Bagepally News: ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಸುಪ್ರೀತ್
ಸಂಘದ ಕಚೇರಿಯಲ್ಲಿ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಎಸ್.ಸುಪ್ರೀತ್, ಉಪಾಧ್ಯಕ್ಷ ಸ್ಥಾನಕ್ಕೆ ಮರಿಯಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದು, ಎರಡನೇ ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷ ಸ್ಥಾನಕ್ಕೆ ಎಸ್.ಸುಪ್ರೀತ್, ಉಪಾಧ್ಯಕ್ಷ ಸ್ಥಾನಕ್ಕೆ ಮರಿಯಪ್ಪ ಅವಿರೋಧ ಅಯ್ಕೆಗೊಂಡಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡು ಕಾಂಗ್ರೆಸ್ ಬೆಂಬಲಿತರ ಪಾಲಾಗಿದ್ದು, ಎನ್‌ಡಿಎ, ಪಿಐಎಂ) ಬೆಂಬಲಿತ ನಿರ್ದೇಶಕರಿಗೆ ನಿರಾಶೆ ಎದುರಾಗಿದೆ
ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಸುಪ್ರೀತ್, ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಅಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ವನಿತಾ ಘೋಷಣೆ ಮಾಡಿದ್ದಾರೆ. -
ಬಾಗೇಪಲ್ಲಿ: ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಸುಪ್ರೀತ್, ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಅಯ್ಕೆಯಾಗಿದ್ದಾರೆಂದು ಚುನಾವಣಾ ಧಿಕಾರಿ ವನಿತಾ ಘೋಷಣೆ ಮಾಡಿದ್ದಾರೆ.
ಬಾಗೇಪಲ್ಲಿ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಎಸ್.ಸುಪ್ರೀತ್, ಉಪಾಧ್ಯಕ್ಷ ಸ್ಥಾನಕ್ಕೆ ಮರಿಯಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದು, ಎರಡನೇ ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷ ಸ್ಥಾನಕ್ಕೆ ಎಸ್.ಸುಪ್ರೀತ್, ಉಪಾಧ್ಯಕ್ಷ ಸ್ಥಾನಕ್ಕೆ ಮರಿಯಪ್ಪ ಅವಿರೋಧ ಅಯ್ಕೆಗೊಂಡಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡು ಕಾಂಗ್ರೆಸ್ ಬೆಂಬಲಿತರ ಪಾಲಾಗಿದ್ದು, ಎನ್‌ಡಿಎ, ಪಿಐಎಂ) ಬೆಂಬಲಿತ ನಿರ್ದೇಶಕರಿಗೆ ನಿರಾಶೆ ಎದುರಾಗಿದೆ.
ಬಾಗೇಪಲ್ಲಿ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆದಂತಹ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಾದ ಎಸ್.ಸುಪ್ರೀತ್ ಹಾಗೂ ವಿ.ಚಂದ್ರಶೇಖರರೆಡ್ಡಿ ನಡುವೆ ಕೊನೆಗಳಿಗೆವರೆಗೂ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ(MLA SN Subbareddy) ಮಧ್ಯಪ್ರವೇಶಿಸಿ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಖಾಸಗಿ ಹೋಟೆಲ್‌ವೊಂದರಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ರೊಂದಿಗೆ ಶಾಸಕರು ಸಭೆ ನಡೆಸಿ ಎಸ್.ಸುಪ್ರೀತ್ ಹಾಗೂ ಮರಿಯಪ್ಪ ಹೆಸರು ಅಂತಿಮಗೊಳಿಸಿದ ನಂತರ ಅಧ್ಯಕ್ಷ, ಉಪಾ ಧ್ಯಕ್ಷರ ಅಯ್ಕೆಯ ಗೊಂದಲಕ್ಕೆ ತೆರೆ ಬಿದ್ದು ಅವಿರೋಧ ಅಯ್ಕೆಯಾಗಿದೆ.
ಚುನಾವಣಾಧಿಕಾರಿ ವನಿತಾ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಫಲಿತಾಂಶ ಘೋಷಣೆ ಮಾಡುತ್ತಿದ್ದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ತಿನ್ನಿಸುವ ಮೂಲಕ ಗೆಲುವನ್ನು ಸಂಭ್ರಮಿಸಿದರು.
ನೂತನ ಅಧ್ಯಕ್ಷ ಎಸ್.ಸುಪ್ರೀತ್ ಮಾತನಾಡಿ, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯ ದಂತೆ ಸಹಕಾರ ನೀಡಿರುವ ಶಾಸಕರಾದ ಸುಬ್ಬಾರೆಡ್ಡಿರವರಿಗೆ, ಸಂಘದ ರ್ದೇಶಕರಿಗೆ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ನರೇಂದ್ರರವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ, ಸಹಕಾರ ಸಂಘದ ವತಿ ಯಿಂದ ರೈತರಿಗೆ ಸಿಗಬೇಕಾಗಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ರೈತರಿಗೆ ಅಗತ್ಯವಿರುವ ರಸ ಗೊಬ್ಬರ ಮಾರಾಟಕ್ಕೆ ಹೆಚ್ಚು ಆದ್ಯತೆ ನೀಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ವಿ.ಚಂದ್ರಶೇಖರ ರೆಡ್ಡಿ, ಎ.ಗೋಪಾಲಕೃಷ್ಣ, ಜಿ.ಎಂ.ರಾಮ ಕೃಷ್ಣಪ್ಪ, ಅಂಜಿನಪ್ಪ, ವಿ.ಆಧಿಮೂರ್ತಿ, ಎ.ಶ್ರೀನಿವಾಸ ಅಪ್ಪಯ್ಯ ಬಾಬು, ಸುಜಾತ ಸುಬ್ಬರಾಮು, ಎಂ.ನಾರಾಯಣಸ್ವಾಮಿ, ಆರ್.ವಿ.ವೆಂಕಟೇಶ್, ಪದ್ಮ, ಶಿವಮ್ಮ, ನಾರಾಯಣಪ್ಪ, ಸರ್ಕಾರಿ ನಾಮ ನಿರ್ದೇಶನ ಸದಸ್ಯ ನಾರಾಯಣಸ್ವಾಮಿ, ಸಂಘದ ಕಾರ್ಯದರ್ಶಿ ಮಂಜುನಾಥ, ಸಹಾಯಕ ಚುನಾವಣಾಧಿಕಾರಿ ಹೆಡ್ರಿಚಾರ್ಲಿ ಮತ್ತಿತರರು ಇದ್ದರು.