ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

K M Suresh: ಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್ ಪರ ಅ.15ರಂದು ಶಕ್ತಿ ಪ್ರದರ್ಶನ

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್ ಅವರಿಗೆ ಬೆಂಬಲ ನೀಡುವ ಉದ್ದೇಶದಿಂದ ನಡೆಯಲಿರುವ ಈ ಕಾರ್ಯಕ್ರಮ ರಾಜಕೀಯವಾಗಿ ಮಹತ್ವ ಪಡೆದು ಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿರುವುದರಿಂದ ಮೈತ್ರಿ ಪಕ್ಷಗಳ ಸಂಘಟಿತ ಪ್ರಚಾರಕ್ಕೆ ವೇದಿಕೆ ಸಿದ್ಧವಾಗಿದೆ.

ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್ ಪರ ಅ.15ರಂದು ಶಕ್ತಿ ಪ್ರದರ್ಶನ

-

Profile
Ashok Nayak Oct 14, 2026 10:33 PM

ಚಿಕ್ಕಬಳ್ಳಾಪುರ: ಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಂ.ಸುರೇಶ್(K M Suresh) ಅವರ ಪರವಾಗಿ ಗುರುವಾರ ಚಿಕ್ಕಬಳ್ಳಾಪುರ ನಗರದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ನಾಯಕರು ಚುನಾವಣಾ ಪ್ರಚಾರಕ್ಕೆ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ.

ನಗರದ ಹೊರವಲಯದಲ್ಲಿರುವ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಪ್ರಚಾರ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ(H D Kumaraswamy), ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ(Ashwath Narayan), ಬಿಜೆಪಿ ಜಿಲ್ಲಾ ಉಸ್ತುವಾರಿ ಬ್ಯಾಟರಂಗೇಗೌಡ,ಜೆ ಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ,ಜಿಲ್ಲಾಧ್ಯಕ್ಷ ಮುಕ್ತಾ ಮುನಿಯಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಮಚಂದ್ರಗೌಡ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: Chikkaballapur News: ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ; ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಿ

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್ ಅವರಿಗೆ ಬೆಂಬಲ ನೀಡುವ ಉದ್ದೇಶದಿಂದ ನಡೆಯಲಿರುವ ಈ ಕಾರ್ಯಕ್ರಮ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳ ಲಿರುವುದರಿಂದ ಮೈತ್ರಿ ಪಕ್ಷಗಳ ಸಂಘಟಿತ ಪ್ರಚಾರಕ್ಕೆ ವೇದಿಕೆ ಸಿದ್ಧವಾಗಿದೆ.

ಕಾರ್ಯಕ್ರಮದಲ್ಲಿ ಪದವೀಧರ ಮತದಾರರನ್ನು ಉದ್ದೇಶಿಸಿ ನಾಯಕರು ಮಾತನಾಡುವ ನಿರೀಕ್ಷೆ ಯಿದ್ದು, ಅಭ್ಯರ್ಥಿಯ ಪರ ಮತಯಾಚನೆ ಹಾಗೂ ಚುನಾವಣಾ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.

ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಅಭ್ಯರ್ಥಿಯ ಗೆಲುವಿಗೆ ಮೈತ್ರಿ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಈ ಸಭೆ ಗಮನ ಸೆಳೆಯಲಿದೆ.