ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬಿಂದಿಗೆ ಹಿಡಿದು ಪಂಚಾಯಿತಿಗೆ ಮುತ್ತಿಗೆ: ನೀರಿಗಾಗಿ ದೇವರ ಮಳ್ಳೂರು ಮಹಿಳೆಯರ ಗಟ್ಟಿಯಾದ ಪ್ರತಿಭಟನೆ..!

ಪಂಚಾಯಿತಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರಕಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಅಧಿಕಾರಿಗಳ ನಿರ್ಲಕ್ಷ್ಯ ದಿಂದಲೇ ಸಮಸ್ಯೆ ಗಂಭೀರ ವಾಗಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. “ಕುಡಿಯುವ ನೀರು ನಮ್ಮ ಮೂಲಭೂತ ಹಕ್ಕು. ತಕ್ಷಣ ನೀರು ಒದಗಿಸಬೇಕು” ಎಂದು ಘೋಷಣೆ ಕೂಗಿದರು

ಶಿಡ್ಲಘಟ್ಟ: ತಾಲೂಕಿನ ದೇವರ ಮಳ್ಳೂರು ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಮಹಿಳೆಯರು ಬಿಂದಿಗೆ ಹಿಡಿದು ತೀವ್ರ ಪ್ರತಿಭಟನೆ ನಡೆಸಿದರು. ಹಲವು ದಿನಗಳಿಂದ ಗ್ರಾಮದಲ್ಲಿ ನೀರು ಸರಬರಾಜು ಸ್ಥಗಿತಗೊಂಡಿದ್ದು, ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರು ದೂರದೂರಿನಿಂದ ನೀರು ತರಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: Shidlaghatta News: ಶಿಡ್ಲಘಟ್ಟದಲ್ಲಿ ಪೂಜಮ್ಮ ದೇವಿ ಕರಗ ಮಹೋತ್ಸವ ವೈಭವ: ಭಕ್ತರ ಸಾಗರ

ಈ ಕುರಿತು ಪಂಚಾಯಿತಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರಕಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಅಧಿಕಾರಿಗಳ ನಿರ್ಲಕ್ಷ್ಯ ದಿಂದಲೇ ಸಮಸ್ಯೆ ಗಂಭೀರವಾಗಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. “ಕುಡಿಯುವ ನೀರು ನಮ್ಮ ಮೂಲಭೂತ ಹಕ್ಕು. ತಕ್ಷಣ ನೀರು ಒದಗಿಸಬೇಕು” ಎಂದು ಘೋಷಣೆ ಕೂಗಿದರು.

ಸ್ಥಳಕ್ಕೆ ಆಗಮಿಸಿದ ಪಿಡಿಒ ಹಾಗೂ ಪಂಚಾಯಿತಿ ಸೆಕ್ರೆಟರಿ ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ಸಮಸ್ಯೆ ಪರಿಹಾರಕ್ಕಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಅವರು ಮುಂದಿನ ಗುರುವಾರದವರೆಗೆ ಸಮಯ ನೀಡುವಂತೆ ಮನವಿ ಮಾಡಿದರು.

ಮಹಿಳೆಯರು ತಾತ್ಕಾಲಿಕವಾಗಿ ಪ್ರತಿಭಟನೆ ಸ್ಥಗಿತಗೊಳಿಸಿದರೂ, ನಿಗದಿತ ಅವಧಿಯೊಳಗೆ ಶಾಶ್ವತ ಪರಿಹಾರ ದೊರಕದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಂಜುನಾಥ್, ಶಿವಮೂರ್ತಿ, ನಯನ್, ರಘು, ಸಂತೋಷ್, ವೆಂಕಟಮ್ಮ, ನಾರಾಯಣಮ್ಮ, ಮಂಜುಳಾ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.