ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gudibande News: ಮಾಚಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ಯಶಸ್ವಿ

ಚುನಾವಣೆಯ ಅಂಗವಾಗಿ ನಾಮಪತ್ರ ಸಲ್ಲಿಕೆ, ಪರಿಶೀಲನೆ, ನಾಮಪತ್ರ ಹಿಂಪಡೆಯುವಿಕೆ, ಚುನಾ ವಣಾ ಪ್ರಚಾರ, ರಹಸ್ಯ ಮತದಾನ, ಮತ ಎಣಿಕೆ, ಫಲಿತಾಂಶ ಘೋಷಣೆ, ಆಯ್ಕೆಯಾದ ಸದಸ್ಯರಿಗೆ ಪ್ರಮಾಣ ಪತ್ರ ವಿತರಣೆ ಹಾಗೂ ಪ್ರಮಾಣವಚನ ಸ್ವೀಕಾರ ಸೇರಿದಂತೆ ಎಲ್ಲ ಹಂತಗಳನ್ನು ಕ್ರಮ ಬದ್ಧವಾಗಿ ನಡೆಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತವನ್ನು ಅನುಭವಿಸಿದರು

ತಾಲೂಕಿನ ಮಾಚಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೬–೨೭ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ ಚುನಾವಣೆ ಯಶಸ್ವಿಯಾಗಿ ನಡೆಯಿತು.

ಗುಡಿಬಂಡೆ: ತಾಲೂಕಿನ ಮಾಚಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026–27ನೇ ಸಾಲಿನ ಶಾಲಾ ಸಂಸತ್ ಚುನಾವಣೆ ಯಶಸ್ವಿಯಾಗಿ ನಡೆಯಿತು. ದೇಶದ ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲೇ ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಮಹತ್ವದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲಾಯಿತು.

ಚುನಾವಣೆಯ ಅಂಗವಾಗಿ ನಾಮಪತ್ರ ಸಲ್ಲಿಕೆ, ಪರಿಶೀಲನೆ, ನಾಮಪತ್ರ ಹಿಂಪಡೆಯುವಿಕೆ, ಚುನಾ ವಣಾ ಪ್ರಚಾರ, ರಹಸ್ಯ ಮತದಾನ, ಮತ ಎಣಿಕೆ, ಫಲಿತಾಂಶ ಘೋಷಣೆ, ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ವಿತರಣೆ ಹಾಗೂ ಪ್ರಮಾಣವಚನ ಸ್ವೀಕಾರ ಸೇರಿದಂತೆ ಎಲ್ಲ ಹಂತಗಳನ್ನು ಕ್ರಮ ಬದ್ಧವಾಗಿ ನಡೆಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತವನ್ನು ಅನುಭವಿಸಿದರು.

ಇದನ್ನೂ ಓದಿ: Gudibande News: ಬಿಜೆಪಿ ಮುಖಂಡ ಸಿ.ಮುನಿರಾಜು ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ

ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ವಿ. ಶ್ರೀರಾಮಪ್ಪ, ಶಾಲಾ ಸಂಸತ್ ಚುನಾವಣೆಯ ಮೂಲಕ ಮಕ್ಕಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಚುನಾವಣಾ ಪ್ರಕ್ರಿಯೆಯ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವುದು ಮುಖ್ಯ ಉದ್ದೇಶವಾಗಿದೆ. ಅಭ್ಯರ್ಥಿಯಾಗಿ ಸ್ಪರ್ಧಿಸುವುದು, ಮತದಾರರನ್ನು ಸಂಪರ್ಕಿಸುವುದು, ಮತ ಚಲಾಯಿಸುವುದು ಹಾಗೂ ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಕಾರ್ಯವೈಖರಿಯ ಬಗ್ಗೆ ನೇರ ಅನುಭವ ಸಿಗುತ್ತದೆ. ಇಂತಹ ಚಟುವಟಿಕೆಗಳು ಮಕ್ಕಳನ್ನು ಭವಿಷ್ಯ ದಲ್ಲಿ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಈ ಮಾದರಿ ಚುನಾವಣೆ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು, ಜವಾಬ್ದಾರಿಯುತ ಮತದಾನದ ಮನೋಭಾವ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಗೌರವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು. ಚುನಾವಣಾ ಪ್ರಕ್ರಿಯೆಯನ್ನು ಶಾಲೆಯ ಶಿಕ್ಷಕರು ಯಶಸ್ವಿಯಾಗಿ ನಡೆಸಿಕೊಟ್ಟರು.