ಶಿಡ್ಲಘಟ್ಟ: ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ‘ಸೇವಾ ಜ್ಯೋತಿ’ ಅಭಿಯಾನದ ಅಂಗವಾಗಿ ನಗರದ ಬಿಜೆಪಿ ಸೇವಾ ಸೌಧ ಕಚೇರಿ ಮುಂಭಾಗದಿಂದ ಪಕ್ಷದ ಕಾರ್ಯಕರ್ತರು ಬೈಕ್ ರ‍್ಯಾಲಿ ನಡೆಸಿದರು.
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಿಕ್ಕಲ್ ಆನಂದ್ ಗೌಡ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು. ಪಕ್ಷದ ಧ್ವಜಗಳನ್ನು ಹಿಡಿದು ಬೈಕ್‌ಗಳಲ್ಲಿ ಸಾಗಿದ ಕಾರ್ಯಕರ್ತರು ಚಿಕ್ಕಬಳ್ಳಾಪುರದ ಹರ್ಶೋದಯ ಪ್ಯಾಲೇಸ್‌ನಲ್ಲಿ ನಡೆಯಲಿರುವ ‘ಸೇವಾ ಜ್ಯೋತಿ’ ಕಾರ್ಯಕ್ರಮಕ್ಕೆ ತೆರಳಿದರು.
ಇದನ್ನೂ ಓದಿ: Sriramotsava Bike Rally: ಅದ್ದೂರಿಯಾಗಿ ನಡೆದ ಎರಡನೇ ವರ್ಷದ ಶ್ರೀರಾಮೋತ್ಸವ ಬೈಕ್ ರ್ಯಾಲಿ
ಈ ಸಂದರ್ಭದಲ್ಲಿ ಮಾತನಾಡಿದ ಸಿಕ್ಕಲ್ ಆನಂದ್ ಗೌಡ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ‘ಸೇವಾ ಜ್ಯೋತಿ’ ಅಭಿಯಾನ ಆಯೋಜಿಸಲಾಗಿದೆ ಎಂದು ಹೇಳಿದರು.
ಸೇವೆ ಮತ್ತು ರಾಷ್ಟ್ರ ನಿರ್ಮಾಣದ ಸಂಕಲ್ಪದೊಂದಿಗೆ ಬಿಜೆಪಿ ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸುತ್ತಿದ್ದು, ಪಕ್ಷದ ವಿಚಾರಧಾರೆ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಮುಂದುವರಿಸಲಾಗುವುದು. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ರ‍್ಯಾಲಿಯಲ್ಲಿ ನಗರ ಮಂಡಲ ಅಧ್ಯಕ್ಷ ದೇವರಾಜ್, ಚೆಲುವರಾಜ್, ಶಂಕರ್, ಬಾಲು, ಶ್ರೀರಾಮ್ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.