ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkabalapur News: ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ: ಕರವೇ ಜಿಲ್ಲಾದ್ಯಕ್ಷ ಎಂ.ಆರ್.ಲೋಕೇಶ್

ನಾಡು-ನುಡಿ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆ ಇಡೀ ವಿಶ್ವದಲ್ಲಿಯೇ ಅತಿ ಹೆಚ್ಚು ಶಾಖೆಗಳನ್ನು ಹೊಂದಿರುವ ಹೆಗ್ಗಳಿಕೆಯನ್ನು ಹೊಂದಿದೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನಾಡು ನುಡಿ ವಿಚಾರದಲ್ಲಿ ಹೋರಾಟ ಮಾಡುತ್ತಿರುವ ನಮ್ಮಂತಹ ನೂರಾರು ಕನ್ನಡದ ಕಟ್ಟಾಳುಗಳನ್ನು ಬೆಳೆಸಿ ನಾಯಕರನ್ನಾಗಿ ಮಾಡಿದ ಕೀರ್ತಿ ನಾರಾಯಣ ಗೌಡರಿಗೆ ಸಲ್ಲುತ್ತದೆ

ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ

Ashok Nayak Ashok Nayak Jun 12, 2025 11:35 PM

ಬಾಗೇಪಲ್ಲಿ: ಖಾಸಗಿ ಶಾಲೆಗಳ ಅಬ್ಬರಕ್ಕೆ ಸಿಕ್ಕು ಕನ್ನಡ ಶಾಲೆಗಳಿಗೆ ವಿದ್ಯಾರ್ಥಿಗಳು ವರ್ಷದಿಂದ ವರ್ಷಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಉಳಿಸಬೇಕು ಎಂದು ಹೇಳಿದರು.

ಪಟ್ಟಣದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ 59 ನೇ ಹುಟ್ಟು ಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ನೋಟ ಪುಸ್ತಕ ,ಗಿಡ ಹಾಗೂ ನಿವೃತ್ತ ನೌಕರರನ್ನು ಆತ್ಮೀಯವಾಗಿ ಸನ್ಮಾಸಿ ಮಾತನಾಡಿದರು.

ನಾಡು-ನುಡಿ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆ ಇಡೀ ವಿಶ್ವದಲ್ಲಿಯೇ ಅತಿ ಹೆಚ್ಚು ಶಾಖೆಗಳನ್ನು ಹೊಂದಿರುವ ಹೆಗ್ಗಳಿಕೆಯನ್ನು ಹೊಂದಿದೆ  ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನಾಡು ನುಡಿ ವಿಚಾರದಲ್ಲಿ ಹೋರಾಟ ಮಾಡುತ್ತಿರುವ ನಮ್ಮಂತಹ ನೂರಾರು ಕನ್ನಡದ ಕಟ್ಟಾಳುಗಳನ್ನು ಬೆಳೆಸಿ ನಾಯಕರನ್ನಾಗಿ ಮಾಡಿದ ಕೀರ್ತಿ ನಾರಾಯಣ ಗೌಡರಿಗೆ ಸಲ್ಲುತ್ತದೆ ಎಂದರು.

ಇದನ್ನೂ ಓದಿ: Tumkur (Chikkanayakanahalli) News: ಹಂದನಕೆರೆ ಗುರುಗಿರಿಸಿದ್ದೇಶ್ವರ ಮಠದ ರುದ್ರರಾಧ್ಯರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಕರವೇ ಅದ್ಯಕ್ಷ ಹರೀಶ್ ಮಾತನಾಡಿ ರಾಜ್ಯದ ಸಮಸ್ತ ಕನ್ನಡಿಗರ ಆಸ್ತಿಗಳೆಂದು ಕರೆಯಲ್ಪಡುವ ನಾಡಿನ ನೆಲ, ಜಲ, ಭಾಷೆಗಳಿಗೆ ಧಕ್ಕೆ ಬರುವಂತಹ ರೀತಿಯಲ್ಲಿ ಅನ್ಯ ಭಾಷಿಕರು ನಡೆದುಕೂಳ್ಳು ತ್ತಿರುವ ಕಾರಣ, ಸ್ವಾಭಿಮಾನಿಗಳಾದ ಕನ್ನಡಿಗರು ಹೋರಾಟ ನಡೆಸುವುದರಲ್ಲಿ ತಪ್ಪಿಲ್ಲ ಎಂದು ಹೇಳಿದರು.

ರಾಜ್ಯಾದ್ಯಕ್ಷ ಟಿ.ಎ.ನಾರಾಯಣ ಗೌಡ 59ನೇ ಹುಟ್ಟು ಹಬ್ಬದ ಪ್ರಯುಕ್ತ ತಾಲ್ಲೂಕು ಘಟಕದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಗಿಡ ,ನಿವೃತ್ತ ನೌಕರರು ಹಾಗೂ ವಿವಿಧ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಕ್ರೀಡಾ ಪಟುಗಳಿಗೆ ಸನ್ಮಾನ ಮಾಡುತ್ತಿರುವುದು ಸಂತಸ ತಂದಿದೆ ಎಂದು ಹೇಳಿ ದರು. ಶಾಲಾ ವಿದ್ಯಾರ್ಥಿಗಳಿಗೆ 1001 ಗಿಡಗಳನ್ನು ಮಕ್ಕಳಿಗೆ ಗಿಡ ವಿತರಣೆ ಹಾಗೂ ಸಸ್ಯಗಳನ್ನ ನೆಡುವ ಮೂಲಕ ವಿಶೇಷವಾಗಿ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದರು.

ಈ ಸಂದರ್ಭದಲ್ಲಿ ಬಿಇಒ ಎನ್.ವೆಂಕಟೇಶಪ್ಪ, ಆರ್.ಹನುಮಂತ ರೆಡ್ಡಿ, ಕೆ.ವಿ.ಶ್ರೀನಿವಾಸ್, ಈಶ್ವರಪ್ಪ,ಕೆ.ವಿ. ಆದಿನಾರಾಯಣ,ಕೀರ್ತಿ ಬಸಪ್ಪ ಲಗಳಿ ಹಾಗೂ ಕರವೇ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು ಹಾಜರಿದ್ದರು.