ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದ ಸಂದೀಪ್ ರೆಡ್ಡಿ

ದೇಶದಲ್ಲಿ ಸರ್ಕಾರಿ ಆಸ್ಪತ್ರೆಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಖಾಸಗಿ ಆಸ್ಪತ್ರೆಗಳಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಾಗುತ್ತಿದ್ದರೂ ಮತ್ತು ವೈದ್ಯಕೀಯ ಕ್ಷೇತ್ರ ವೇಗವಾಗಿ ಬೆಳೆಯುತ್ತಿದ್ದರೂ ಗ್ರಾಮೀಣ ಭಾಗದ ಸಾಮಾನ್ಯ ಜನರಿಗೆ ಸಮರ್ಪಕ ಆರೋಗ್ಯ ಸೇವೆ ಇನ್ನೂ ಸಂಪೂರ್ಣವಾಗಿ ತಲುಪಿಲ್ಲ

ಚಿಕ್ಕಬಳ್ಳಾಪುರ: ಗ್ರಾಮೀಣ ಪ್ರದೇಶದ ಜನರು ಗುಣಮಟ್ಟದ ಆರೋಗ್ಯ ಸೇವೆಯಿಂದ ವಂಚಿತರಾಗ ಬಾರದು ಎಂಬ ಸಾಮಾಜಿಕ ಬದ್ಧತೆಯೊಂದಿಗೆ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ನಿರಂತರವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುತ್ತಿದ್ದು, ಸಮಾಜದ ಪ್ರತಿಯೊಬ್ಬರೂ ಇಂತಹ ಸೇವಾ ಕಾರ್ಯಗಳಿಗೆ ಕೈಜೋಡಿಸಬೇಕು ಎಂದು ಟ್ರಸ್ಟ್ ಅಧ್ಯಕ್ಷ ಸಂದೀಪ್ ಬಿ. ರೆಡ್ಡಿ ಹೇಳಿದರು.

ತಾಲೂಕಿನ ಜಾತವಾರ ಗ್ರಾಮದ ಶ್ರೀ ರಾಮಾನುಜ ಸಮುದಾಯ ಭವನದಲ್ಲಿ ಶನಿವಾರ ಜಾತವಾರ, ಪಟ್ರೇನಹಳ್ಳಿ, ಹೊಸವುಡ್ಯ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಅನುಕೂಲ ವಾಗುವಂತೆ ಈಸ್ಟ್ ಪಾಯಿಂಟ್ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಜೀವ ಉಳಿಸುವ ಮಹತ್ಕಾರ್ಯಕ್ಕೆ ಕೈಜೋಡಿಸಿದ 4237 ರಕ್ತದಾನಿಗಳಿಗೆ ಕೋಟಿ ನಮನ: ಕೆ.ವಿ. ನವೀನ್ ಕಿರಣ್

ದೇಶದಲ್ಲಿ ಸರ್ಕಾರಿ ಆಸ್ಪತ್ರೆಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಖಾಸಗಿ ಆಸ್ಪತ್ರೆಗಳಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಾಗುತ್ತಿದ್ದರೂ ಮತ್ತು ವೈದ್ಯಕೀಯ ಕ್ಷೇತ್ರ ವೇಗವಾಗಿ ಬೆಳೆಯು ತ್ತಿದ್ದರೂ ಗ್ರಾಮೀಣ ಭಾಗದ ಸಾಮಾನ್ಯ ಜನರಿಗೆ ಸಮರ್ಪಕ ಆರೋಗ್ಯ ಸೇವೆ ಇನ್ನೂ ಸಂಪೂರ್ಣ ವಾಗಿ ತಲುಪಿಲ್ಲ. ಆರ್ಥಿಕ, ಸಾಮಾಜಿಕ ಹಾಗೂ ಭೌಗೋಳಿಕ ಕಾರಣಗಳಿಂದ ಅನೇಕ ಕುಟುಂಬಗಳು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿವೆ ಎಂದು ಹೇಳಿದರು.

