ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಿಂತಾಮಣಿ ರಾಯಲ್ ಶಾಲೆಯಲ್ಲಿ ‘ಸುರಕ್ಷಿತ ಬಾಲ್ಯ’ ಅಭಿಯಾನ; ಮಕ್ಕಳ ಹಕ್ಕುಗಳು, ಕಾನೂನು ರಕ್ಷಣೆ ಕುರಿತು ಜಾಗೃತಿ

ಪೋಕ್ಸೊ ಕಾಯ್ದೆ ಕುರಿತು ಮಾಹಿತಿ ನೀಡಿದ ವಕೀಲರು, 2012ರ ನವೆಂಬರ್ 14ರಂದು ಈ ಕಾಯ್ದೆ ಜಾರಿಗೆ ಬಂದಿದ್ದು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವಸ್ತು ಗಳಿಂದ ಮಕ್ಕಳನ್ನು ರಕ್ಷಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಮಕ್ಕಳ ಮೇಲಿನ ಅಪರಾಧಗಳ ವರದಿ ಸಲ್ಲಿಕೆ, ಸಾಕ್ಷ್ಯಗಳ ದಾಖಲಾತಿ, ತನಿಖೆ ಹಾಗೂ ವಿಶೇಷ ನ್ಯಾಯಾಲಯಗಳ ಮೂಲಕ ಮಕ್ಕಳ ಸ್ನೇಹಿ ವಾತಾವರಣದಲ್ಲಿ ತ್ವರಿತ ನ್ಯಾಯಾಂಗ ವಿಚಾರಣೆ ನಡೆಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಮಕ್ಕಳ ಸುರಕ್ಷತೆಗೆ ಪೋಕ್ಸೊ ಕಾಯ್ದೆ ಅರಿವು ಅಗತ್ಯ

-

Profile
Ashok Nayak Nov 1, 2026 10:46 AM

ಚಿಂತಾಮಣಿ: ಮಕ್ಕಳ ಹಕ್ಕುಗಳು, ಸುರಕ್ಷತೆ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನಗರದ ರಾಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸುರಕ್ಷಿತ ಬಾಲ್ಯ’ ಅಭಿಯಾನದಡಿ ವಿಶೇಷ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ವಿ. ಕಾಂತರಾಜ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಹರ್ಷಿತ್, ವಕೀಲರ ಸಂಘದ ಅಧ್ಯಕ್ಷ ಮಂಜುನಾಥ್ ರೆಡ್ಡಿ, ರಾಯಲ್ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಪ್ರೇಮಲತಾ, ಹಿರಿಯ ವಕೀಲರಾದ ಇಬ್ರಾಹಿಂ ಜಿ.ಎಂ. ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ: Chikkaballapur News: ಸಮುದಾಯದ ಏಳಿಗೆಯ ಗುರಿಯೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಅಭಿವೃದ್ಧಿ ಟ್ರಸ್ಟ್ ಸ್ಥಾಪನೆ: ಉಪಾಧ್ಯಕ್ಷ ಶಿವಕುಮಾರ್

ಪೋಕ್ಸೊ ಕಾಯ್ದೆ ಕುರಿತು ಮಾಹಿತಿ ನೀಡಿದ ವಕೀಲರು, 2012ರ ನವೆಂಬರ್ 14ರಂದು ಈ ಕಾಯ್ದೆ ಜಾರಿಗೆ ಬಂದಿದ್ದು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವಸ್ತುಗಳಿಂದ ಮಕ್ಕಳನ್ನು ರಕ್ಷಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಮಕ್ಕಳ ಮೇಲಿನ ಅಪರಾಧಗಳ ವರದಿ ಸಲ್ಲಿಕೆ, ಸಾಕ್ಷ್ಯಗಳ ದಾಖಲಾತಿ, ತನಿಖೆ ಹಾಗೂ ವಿಶೇಷ ನ್ಯಾಯಾಲಯಗಳ ಮೂಲಕ ಮಕ್ಕಳ ಸ್ನೇಹಿ ವಾತಾವರಣದಲ್ಲಿ ತ್ವರಿತ ನ್ಯಾಯಾಂಗ ವಿಚಾರಣೆ ನಡೆಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಪ್ರತಿಯೊಂದು ಮಗುವಿಗೂ ತನ್ನ ದೇಹದ ಮೇಲೆ ಸಂಪೂರ್ಣ ಹಕ್ಕಿದೆ. ತನ್ನ ಅನುಮತಿಯಿಲ್ಲದೆ ಯಾರೂ ಸ್ಪರ್ಶಿಸುವಂತಿಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಬಟ್ಟೆಯಿಂದ ಮುಚ್ಚಿರುವ ದೇಹದ ಖಾಸಗಿ ಭಾಗಗಳನ್ನು ಯಾರೂ ಮುಟ್ಟಬಾರದು ಅಥವಾ ನೋಡುವಂತಿಲ್ಲ. ಅಸುರಕ್ಷಿತ ಸ್ಪರ್ಶ ಅಥವಾ ಯಾವುದೇ ರೀತಿಯ ಕಿರುಕುಳ ಎದುರಾದರೆ ಭಯಪಡದೆ ಪೋಷಕರಿಗೆ ಅಥವಾ ಶಿಕ್ಷಕರಿಗೆ ತಿಳಿಸಬೇಕು ಎಂದು ಸಲಹೆ ನೀಡಲಾಯಿತು.