ಚಿಕ್ಕಬಳ್ಳಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ರಕ್ತ ನಿಧಿ ಕೇಂದ್ರದ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾಗಿ ಎಸ್.ಮುನಿರಾಮ್ ನೇಮಕವಾಗಿದ್ದಾರೆ.
ವಕೀಲರು, ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದು ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವು ದನ್ನು ಪರಿಗಣಿಸಿ, 2025-28ನೇ ಸಾಲಿನ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಸದಸ್ಯರನ್ನಾಗಿ ಮುನಿರಾಮ್ ರನ್ನು ನಾಮ ನಿರ್ದೇಶನ ಮಾಡಲಾಗಿದೆ.
ಸಂಸ್ಥೆಯ ಕಾರ್ಯ ಚಟುವಟಿಕೆಯು ಚುರುಕಿನಿಂದ ನಡೆಯುವಂತಾಗಲು ಪ್ರಾಮಾಣಿಕವಾಗಿ ಶ್ರಮಿಸಲು ಸಂಸ್ಥೆಯು ನೂತನ ಸದಸ್ಯ ಮುನಿರಾಮ್ ಗೆ ಸೂಚಿಸಿದೆ.