ಈ ವಾಸ್ತವವನ್ನು ಮನಗಂಡು ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್, ಈಸ್ಟ್ ಪಾಯಿಂಟ್ ಆಸ್ಪತ್ರೆಯ ಸಹಯೋಗದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದು, ಆರಂಭಿಕ ಹಂತದಲ್ಲಿಯೇ ಕಾಯಿಲೆ ಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ದೊರಕುವಂತೆ ಮಾಡುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿಸಿದರು.

783535 ok

ಜಿಲ್ಲೆಯಲ್ಲಿ ಹೆಚ್.ಎನ್.ವ್ಯಾಲಿ ನೀರಿನ ಬಳಕೆಯ ಪರಿಣಾಮವಾಗಿ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಶಿಬಿರಗಳಲ್ಲಿ ಮಧುಮೇಹ, ರಕ್ತದೊತ್ತಡ, ಮೂತ್ರಪಿಂಡ ಸಂಬಂಧಿತ ಕಾಯಿಲೆಗಳು, ಕಣ್ಣಿನ ತೊಂದರೆಗಳು, ಮೂಳೆ ಮತ್ತು ಕೀಲು ಸಮಸ್ಯೆಗಳು, ದಂತ ಸಮಸ್ಯೆಗಳು ಹಾಗೂ ಹಿರಿಯ ನಾಗರಿಕರಲ್ಲಿ ವಯೋಸಹಜ ಕಾಯಿಲೆ ಗಳು ಹೆಚ್ಚಿನ ಪ್ರಮಾಣದಲ್ಲಿ ಪತ್ತೆಯಾಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.

ಶಿಬಿರದಲ್ಲಿ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವವರನ್ನು ಗುರುತಿಸಿ, ಅವರಿಗೆ ಈಸ್ಟ್ ಪಾಯಿಂಟ್ ಆಸ್ಪತ್ರೆಯಲ್ಲಿ ಮುಂದಿನ ಚಿಕಿತ್ಸೆ ಮತ್ತು ಅಗತ್ಯ ವೈದ್ಯಕೀಯ ಸಲಹೆ ದೊರಕುವಂತೆ ಟ್ರಸ್ಟ್ ವ್ಯವಸ್ಥೆ ಮಾಡುತ್ತಿದೆ. ಆರೋಗ್ಯ ಸೇವೆಯನ್ನು ಕೇವಲ ಚಿಕಿತ್ಸೆಗೆ ಸೀಮಿತಗೊಳಿಸದೆ, ಗ್ರಾಮೀಣ ಜನರ ಬದುಕಿನ ಗುಣಮಟ್ಟವನ್ನು ಸುಧಾರಿಸುವ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಈ ಕಾರ್ಯವನ್ನು ಮುಂದುವರಿಸಲಾಗುತ್ತಿದೆ ಎಂದು ತಿಳಿಸಿದರು.

ಸಮಾಜದಲ್ಲಿ ಆರ್ಥಿಕವಾಗಿ ಸಬಲರಾಗಿರುವವರು ಇಂತಹ ಸಮಾಜಮುಖಿ ಆರೋಗ್ಯ ಕಾರ್ಯಕ್ರ ಮಗಳಿಗೆ ಕೈಜೋಡಿಸಿದರೆ ಸಾವಿರಾರು ಕುಟುಂಬಗಳ ಬದುಕಿನಲ್ಲಿ ಆಶಾಕಿರಣ ಮೂಡಿಸಲು ಸಾಧ್ಯವಾಗುತ್ತದೆ. ನಿಸ್ವಾರ್ಥ ಸೇವೆಯ ಮೂಲಕ ಸಮಾಜದ ಆರೋಗ್ಯವನ್ನು ಕಾಪಾಡುವ ಕಾರ್ಯವೇ ನಿಜವಾದ ಮಾನವಸೇವೆ ಎಂದು ಸಂದೀಪ್ ಬಿ. ರೆಡ್ಡಿ ಕರೆ ನೀಡಿದರು.