ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಎಸ್.ಸಿ.ಎಸ್.ಪಿ - ಟಿ.ಎಸ್.ಪಿ. ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ನೀಡಿ : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ.

ಎಸ್.ಸಿ.ಪಿ ಯೋಜನೆಯಡಿ ಜಿಲ್ಲೆಗೆ ೩,೭೩೭.೦೬ ಕೋಟಿ ರೂ ಬಿಡುಗಡೆಯಾಗಿದ್ದು ಈ ಪೈಕಿ ೧೯೬೪.೨೩ ಕೋಟಿ ರೂ ಖರ್ಚು ಮಾಡಲಾಗಿದೆ, ಟಿ.ಎಸ್.ಪಿ ಯೋಜನೆಯಡಿ ೫೪೩.೬೫ ಕೋಟಿ ರೂ ಬಿಡುಗಡೆಯಾಗಿದ್ದು ಈ ಪೈಕಿ ೩೨೪.೭೮ ಕೋಟಿ ರೂ ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.

ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ನೀಡಿ

-

Ashok Nayak
Ashok Nayak Nov 16, 2025 12:12 AM

ಚಿಕ್ಕಬಳ್ಳಾಪುರ : ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಬೇಕು. ಡಿಸೆಂಬರ್ ಅಂತ್ಯದೊಳಗೆ ನಿಗಧಿತ ಭೌತಿಕ ಹಾಗೂ ಆರ್ಥಿಕ ಗುರಿ ಸಾಧಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅವರು ಶನಿವಾರ ನಡೆದ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಬೇಕು.

ಇದನ್ನೂ ಓದಿ: Chikkaballapur News: ನಗರದ ರಾಜಬೀದಿಗಳಲ್ಲಿ ಮಕ್ಕಳನ್ನು ಎತ್ತಿನ ಗಾಡಿಗಳಲ್ಲಿ ಕೂರಿಸಿ ಮೆರವಣಿಗೆ

ಸಂಬಂಧಿಸಿದ ಇಲಾಖೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ವಿವಿಧ ನಿಗಮಗಳ ಯೋಜನೆಯಡಿ ಕೈಗೊಳ್ಳಲಾದ ನೀರಾವರಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಮುಗಿಸಿ ಮುಂದಿನ ಸಭೆಯಲ್ಲಿ ವರದಿ ನೀಡಬೇಕು ಎಂದರು.

ಎಸ್.ಸಿ.ಪಿ ಯೋಜನೆಯಡಿ ಜಿಲ್ಲೆಗೆ ೩,೭೩೭.೦೬ ಕೋಟಿ ರೂ ಬಿಡುಗಡೆಯಾಗಿದ್ದು ಈ ಪೈಕಿ ೧೯೬೪.೨೩ ಕೋಟಿ ರೂ ಖರ್ಚು ಮಾಡಲಾಗಿದೆ, ಟಿ.ಎಸ್.ಪಿ ಯೋಜನೆಯಡಿ ೫೪೩.೬೫ ಕೋಟಿ ರೂ ಬಿಡುಗಡೆಯಾಗಿದ್ದು ಈ ಪೈಕಿ ೩೨೪.೭೮ ಕೋಟಿ ರೂ ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ತೇಜಾನಂದ ರೆಡ್ಡಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತ ರಿದ್ದರು.