ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shidlaghatta News: ಶ್ರೀರಾಮ ಶೋಭಾಯಾತ್ರೆ ಧಾರ್ಮಿಕ ಜಾಗೃತಿ ಮತ್ತು ಸಾಂಸ್ಕೃತಿಕ ಮೌಲ್ಯಗಳ ಪ್ರತೀಕ: ವೆಂಕಟೇಶ್

ಶ್ರೀರಾಮನ ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಹಾಗೂ ಯುವ ಪೀಳಿಗೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಜೂ.7ರಂದು ಶ್ರೀರಾಮ ಶೋಭಾಯಾತ್ರೆಯನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದು ಶ್ರೀರಾಮ ಶೋಭಾಯಾತ್ರೆ ಆಚರಣೆ ಸಮಿತಿ ಅಧ್ಯಕ್ಷ ವೆಂಕಟೇಶ್ ತಿಳಿಸಿದರು.

ಪ್ರಚಾರ ವಾಹನಕ್ಕೆ ಚಾಲನೆ; ಶೋಭಾಯಾತ್ರೆಗೆ ಭರ್ಜರಿ ಸಿದ್ಧತೆ

-

Profile
Ashok Nayak Jun 1, 2026 10:53 PM

ಶಿಡ್ಲಘಟ್ಟ: ಶ್ರೀರಾಮನ ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಹಾಗೂ ಯುವ ಪೀಳಿಗೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಜೂ.7ರಂದು ಶ್ರೀರಾಮ ಶೋಭಾಯಾತ್ರೆಯನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದು ಶ್ರೀರಾಮ ಶೋಭಾಯಾತ್ರೆ ಆಚರಣೆ ಸಮಿತಿ ಅಧ್ಯಕ್ಷ ವೆಂಕಟೇಶ್ ತಿಳಿಸಿದರು.

ನಗರದ ಬಸ್ ನಿಲ್ದಾಣದ ಸಮೀಪದ ಸಲ್ಲಾಪುರಂ ದೇವಾಲಯದ ಮುಂಭಾಗದಲ್ಲಿ ಸೋಮವಾರ ಶೋಭಾಯಾತ್ರೆಯ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ನಗರದ ಹೊರವಲಯದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಿಂದ ಶೋಭಾ ಯಾತ್ರೆ ಆರಂಭವಾಗಲಿದ್ದು, ನಗರದ ಪ್ರಮುಖ ಬೀದಿಗಳ ಮೂಲಕ ಸಂಚರಿಸಲಿದೆ. ವಿವಿಧ ಕಲಾತಂಡಗಳು, ಭಜನಾ ಮಂಡಳಿಗಳು ಹಾಗೂ ಸಾಂಸ್ಕೃತಿಕ ತಂಡಗಳು ಭಾಗವಹಿಸ ಲಿದ್ದು, ಸಾವಿರಾರು ಭಕ್ತರು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕಾರ್ಯ ಕ್ರಮವನ್ನು ಶಾಂತಿಯುತವಾಗಿ ಹಾಗೂ ವೈಭವಯುತವಾಗಿ ನಡೆಸಲು ಅಗತ್ಯ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Shidlaghatta News: ಯುವಜನತೆ ಗುರಿ ಹೊಂದಿ ಮುಂದೆ ಸಾಗಬೇಕು: ಪ್ರಾಂಶುಪಾಲ ಡಾ.ಜಿ.ಮುರಳಿ ಆನಂದ್

ಆಚರಣೆ ಸಮಿತಿಯ ಉಪಾಧ್ಯಕ್ಷರು ಮಾತನಾಡಿ, ಶ್ರೀರಾಮ ಶೋಭಾಯಾತ್ರೆ ಯಾವುದೇ ಕಾರಣಕ್ಕೂ ರಾಜಕೀಯ ಕಾರ್ಯಕ್ರಮವಲ್ಲ. ಇದು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವಾಗಿದ್ದು, ಸಮಾಜದಲ್ಲಿ ಏಕತೆ, ಸೌಹಾರ್ದತೆ ಮತ್ತು ಭಕ್ತಿಭಾವ ಬೆಳೆಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಗಳಾಗಿ ರಘು ಸಕಲೇಶಪುರ ಹಾಗೂ ಮುಖ್ಯ ಭಾಷಣ ಕಾರರಾಗಿ ದಿಕ್ಸೂಚಿ ಹಾರಿಕಾ ಮಂಜುನಾಥ್ ಭಾಗವಹಿಸಲಿದ್ದು, ಅವರ ಸಂದೇಶಗಳು ಯುವಜನತೆಗೆ ಪ್ರೇರಣೆಯಾಗಲಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆಚರಣೆ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್, ಅನಿಲ್ ಕುಮಾರ್ ಜಿ.ಕೆ., ನಾಗೇಶ್, ಭರತ್, ರವಿಚಂದ್ರ, ವೆಂಕೋಬರಾವ್, ಲಕ್ಷ್ಮಿಕಾಂತ್, ಕಿರಣ್, ಅಜಿತ್, ರಂಜಿತ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತ ರಿದ್ದರು.