ಗುಡಿಬಂಡೆ: ಪಟ್ಟಣದ ತಾಲೂಕು ಪಂಚಾಯತಿ ಕಚೇರಿ ಮುಂಭಾಗ ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಜಿಲ್ಲಾ ಪಂಚಾಯತ್, ಸಂಜೀವಿನಿ ಡೇ ಎನ್.ಆರ್.ಎಲ್.ಎಂ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರು ಉತ್ಪಾದಿಸಿದ ಸಾವಯವ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲಾಗಿತ್ತು.
ಇದನ್ನೂ ಓದಿ: Gudibande News: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ವಿವಾಹಿತೆ: ಪತಿ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲು
ಈ ವೇಳೆ ವಾಹಿನಿ ಸುರೇಶ್ ಮಾತನಾಡಿ, ಸಾವಯವ ಆಹಾರ ಉತ್ಪನ್ನಗಳು ಹಾಗೂ ಹಬ್ಬಕ್ಕೆ ಬೇಕಾಗುವಂತಹ ಪರಿಸರ ಸ್ನೇಹಿ ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ವಸ್ತುಗಳನ್ನು ಮಹಿಳಾ ಸ್ವ ಸಹಾಯ ಸಂಘಗಳ ಮಹಿಳೆಯರು ಈ ವಸ್ತುಗಳನ್ನು ತಯಾರಿಸಿದ್ದಾರೆ. ಅವುಗಳನ್ನು ಜನರು ಕೊಳ್ಳುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು.
ಮಹಿಳೆಯರು ಈ ರೀತಿಯಲ್ಲಿ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳುವುದರ ಮೂಲಕ ಆರ್ಥಿಕ ಸಫಲತೆ ಕಾಣಬಹುದಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಅವಕಾಶ ಕೊಟ್ಟಂತಹ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಆಡಳಿತಕ್ಕೆ ಧನ್ಯವಾದಗಳು. ಈ ರೀತಿಯ ಕಾರ್ಯಕ್ರಮಗಳು ಮತ್ತಷ್ಟು ಆಯೋಜನೆಯಾಗಬೇಕಿದೆ ಎಂದರು.