ಚಿಕ್ಕಬಳ್ಳಾಪುರ: ಸ್ವಾತಂತ್ರ‍್ಯ ಬಂದು 78 ವರ್ಷಗಳು ಕಳೆದರೂ ಕರ್ನಾಟಕ ಸೇರಿದಂತೆ ಭಾರತದ ಹಲವಾರು ರಾಜ್ಯಗಳಲ್ಲಿ ಆರೋಗ್ಯದ ಹಕ್ಕು ಇನ್ನೂ ವಾಸ್ತವವಾಗಿಲ್ಲ. ಭಾರತದಲ್ಲಿ ಪ್ರತಿ ವರ್ಷ ಆರೋಗ್ಯ ಚಿಕಿತ್ಸೆಯ ಖರ್ಚುಗಳೆಂದಾಗಿ 10 ಕೋಟಿ ಜನರು ಬಡತನಕ್ಕೆ ತಳ್ಳಲ್ಪಡುತ್ತಿದ್ದಾರೆ. ಆರೋಗ್ಯ ಸೇವೆ ಹಾಗು ಚಿಕಿತ್ಸೆ. ವೆಚ್ಚಗಳು ದಿನೇ ದಿನೇ ದುಬಾರಿಯಾಗುತ್ತಿದ್ದು ಖರ್ಚು ಭರಿಸ ಲಾರದೆ ಎಷ್ಟೋ ಜನರು ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ಕೇಂದ್ರ ರಾಜ್ಯ ಸರಕಾರಗಳೇ ಕಾರಣ ಎಂದು ಶ್ರೀರಂಗಾಚಾರಿ ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಟಿಯನ್ನು ದ್ದೇಶಿಸಿ ಮಾತನಾಡಿದರು.
ವಾಸ್ತವದಲ್ಲಿ ನಮ್ಮನ್ನಾಳುವ ಸರಕಾರಗಳು ಬಡಜನರ ಆರೋಗ್ಯ ಸುಧಾರಣೆಯ ಉತ್ತಮ ಕೇಂದ್ರ ಗಳಾಗಿರುವ ಜಿಲ್ಲಾ ಆಸ್ಪತ್ರೆಗಳು ಬಡವರ ಪಾಲಿನ ಸಂಜೀವಿನಿ ಆಗಿವೆ. ಇಂತಹ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಒಟ್ಟಾರೆಯಾಗಿ ಬಲಪಡಿಸುವ ಬದಲು, ಸರ್ಕಾರವು ಜಿಲ್ಲಾ ಆಸ್ಪತ್ರೆ ಗಳನ್ನು ಖಾಸಗೀಕರಣಗೊಳಿಸಲು ಯೋಜಿಸುತ್ತಿದೆ. ಇದನ್ನು ಖಂಡಿಸುವುದಕ್ಕೆ ಹಾಗೂ ನಮ್ಮ ಆರೋಗ್ಯ ಹಕ್ಕನ್ನು ಪಡೆಯೋಕ್ಕೆ ನಾವು ರಾಜ್ಯಾದ್ಯಂತ ಬೀದಿಗೆ ಇಳಿಯಬೇಕಾಗಿದೆ ಎಂದು ಭೂಮಿ-ವಸತಿ ಹಕ್ಕು ವಂಚಿತರ ಹೋರಾಟಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯ ಶ್ರೀರಂಗಾ ಚಾರಿ ತಿಳಿಸಿದರು.
ಇದನ್ನೂ ಓದಿ: Chikkaballapur News: ಶಾಲಾ ಮಕ್ಕಳ ಹಸಿವು ನಿವಾರಣೆಗೆ ‘ಸಾಯಿ ಶ್ಯೂರ್’: ಪೌಷ್ಟಿಕ ಉಪಹಾರದಿಂದ ಶಿಕ್ಷಣದ ಬಲವರ್ಧನೆ
ನೀತಿ ಆಯೋಗದ ಶಿಫಾರಿಸ್ಸಿನಂತೆ ಕರ್ನಾಟಕದ 8 ಜಿಲ್ಲೆಗಳಲ್ಲಿ (ತುಮಕೂರು, ವಿಜಯನಗರ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ ಮತ್ತು ದಾವಣಗೆರೆ) ವೈದ್ಯಕೀಯ ಶಿಕ್ಷಣ ಸಚಿವರು ಶರಣ್ ಪ್ರಕಾಶ್ ಪಾಟೀಲ್ ಪಿಪಿಪಿ (ಸಾರ್ವಜನಿಕ-ಖಾಸಗಿ ಸಹಭಾ ಗಿತ್ವ) ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ನೆಪದಲ್ಲಿ ಜಿಲ್ಲಾ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳಿಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.
