ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಭಗೀರಥ ಜಯಂತಿಯನ್ನು ಏ.23ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ|| ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.
ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಉಪಸ್ಥಿತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ಎಸ್ ತಂಗಡಗಿ(Shivaraj S Thangadagi)ವಹಿಸ ಲಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಇ. ಪ್ರದೀಪ್ ಈಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ.ಮಲ್ಲೇಶ್ ಬಾಬು, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್. ಸಂಪಂಗಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಅಧ್ಯಕ್ಷ ಡಾ. ಬಿ.ಸಿ. ಮುದ್ದುಗಂಗಾಧರ್, ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷ ಆಂಜಿನಪ್ಪ, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಗಮದ ಅಧ್ಯಕ್ಷ ಬಿ.ಜಿ. ಗಣೇಶ್, ಶಾಸಕರುಗಳಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತು ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ, ಡಾ. ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್ ಶಿವಶಂಕರರೆಡ್ಡಿ, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್ ರವರು ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ. ಎನ್. ಮಂಜುಳ ಭಾಗ ವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ರಾಜ್ಯ ಉಪಾಧ್ಯಕ್ಷ ಬಿ.ವೆಂಕಟೇಶ್, ಶ್ರೀ ಭಗೀರಥ ಉಪ್ಪಾರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಎನ್.ಜಯರಾಮ್, ತಾಲ್ಲೂಕು ಅಧ್ಯಕ್ಷ ವಿ.ಕೃಷ್ಣಪ್ಪ ಭಾಗವಹಿಸುವರು.
ಮುಖ್ಯ ಉಪನ್ಯಾಸಕರಾಗಿ ಭೂಮಾಪನ ಇಲಾಖೆಯ ನಿವೃತ್ತ ಭೂದಾಖಲೆಗಳ ಜಂಟಿ ನಿರ್ದೇಶಕ ವಿ.ಅಜ್ಜಪ್ಪ ನೀಡಲಿದ್ದಾರೆ.
ಜಿಲ್ಲಾ ಮತ್ತು ತಾಲ್ಲೂಕು ಶ್ರೀ ಭಗೀರಥ ಉಪ್ಪಾರ ಕ್ಷೇಮಾಭಿವೃದ್ಧಿ ಸಂಘದ, ಪದಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಮತ್ತು ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಮಸ್ತ ನಾಗರಿಕರು ಭಾಗವಹಿಸುವರು.