PU Results: ಶಾಂತಿನಿಕೇತನ್ಸ್ ಪಿ.ಯು. ಕಾಲೇಜಿಗೆ ಶೇ 95.89% ಫಲಿತಾಂಶ: ಸತತ 16 ವರ್ಷದಿಂದ ಅತ್ಯುತ್ತಮ ಫಲಿತಾಂಶ ಪಡೆದ ಹೆಗ್ಗಳಿಕೆ
ಕಾಲೇಜಿನಲ್ಲಿ ಒಟ್ಟು 341 ವಿದ್ಯಾಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 327 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಒಟ್ಟು ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ 119 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಉಳಿದ 189 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಹಾಗೂ ೧೯ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣ ರಾಗಿರುತ್ತಾರೆ.
-
ಚಿಕ್ಕಬಳ್ಳಾಪುರ: ಮಹಮದ್ ಯೂನಸ್ ಖಾನ್ ಎಂಬ ವಿದ್ಯಾರ್ಥಿಯು ವಿಜ್ಞಾನ ವಿಭಾಗದಲ್ಲಿ 584 ಅಂಕಗಳನ್ನು ಪಡೆದಿರುತ್ತಾರೆ. ಲಕ್ಷೀಪ್ರಿಯ ವಿದ್ಯಾರ್ಥಿಯು ವಾಣಿಜ್ಯ ವಿಭಾಗದಲ್ಲಿ 583 ಅಂಕಗಳನ್ನು ಪಡೆದಿರುತ್ತಾರೆ.
119 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯನ್ನು ಹೊಂದಿರುತ್ತಾರೆ. ಇವರೆಲ್ಲರಿಗೂ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಮೇಡಂ ಮತ್ತು ಚರ‍್ಮನ್ ವಿ.ಎನ್. ಕುಮಾರ್ ಸರ್ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಶಾಂತಿನಿಕೇತನ್ಸ್ ಪಿ.ಯು. ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ 95.89% ರಷ್ಟು ಫಲಿತಾಂಶ ಪಡೆಯುವುದರ ಮೂಲಕ ಕಾಲೇಜಿಗೆ ಮತ್ತು ಜಿಲ್ಲೆಗೆ ಹಿರಿಮೆಯನ್ನು ತಂದಿರುತ್ತಾರೆ.
ಈ ಬಾರಿಯ ಕಾಲೇಜಿನ ಫಲಿತಾಂಶವು ಜಿಲ್ಲಾ ಮತ್ತು ರಾಜ್ಯಮಟ್ಟದ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಕಾಲೇಜುಗಳ ಫಲಿತಾಂಶದಲ್ಲಿ ಉತ್ತಮ ಸ್ಥಾನ ಪಡೆದುಕೊಂಡು ಗಮನ ಸೆಳೆದಿದೆ.
ಇದನ್ನೂ ಓದಿ: 2nd PUC Results: ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ
ಕಾಲೇಜಿನಲ್ಲಿ ಒಟ್ಟು 341 ವಿದ್ಯಾಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 327 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಒಟ್ಟು ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ 119 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಉಳಿದ 189 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಹಾಗೂ ೧೯ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಸತತ 16 ವರ್ಷಗಳಿಂದಲೂ ಚಿಕ್ಕಬಳ್ಳಾಪುರದ ಕಾಲೇಜುಗಳಲ್ಲೇ ಉತ್ತಮ ಫಲಿತಾಂಶ ಕೊಟ್ಟು , ಪ್ರಥಮ ಸ್ಥಾನದಲ್ಲಿರುವ ಶಾಂತಿನಿಕೇತನ್ಸ್ ಪಿ.ಯು. ಕಾಲೇಜಿನಲ್ಲಿ ೨೦೨೬-೨೭ನೇ ಸಾಲಿಗೆ ಪ್ರಥಮ ಪಿ.ಯು.ಸಿ. ದಾಖಲಾತಿ ಪ್ರಾರಂಭವಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಮತ್ತು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗುವುದು.
ಈ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕ ವೃಂದದವರು ಪಡೆಯ ಬೇಕೆಂದು ಕಾಲೇಜಿನ ಆಡಳಿತ ಮಂಡಳಿ ಕೋರಿದೆ.