ಈ ರೀತಿ ಖಾಸಗೀ ಅವರಿಗೆ ಕೊಟ್ಟರೆ, ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿರುವ ಬಡ ಜನರ ಆರೋಗ್ಯವನ್ನು ಕಾಪಾಡುವ ಬದಲು ಅವರನ್ನು ಕೊಂದAತೆ ಆಗುತ್ತದೆ ಮತ್ತು ಜನರಿಗಾಗಿ ಸೂಕ್ತ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸುವುದರಿಂದ ಸರ್ಕಾರ ಕೈ ತೊಳೆದುಕೊಳ್ಳುತ್ತಿದೆ. ಚಿಕಿತ್ಸೆ ನಿರಾಕರಣೆ, ಚಿಕಿತ್ಸೆ ದುಬಾರಿ ಆಗುವುದಕ್ಕೆ ದಾರಿ ಮಾಡಿಕೊಡುತ್ತದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡದೆ, ಇನ್ನೂ ಉಚಿತ ಔಷಧಿಗಳು ಮತ್ತು ರಕ್ತ ಪರೀಕ್ಷೆಗಳನ್ನು ಪೂರೈಸದೆ, ಎಲ್ಲಾ ಸೇವೆಗಳನ್ನು ಖಚಿತಪಡಿಸದೆ, ಗುಣಮಟ್ಟದ ಆರೈಕೆಯನ್ನು ನಿರ್ವಹಿಸದೆ, ಜನರಿಗೆ ಸರ್ಕಾರಿ ಆರೋಗ್ಯ ವ್ಯವಸ್ಥೆ ಯ ಬಗ್ಗೆ ತಾತ್ಸಾರ ಬರುವಂತೆ ಮಾಡಿ ಈಗ ಅದನ್ನು ಖಾಸಗಿಯವರ ಕೈಗೊಪ್ಪಿಸಲು ಹೊರಟಿದೆ ಇದು ಸರಿಯಲ್ಲ ಎಂದು ದೂರಿದರು.
ಸರಕಾರಿ ಆಸ್ಪತ್ರೆ ಖಾಸಗಿಯಾದಲ್ಲಿ, ಪ್ರಜಾತಾಂತ್ರಿಕವಾದ ಸರ್ಕಾರದ ಹೊಣೆಗಾರಿಕೆ ಇಲ್ಲದ ಹಾಗೆ ಆಗುವುದು. ಅದಲ್ಲದೆ ಇದರಿಂದ ಬರುವ ಖಾಸಗಿ ವೈದ್ಯಕೀಯ ಕಾಲೇಜು ಹೆಚ್ಚಾಗಿ ಪ್ರಬಲ ವರ್ಗ ಮತ್ತು ಜಾತಿಯ ವಿದ್ಯಾರ್ಥಿಗಳಿಗೆ ಮಾತ್ರ ಕೈಗೆಟುಕುವವು ಮತ್ತು ಬಹುಪಾಲು ಅರ್ಹ ವಿದ್ಯಾರ್ಥಿ ಗಳು ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಾರೆ. ಆಸ್ಪತ್ರೆಯ ಸಿಬ್ಬಂದಿಗಳು ತಮ್ಮ ನೌಕರ ಹಕ್ಕು ಗಳನ್ನು ಸಹ ಕಳೆದುಕೊಳ್ಳುತ್ತಾರೆ ಎಂದರು.
