ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gudibande News: ವಿಜ್ಞಾನ ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ವೃದ್ದಿ : ಬಿ.ಅಮೀರ್ ಜಾನ್

ಇಂದಿನ ಆಧುನಿಕ ಯುಗದಲ್ಲಿ ದಿನಕ್ಕೊಂದು ಆವಿಷ್ಕಾರಗಳು ನಡೆಯುತ್ತಿದೆ. ಅದಕ್ಕೆ ಪೂರಕ ಎಂಬಂತೆ ಈ ರೀತಿಯ ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳಲ್ಲಿನ ವಿಜ್ಞಾನ ಮನೋಭಾವ ಬೆಳೆಸಲು ಸಹಕಾರಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿ ದಂತಹ ಸರ್.ಎಂ.ವಿ. ವಿಶ್ವೇಶ್ವರಯ್ಯ, ಹೆಚ್.ನರಸಿಂಹಯ್ಯ ನವರನ್ನು ಆದರ್ಶವಾಗಿ ತೆಗೆದು ಕೊಂಡು ವಿದ್ಯಾರ್ಥಿಗಳು ಅವರಂತೆ ಸಾಧನೆ ಮಾಡಬೇಕು

ಪಟ್ಟಣದ ನ್ಯೂ ಪಬ್ಲಿಕ್ ಶಾಲೆಯಲ್ಲಿ ವಿಜ್ಙಾನ ಹಾಗೂ ಕಲಾ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಗುಡಿಬಂಡೆ: ವಿಜ್ಞಾನ ಎಂಬುದು ನಿಂತ ನೀರಲ್ಲ, ಗಂಟೆಗೊಮ್ಮೆ ಬದಲಾಗುತ್ತಿರುತ್ತದೆ. ವಿಜ್ಞಾನ ವಸ್ತು ಪ್ರದರ್ಶನದಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಮಕ್ಕಳಲ್ಲಿನ ವೈಜ್ಞಾನಿಕ ಮನೋಭಾವ ವೃದ್ದಿಯಾಗುತ್ತದೆ. ಅದಕ್ಕೆ ಶಿಕ್ಷಕರು ಹಾಗೂ ಪೋಷಕರು ಸಹಕಾರ ನೀಡಬೇಕು ಎಂದು ನಿವೃತ್ತ ಉಪನ್ಯಾಸಕ ಬಿ.ಅಮೀರ್ ಜಾನ್ ತಿಳಿಸಿದರು.

ಪಟ್ಟಣದ ನ್ಯೂ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ವಿಜ್ಙಾನ ಹಾಗೂ ಕಲಾ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ದಿನಕ್ಕೊಂದು ಆವಿಷ್ಕಾರಗಳು ನಡೆಯುತ್ತಿದೆ. ಅದಕ್ಕೆ ಪೂರಕ ಎಂಬಂತೆ ಈ ರೀತಿಯ ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳಲ್ಲಿನ ವಿಜ್ಞಾನ ಮನೋಭಾವ ಬೆಳೆಸಲು ಸಹಕಾರಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿ ದಂತಹ ಸರ್.ಎಂ.ವಿ. ವಿಶ್ವೇಶ್ವರಯ್ಯ, ಹೆಚ್.ನರಸಿಂಹಯ್ಯ ನವರನ್ನು ಆದರ್ಶವಾಗಿ ತಗೆದುಕೊಂಡು ವಿದ್ಯಾರ್ಥಿಗಳು ಅವರಂತೆ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: Gudibande News: ಗುಡಿಬಂಡೆಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಸಂಪ್ರದಾಯಬದ್ದವಾಗಿ ಚಾಲನೆ ನೀಡಿದ ಅಧಿಕಾರಿಗಳು

ಬಳಿಕ ತಾಪಂ ಇಒ ನಾಗಮಣಿ ಮಾತನಾಡಿ, ಮಕ್ಕಳು ತುಂಬಾ ಅದ್ಬುತವಾಗಿ ವಿಜ್ಞಾನ ವಸ್ತು ಪ್ರದರ್ಶನ ಮಾದರಿಗಳನ್ನು ತಯಾರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಮಕ್ಕಳಿಗೆ ಇಂತಹ ವಿಜ್ಞಾನ ಪ್ರಯೋಗ ಪ್ರದರ್ಶನಗಳು ಪ್ರಾಯೋಗಿಕ ಚಿಂತನೆಯನ್ನು ಬೆಳೆಸುತ್ತವೆ. ಇಂತಹ ಚಟುವಟಿಕೆಗಳಿಂದ ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆದು, ಅವರ ಉತ್ತಮ ಭವಿಷ್ಯ ನಿರ್ಮಾಣವಾಗುತ್ತದೆ ಎಂದರು.

ಇದೇ ಸಮಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿಜ್ಞಾನ ಮಾದರಿಗಳ ಮಾಹಿತಿ ಪಡೆದ ಬಿಇಒ ಕೃಷ್ಣ ಕುಮಾರಿ ಮಾತನಾಡಿ, ಬದಲಾಗುತ್ತಿರುವ ಕಾಲಕ್ಕೆ ಅನುಗುಣವಾಗಿ ಎಲ್‌ಕೆಜಿಯಿಂದ 7ನೇ ತರಗತಿಯವರೆಗಿನ ಎಲ್ಲಾ ಮಕ್ಕಳು ಅತ್ಯಂತ ಆಕರ್ಷಕವಾದ ವಿಜ್ಞಾನ ಮತ್ತು ಕಲಾ ಮಾದರಿಗಳನ್ನು ರಚಿಸಿ ಪ್ರದರ್ಶಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ವಿವಿಧ ಖಾಸಗಿ ಮತ್ತು ಸರ್ಕಾರಿ ಶಾಲೆಯ ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಈ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಕಣ್ಮನ ಸೆಳೆಯು ವಂತಿದ್ದ ವಿದ್ಯಾರ್ಥಿಗಳ ವಿವಿಧ ಪ್ರಯೋಗಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಮನಿಕೃಷ್ಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್ ಹಾಗೂ ನ್ಯೂ ಪಬ್ಲಿಕ್ ಶಾಲೆಯ ಅಧ್ಯಕ್ಷರಾದ ಮಂಜುಳಾ, ಶಾಲೆಯ ಶಿಕ್ಷಕರಾದ ಖಲೀಲುಲ್ಲಾ, ನರೇಶ್, ಫಿರ್ದೋಸ್ ಫಾತಿಮಾ, ಯಾಸ್ಮಿನ್ ತಾಜ್, ಮಮತಾ, ಸೋನಿಯಾ ಮತ್ತು ರೋಷಿನಿ ಸೇರಿದಂತೆ ಹಲವರು ಇದ್ದರು.