ್ಷಕರು ಶಿವಕುಮಾರ್, ವಿವಿಧ ಇಲಾಖೆಗಳ ಅಧಿಕಾರಿ ಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.