Minister Dr. M.C. Sudhakar: ಅ.7ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಮಹೋತ್ಸವ : ಜಿಲ್ಲಾಉಸ್ತುವಾರಿ ಸಚಿವ ಭಾಗಿ
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ(Maharshi Valmiki Jayanthi) ಮಹೋತ್ಸವವನ್ನು ಅ.೭ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಬಿ.ಬಿ. ರಸ್ತೆ, ವಾಪಸಂದ್ರದ ಶ್ರೀ ರಂಗನಾಥಸ್ವಾಮಿ ದೇವಾಲಯದಿಂದ ಮೆರವಣಿಗೆ ಕಾರ್ಯಕ್ರಮವನ್ನು ಹಾಗೂ ಅಪರಾಹ್ನ ೧೨:೩೦ ಗಂಟೆಗೆ ನಗರದ ಜಿಲ್ಲಾ ಕನ್ನಡ ಭವನದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ

-

ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ(Maharshi Valmiki Jayanthi) ಮಹೋತ್ಸವವನ್ನು ಅ.೭ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಬಿ.ಬಿ. ರಸ್ತೆ, ವಾಪಸಂದ್ರದ ಶ್ರೀ ರಂಗನಾಥಸ್ವಾಮಿ ದೇವಾಲಯದಿಂದ ಮೆರವಣಿಗೆ ಕಾರ್ಯಕ್ರಮವನ್ನು ಹಾಗೂ ಅಪರಾಹ್ನ ೧೨:೩೦ ಗಂಟೆಗೆ ನಗರದ ಜಿಲ್ಲಾ ಕನ್ನಡ ಭವನದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್ ವಹಿಸಲಿದ್ದಾರೆ.
ಇದನ್ನೂ ಓದಿ: Dr M C Sudhakar: ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಉನ್ನತ ಶಿಕ್ಷಣ ಸಚಿವರಿಗೆ ಮನವಿ
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ.ಮಲ್ಲೇಶ್ ಬಾಬು, ಶಾಸಕರುಗಳಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತು ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ, ಡಾ. ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್ ಶಿವಶಂಕರರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ನಗರಸಭೆ ಅಧ್ಯಕ್ಷ ಎ. ಗಜೇಂದ್ರ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಡಾ. ಎನ್.ಮಂಜುಳ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್ .ಡಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಟಿ.ಯೋಗೇಶ್ ಭಾಗವಹಿಸುವರು.
ದೇವನಹಳ್ಳಿ ತಾಲ್ಲೂಕು ಶ್ರೀ ರಾಮಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಸಹ ಶಿಕ್ಷಕ ಕೆ.ಎಸ್. ನಾಗರಾಜ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಜಾಗೃತಿ & ಉಸ್ತುವಾರಿ ಸಮಿತಿ ಸದಸ್ಯರು, ಸರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮಹರ್ಷಿ ವಾಲ್ಮೀಕಿ ಸಂಘದ ಮುಖಂಡರುಗಳು ಹಾಗೂ ದಲಿತ ಸಂಘಟನೆಗಳ ಮುಖಂಡರುಗಳು, ಪದಾಧಿಕಾರಿಗಳು ಹಾಗೂ ಸಮಸ್ತ ನಾಗರೀಕರು ಭಾಗವಹಿಸಲಿದ್ದಾರೆ.