ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA KH Puttaswamy Gowda: ಮಾದಕ ವಸ್ತುಗಳಿಗೆ ಗುಡ್‌ಬೈ ಹೇಳಿ: ವಿದ್ಯಾರ್ಥಿಗಳಿಗೆ ಶಾಸಕ ಪುಟ್ಟಸ್ವಾಮಿಗೌಡ ಕಿವಿಮಾತು

ಇಂದಿನ ಯುವಕರು ಸಹವಾಸದೋಷ, ಸ್ನೇಹಿತರ ಒತ್ತಡ ಹಾಗೂ ಕುತೂಹಲದಿಂದ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿ ಕೊಳ್ಳುವತ್ತ ಗಮನಹರಿಸಿ ದುಶ್ಚಟಗಳಿಂದ ದೂರವಿರಬೇಕು

ಗೌರಿಬಿದನೂರು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾಕ್ಷ್ಯಚಿತ್ರ ಹಾಗೂ ಕಿರುನಾಟಕಗಳ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ(MLA KH Puttaswamy Gowda) ಪ್ರಶಂಸಿಸಿದರು.

ನಗರದ ಡಾ. ಹೆಚ್.ಎನ್. ಕಲಾಭವನದಲ್ಲಿ ಜಿಲ್ಲಾ ಪೊಲೀಸ್ ಹಾಗೂ ಗೌರಿಬಿದನೂರು ವೃತ್ತ ಪೊಲೀಸ್ ವತಿಯಿಂದ ಆಯೋಜಿಸಿದ್ದ "ಮಾದಕ ವಸ್ತುಗಳಿಗೆ ಹೇಳಿ ಗುಡ್‌ಬೈ" ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: Gauribidanur News: ವಿಧುರಾಶ್ವತ್ಥದಲ್ಲಿ ದೇಶಿ ಸಾಂಸ್ಕೃತಿಕ ಸಂಭ್ರಮ; ಜಾನಪದ ಕಲೆಗಳ ವೈಭವ ಅನಾವರಣ

ಇಂದಿನ ಯುವಕರು ಸಹವಾಸದೋಷ, ಸ್ನೇಹಿತರ ಒತ್ತಡ ಹಾಗೂ ಕುತೂಹಲದಿಂದ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿ ಕೊಳ್ಳುವತ್ತ ಗಮನಹರಿಸಿ ದುಶ್ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ರೈ ಮಾತನಾಡಿ, ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿಯಾಗಿದೆ. ಮಾದಕ ವಸ್ತುಗಳ ಮಾರಾಟ, ಸಾಗಾಣಿಕೆ ಅಥವಾ ಸೇವನೆ ಕಂಡುಬಂದರೆ ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ಗೌತಮ ಬುದ್ಧ ಸಾಂಸ್ಕೃತಿಕ ಸಂಘದ ಕಲಾವಿದರು ಕಿರುನಾಟಕದ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಣಾಮಕಾರಿ ಜಾಗೃತಿ ಮೂಡಿಸಿದರು.

ಪೊಲೀಸ್ ವೃತ್ತ ನಿರೀಕ್ಷಕ ಅಂಜನ್ ಕುಮಾರ್, ಉಪನಿರೀಕ್ಷಕರಾದ ವರಲಕ್ಷ್ಮಿ, ಲಲಿತಮ್ಮ, ಹರೀಶ್, ಮಮತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.