Shocking News: ಅನ್ಯ ವ್ಯಕ್ತಿ ಜೊತೆ ಲೈಂಗಿಕ ಕ್ರಿಯೆ ನಡೆಸಲು ಅಪ್ರಾಪ್ತ ಮಗಳನ್ನು ಒತ್ತಾಯಿಸಿದ ಪಿಶಾಚಿ ತಂದೆ!
Shocking News: ಕೇವಲ ಹದಿನಾರು ವರ್ಷದ ಮಗಳಿಗೆ ಹೀಗೆ ಬಲವಂತ ಮಾಡಿದ ರಾಕ್ಷಸೀ ಸ್ವಭಾವದ ತಂದೆಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸಲು ಬಾಲಕಿ ಒಪ್ಪದಿದ್ದಾಗ ಈ ದುರುಳ ತಂದೆ ಆಕೆಗೆ ಹಲ್ಲೆ ಮಾಡಿದ್ದಾನೆ. ನಂತರ ಪೊಲೀಸರು ಬಂದು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೇರೊಬ್ಬನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹೆತ್ತ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಲವಂತ (Physical Abuse) ಮಾಡಿದ ಶಾಕಿಂಗ್ ಘಟನೆ (Shocking News) ಚಿಕ್ಕಬಳ್ಳಾಪುರ (Chikkaballapura news) ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ್ದು, ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆಕೆಯನ್ನು ರಕ್ಷಣೆ ಮಾಡಿದ್ದಾರೆ.
ಕೇವಲ ಹದಿನಾರು ವರ್ಷದ ಮಗಳಿಗೆ ಹೀಗೆ ಬಲವಂತ ಮಾಡಿದ ರಾಕ್ಷಸೀ ಸ್ವಭಾವದ ತಂದೆಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸಲು ಬಾಲಕಿ ಒಪ್ಪದಿದ್ದಾಗ ಈ ದುರುಳ ತಂದೆ ಆಕೆಗೆ ಹಲ್ಲೆ ಮಾಡಿದ್ದಾನೆ. ನಂತರ ಬಲವಂತವಾಗಿ ರೂಮಿನಲ್ಲಿ ಕೂಡಿ ಹಾಕಿದ್ದು, ತಾನು ಹೇಳಿದಂತೆ ಮಾಡದಿದ್ದರೆ ಊಟ ತಿಂಡಿ ಕೊಡುವುದಿಲ್ಲ ಎಂದು ಬೆದರಿಸಿದ್ದಾನೆ. ನಂತರ ಪೊಲೀಸರು ಬಂದು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.
ಸದ್ಯ ಸಂತ್ರಸ್ತ ಬಾಲಕಿಯನ್ನು ಚಿಕ್ಕಬಳ್ಳಾಪುರದ ಬಾಲಮಂದಿರಕ್ಕೆ ಕರೆದೊಯ್ದು ಅಲ್ಲಿ ಆರೈಕೆ ಮಾಡಲಾಗುತ್ತಿದೆ. ಬಾಲಕಿ ಮಾನಸಿಕ ಹಾಗೂ ದೈಹಿಕವಾಗಿ ಆಘಾತಕ್ಕೀಡಾಗಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಪೊಲೀಸರು ತಂದೆಯನ್ನು ವಿಚಾರಿಸಿಕೊಳ್ಳುತ್ತಿದ್ದಾರೆ.
ತಂದೆಯ ಜೊತೆಗೆ, ಆತ ಯಾರೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಲು ಒತ್ತಾಯಿಸಿದ್ದನೋ ಆ ವ್ಯಕ್ತಿಯನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಪ್ರಕರಣದಲ್ಲಿ ಪೋಕ್ಸೋ ಕೇಸನ್ನೂ ಹಾಕುವ ಕುರಿತು ಚಿಂತಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: POCSO Case: ರಾಜ್ಯದಲ್ಲಿ ಪ್ರತಿದಿನ 10 ಪೋಕ್ಸೋ ಕೇಸ್ ದಾಖಲು!