ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gudibande News: ಗುಡಿಬಂಡೆಯಲ್ಲಿ ಸಂಜೀವಿನಿ ಯುಗಾದಿ ಮಾಸಿಕ ಸಂತೆ, ಸಾವಯವ ಉತ್ಪನ್ನಗಳ ಮಾರಾಟ

ಸಾವಯವ ಆಹಾರ ಉತ್ಪನ್ನಗಳು ಹಾಗೂ ಹಬ್ಬಕ್ಕೆ ಬೇಕಾಗುವಂತಹ ಪರಿಸರ ಸ್ನೇಹಿ ವಸ್ತು ಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ವಸ್ತುಗಳನ್ನು ಮಹಿಳಾ ಸ್ವ ಸಹಾಯ ಸಂಘಗಳ ಮಹಿಳೆಯರು ಈ ವಸ್ತುಗಳನ್ನು ತಯಾರಿಸಿದ್ದಾರೆ. ಅವುಗಳನ್ನು ಜನರು ಕೊಳ್ಳುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು

ಗುಡಿಬಂಡೆಯಲ್ಲಿ ಸಂಜೀವಿನಿ ಯುಗಾದಿ ಮಾಸಿಕ ಸಂತೆ

ಪಟ್ಟಣದ ತಾಲೂಕು ಪಂಚಾಯತಿ ಕಚೇರಿ ಮುಂಭಾಗ ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರು ಉತ್ಪಾದಿಸಿದ ಸಾವಯವ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲಾಗಿತ್ತು. -

Ashok Nayak
Ashok Nayak Mar 16, 2026 10:42 PM

ಗುಡಿಬಂಡೆ: ಪಟ್ಟಣದ ತಾಲೂಕು ಪಂಚಾಯತಿ ಕಚೇರಿ ಮುಂಭಾಗ ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಜಿಲ್ಲಾ ಪಂಚಾಯತ್, ಸಂಜೀವಿನಿ ಡೇ ಎನ್.ಆರ್.ಎಲ್.ಎಂ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರು ಉತ್ಪಾದಿಸಿದ ಸಾವಯವ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲಾಗಿತ್ತು.

ಇದನ್ನೂ ಓದಿ: Gudibande News: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ವಿವಾಹಿತೆ: ಪತಿ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲು

ಈ ವೇಳೆ ವಾಹಿನಿ ಸುರೇಶ್ ಮಾತನಾಡಿ, ಸಾವಯವ ಆಹಾರ ಉತ್ಪನ್ನಗಳು ಹಾಗೂ ಹಬ್ಬಕ್ಕೆ ಬೇಕಾಗುವಂತಹ ಪರಿಸರ ಸ್ನೇಹಿ ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ವಸ್ತುಗಳನ್ನು ಮಹಿಳಾ ಸ್ವ ಸಹಾಯ ಸಂಘಗಳ ಮಹಿಳೆಯರು ಈ ವಸ್ತುಗಳನ್ನು ತಯಾರಿಸಿದ್ದಾರೆ. ಅವುಗಳನ್ನು ಜನರು ಕೊಳ್ಳುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು.

ಮಹಿಳೆಯರು ಈ ರೀತಿಯಲ್ಲಿ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳುವುದರ ಮೂಲಕ ಆರ್ಥಿಕ ಸಫಲತೆ ಕಾಣಬಹುದಾಗಿದೆ. ಈ ನಿಟ್ಟಿನಲ್ಲಿ ಮಹಿಳೆ‌ಯರಿಗೆ ಅವಕಾಶ ಕೊಟ್ಟಂತಹ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಆಡಳಿತಕ್ಕೆ ಧನ್ಯವಾದಗಳು. ಈ ರೀತಿಯ ಕಾರ್ಯಕ್ರಮಗಳು ಮತ್ತಷ್ಟು ಆಯೋಜನೆಯಾಗಬೇಕಿದೆ ಎಂದರು.