ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shops caught burnt: ಶಾರ್ಟ್ ಸರ್ಕ್ಯೂಟ್‌ಗೆ ಲಕ್ಷಾಂತರ ನಷ್ಟ: ಮೊಬೈಲ್, ಎಲೆಕ್ಟ್ರಾನಿಕ್ಸ್, ಟೀ ಶಾಪ್ ಭಸ್ಮ!

ತಾಲ್ಲೂಕಿನ ಕೆಂಚಾರ್ಲಹಳ್ಳಿ ಗ್ರಾಮದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮದ ಶಿರೀಶ್, ಶಶಿಕುಮಾರ್ ಮತ್ತು ಸುರೇಶ್ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿ,ಟೀ ಅಂಗಡಿ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಶಾರ್ಟ್ ಸರ್ಕ್ಯೂಟ್‌ಗೆ ಮೊಬೈಲ್, ಎಲೆಕ್ಟ್ರಾನಿಕ್ಸ್, ಟೀ ಶಾಪ್ ಭಸ್ಮ!

-

Profile
Ashok Nayak Jul 21, 2026 1:15 PM

ಬೆಂಕಿ ಕೆನ್ನಾಲಿಗೆಗೆ ತಡರಾತ್ರಿ ಸುಟ್ಟು ಭಸ್ಮವಾಯ್ತು 3 ಅಂಗಡಿಗಳು

ಚಿಂತಾಮಣಿಯಲ್ಲಿ ದಿಗಿಲು ಮೂಡಿಸಿದ ದೃಶ್ಯ!

ಚಿಂತಾಮಣಿ: ತಾಲ್ಲೂಕಿನ ಕೆಂಚಾರ್ಲಹಳ್ಳಿ ಗ್ರಾಮದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮದ ಶಿರೀಶ್, ಶಶಿಕುಮಾರ್ ಮತ್ತು ಸುರೇಶ್ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿ,ಟೀ ಅಂಗಡಿ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಇದನ್ನೂ ಓದಿ: Bengaluru Metro fire: ಬೆಂಗಳೂರಿನ ನಾಗಸಂದ್ರ ಮೆಟ್ರೋ ಸ್ಟೇಷನ್‌ನಲ್ಲಿ ಬೆಂಕಿ ಅವಘಡ; ಆತಂಕದ ಸ್ಥಿತಿ ನಿರ್ಮಾಣ

ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕರಕ ಲಾಗಿದ್ದು, ಮಾಲೀಕರಿಗೆ ಭಾರಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.ಘಟನಾ ಸ್ಥಳದಲ್ಲಿ ಸಾರ್ವಜನಿಕರ ಆತಂಕ ಮೂಡಿಸಿತ್ತು.

ಅಗ್ನಿಶಾಮಕ ಸಿಬ್ಬಂದಿ ಕಾರ್ಯಕ್ಷಮತೆ

ವಿಷಯ ತಿಳಿಯುತ್ತಿದ್ದಂತೆ ಕೆಂಚಾರ್ಲಹಳ್ಳಿ ಗ್ರಾಮಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ತಕ್ಷಣವೇ ಕಾರ್ಯಾಚರಣೆ ಕೈಗೊಂಡು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಪಕ್ಕದ ಕಟ್ಟಡಗಳಿಗೆ ಹಾಗೂ ಅಂಗಡಿಗಳಿಗೆ ಬೆಂಕಿ ವ್ಯಾಪಿಸು ವುದು ತಪ್ಪಿದಂತಾಗಿದೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.