Shidlaghatta News: ಶಾಲಾ ವಾರ್ಷಿಕೋತ್ಸವ ವಿದ್ಯಾರ್ಥಿಗಳ ಸುಪ್ತಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ: ಶಾಸಕ ಬಿ.ಎನ್.ರವಿಕುಮಾರ್
ಶಾಲಾ ವಾರ್ಷಿಕೊತ್ಸವವು ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಸಾಂಸ್ಕೃತಿಕ ಸಂಭ್ರಮಗಳ ಅನಾವರಣಕ್ಕೆ ಸೂಕ್ತ ವೇದಿಕೆಯೆಂದು, ಶ್ರೀ ಸರಸ್ವತಿ ಶಾಲೆಯು ಸುಮಾರು ಸುಮಾರು ವರ್ಷಗಳ ಹಿಂದಿನಿಂದಲೂ ನಗರದಲ್ಲಿ ಒಂದು ಪ್ರತಿಷ್ಟಿತ ಶಾಲೆಯಾಗಿದ್ದು, ಗುಣಮಟ್ಟದ ಶಿಕ್ಷಣ, ಮತ್ತು ಮೌಲ್ಯಯುತ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ
-
ಶಿಡ್ಲಘಟ್ಟ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ಸರಸ್ವತಿ ವಿದ್ಯಾ ಸಂಸ್ಥೆಯ 49ನೇ ವಾರ್ಷಿಕೋತ್ಸವ ಸಮಾರಂಭವು ಶಾಲಾ ಆವರಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಸಕ ಎಸ್ ಬಿಎನ್ ರವಿಕುಮಾರ್(MLA SBN Ravikumar) ವಾರ್ಷಿಕೊತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶಾಲಾ ವಾರ್ಷಿಕೊತ್ಸವವು ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಸಾಂಸ್ಕೃತಿಕ ಸಂಭ್ರಮಗಳ ಅನಾವರಣಕ್ಕೆ ಸೂಕ್ತ ವೇದಿಕೆಯೆಂದು, ಶ್ರೀ ಸರಸ್ವತಿ ಶಾಲೆಯು ಸುಮಾರು ಸುಮಾರು ವರ್ಷಗಳ ಹಿಂದಿನಿಂದಲೂ ನಗರದಲ್ಲಿ ಒಂದು ಪ್ರತಿಷ್ಟಿತ ಶಾಲೆಯಾಗಿದ್ದು, ಗುಣಮಟ್ಟದ ಶಿಕ್ಷಣ, ಮತ್ತು ಮೌಲ್ಯಯುತ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ ಎಂದರು.
ನಂತರ ಮಾತನಾಡಿದ ತಹಸೀಲ್ದಾರ್ ಗಗನ ಸಿಂಧು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳನ್ನಾಡಿದರು. ತಾಲೂಕು ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದನ್ನೂ ಓದಿ: Shidlaghatta News: ಹೆಲ್ಮೆಟ್ ಜೀವ ರಕ್ಷಣೆ ಸಾಧ್ಯವಾಗುತ್ತದೆ
ಎನ್.ಐ.ಸಿ.ಯ ಮಾಹಿತಿ ತಂತ್ರಜ್ಞಾನ ವಿಭಾಗದ ಹಿರಿಯ ನಿರ್ದೇಶಕ ಲಕ್ಷ್ಮೀಶ ಮಾತನಾಡಿ, ಪಠ್ಯಪುಸ್ತಕದ ಜೊತೆಗೆ ನಿತ್ಯ ಪತ್ರಿಕೆಗಳನ್ನು ಓದುವ ಅಭ್ಯಾಸ ಮಾಡಿಕೊಳ್ಳಿ. ವಾರಕ್ಕೊಮ್ಮೆ ಬರುವ ಸಾಪ್ತಾಹಿಕ ಪುರವಣಿ ಯನ್ನು ಬಿಡದೆಓದಿ. ಬಹಳ ಜನರು ಮನೆಗೆ ಪತ್ರಿಕೆ ತರಿಸುವ, ಓದುವ ಹವ್ಯಾಸ ಮಾಡಿಕೊಳ್ಳುವ ಮೂಲಕ ಮಕ್ಕಳಲ್ಲಿ ಆಸಕ್ತಿ ಮೂಡಿಸುವ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಎನ್.ಶ್ರೀಕಾಂತ್ ಮುಂದಿನ ನಮ್ಮ ಶಾಲೆ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿ ನಿಲ್ಲಲಿದ್ದು ಉತ್ತಮ ಸಾಧನೆ ಮುಲಕ ನಿಮ್ಮ ಮುಂದೆ ಬರಲಿದ್ದೇವೆ ವಿಚಾರವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಕ್ ಮುನಿಯಪ್ಪ,ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ಸಿ.ಎನ್.ನಾಗೇಶ್, ನಗರ ಠಾಣೆ ಆರಕ್ಷಕ ಉಪ ನಿರೀಕ್ಷಕ ವೇಣುಗೋಪಾಲ್, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಶಿಕ್ಷಕರಾದ ಅಶ್ವತ್ಥರೆಡ್ಡಿ, ವೆಂಕಟರೆಡ್ಡಿ, ರುಕ್ಮಿಣಿ, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
'ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅದ್ಭುತವಾಗಿ ಪ್ರದರ್ಶಿಸಿದರು. ನೃತ್ಯ, ನಾಟಕ, ಸಂಗೀತಗಳು ಪ್ರೇಕ್ಷಕರನ್ನು ಮನರಂಜಿಸಿ ಮೆಚ್ಚುಗೆಗೆ ಪಾತ್ರವಾದವು. ವಿದ್ಯಾರ್ಥಿಗಳ ಪ್ರತಿಭೆ ಮತ್ತು ಶಿಕ್ಷಕರ ಮಾರ್ಗದರ್ಶನ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು."