ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shamanur Shivashankarappa: ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಶಾಮನೂರು ಶಿವಶಂಕರಪ್ಪ

ಶಾಮನೂರು ಶಿವಶಂಕರಪ್ಪ ಅವರು ಶಿಕ್ಷಣ ಕ್ಷೇತ್ರದಲ್ಲಿ ಲಕ್ಷಾಂತರ ಮಂದಿಗೆ ಶಿಕ್ಷಣ, ಉದ್ಯೋಗ, ಆರೋಗ್ಯ ನೀಡಿದ್ದ ಮಹಾನ್ ವ್ಯಕ್ತಿಯಾಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಮನೆಮನೆ ಮಾತಾಗಿದ್ದರು. ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆ ತುಂಬಲಾಗದ ನಷ್ಟವಾಗಿದೆ

ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಶಾಮನೂರು ಶಿವಶಂಕರಪ್ಪ

-

Ashok Nayak
Ashok Nayak Dec 17, 2025 12:16 AM

ಶಿಡ್ಲಘಟ್ಟ: ಶಾಮನೂರು ಶಿವಶಂಕರಪ್ಪ(Shamanur Shivashankarappa) ಅವರು ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜತೆಗೆ ರಾಜ್ಯದ ಶಾಸಕರಾಗಿ, ಸಚಿವರಾಗಿ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿದವರು. ಅವರ ಅಗಲಿಕೆಯ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪುಟ್ಟು ಅಂಜಿನಪ್ಪ ತಿಳಿಸಿದರು.

ಇದನ್ನೂ ಓದಿ: Shidlaghatta News: ರಥೋತ್ಸವದಂತಹ ಧಾರ್ಮಿಕ ಆಚರಣೆಗಳು ಗ್ರಾಮೀಣರಲ್ಲಿ ಒಗ್ಗಟ್ಟಿಗೆ ಕಾರಣವಾಗಲಿದೆ : ಕಾಂಗ್ರೆಸ್ ಮುಖಂಡ ರಾಜೀವ್ ಗೌಡ

ಶಿಡ್ಲಘಟ್ಟ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಾಮನೂರು ಶಿವಶಂಕರಪ್ಪ ಅವರು ಶಿಕ್ಷಣ ಕ್ಷೇತ್ರದಲ್ಲಿ ಲಕ್ಷಾಂತರ ಮಂದಿಗೆ ಶಿಕ್ಷಣ, ಉದ್ಯೋಗ, ಆರೋಗ್ಯ ನೀಡಿದ್ದ ಮಹಾನ್ ವ್ಯಕ್ತಿಯಾಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಮನೆಮನೆ ಮಾತಾಗಿದ್ದರು. ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆ ತುಂಬಲಾಗದ ನಷ್ಟವಾಗಿದೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಪ್ರಭಾವಿ ನಾಯಕರಾಗಿ ಸೇವೆ ಸಲ್ಲಿಸಿದ್ದರು.

ಸತತ 6 ಬಾರಿ ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಬಾಪೂಜಿ ವಿದ್ಯಾಸಂಸ್ಥೆ ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯದ ಶ್ರೇಯೋ ಭಿವೃದ್ಧಿಗೆ ಶ್ರಮಿಸಿದರು ಎಂದರು.