ಜನರು ಖಾಸಗೀಕರಣವನ್ನು ತೀವ್ರವಾಗಿ ಖಂಡಿಸಬೇಕು. ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಬಲಗೊಳಿಸಬೇಕು ಹಾಗೂ ಜನರಿಗೆ ಉಚಿತವಾಗಿ ಗುಣಮಟ್ಟದ ಚಿಕಿತ್ಸೆ,ಉಚಿತ ಔಷಧಿ ಸಿಗಬೇಕು. ಇದಕ್ಕಾಗಿ ಹಲವಾರು ಸಂಘಟನೆಗಳ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ, ಎಲ್ಲಾ ೩೧ ಜಿಲ್ಲೆಗಳಲ್ಲಿ ಜಾಥಾ ನಡೆಸಲು ಉದ್ದೇಶಿಸಿದೆ ಎಂದು ತಿಳಿಸಿದರು.
ಜೀವಿಕ ಜಿಲ್ಲಾ ಸಂಘಟನೆ ಸಂಚಾಲಕ ನಾರಾಯಣಸ್ವಾಮಿ ಮಾತನಾಡಿ, ಸರ್ಕಾರ ಈ ಕೂಡಲೇ ಸರ್ಕಾರಿ ಆಸ್ಪತ್ರೆ ಖಾಸಗೀಕರಣ (ಪಿಪಿಪಿ) ಮಾಡುವ ಯೋಜನೆ ಕೈಬಿಡಬೇಕು. ಯಾವುದೇ ಕಾರಣ ಕ್ಕೂ ಸರ್ಕಾರಿ ಆಸ್ಪತ್ರೆ ಖಾಸಗಿಯವರಿಗೆ ಹಸ್ತಾಂತರ ಮಾಡಬಾರದು. ಇದರ ಬದಲು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಗೊಳಿಸಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬರಿಗೂ ಔಷಧಗಳು ಉಚಿತವಾಗಿ ಲಭ್ಯವಾಗಬೇಕು. ಸರ್ಕಾರಿ ಆಸ್ಪತ್ರೆ ವೈದ್ಯರು ಯಾವುದೇ ಕಾರಣಕ್ಕೂ ಔಷಧಗಳನ್ನು ಹೊರಗಡೆ ಖರೀದಿಸಲು ಚೀಟಿಯನ್ನು ಬರೆದು ಕೊಡಬಾರದು.
ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯಿದೆಯನ್ನು ಜಾರಿಗೆ ತರಬೇಕು, ನಮಗೆ ಆರೋಗ್ಯ ರಕ್ಷಣೆ ಯನ್ನು ಮೂಲ ಹಕ್ಕನ್ನಾಗಿ ಮಾಡುವ ಕಾನೂನು ಬೇಕಾಗಿದೆ, ಯಾವುದೇ ಸರ್ಕಾರವು ಹಿಂತೆಗೆದು ಕೊಳ್ಳಬಹುದಾದ ಯೋಜನೆಯಲ್ಲ. ಖಾಸಗಿ ವಲಯದಲ್ಲಿ ಆಸ್ಪತ್ರೆಗಳ ಶುಲ್ಕವನ್ನು ನಿಯಂತ್ರಿಸ ಬೇಕು ಎಂಬ ನಮ್ಮ ಹಕ್ಕೂತ್ತಾಯಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಎದ್ದೇಳು ಕರ್ನಾಟಕ ಜಿಲ್ಲಾ ಕೋರ್ಡಿನೇಟರ್. ಶಮೀರ್.ಜಿ, ಕರ್ನಾಟಕ ವಿಕಲಚೇತನರ ಸಂಘಟನೆ ರಾಜ್ಯಾಧ್ಯಕ್ಷ ಕೆ.ಜಿ.ಸುಬ್ರಹ್ಮಣ್ಯಂ, ನಿಸರ್ಗ ಸೊಸೈಟಿ. ಸಂವಿಧಾನ ಸಂರಕ್ಷಣಾಪಡೆ ಸಂಚಾಲಕ ನಾರಾಯಣಪ್ಪ, ಮಹಿಳಾ ಸಂಚಾಲಕಿ ಮಮತಾ ಮತ್ತಿತರರು ಇದ್ದರು.