ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು ಬೆಳೆಸಲು ಗೀತ ಗಾಯನ ಸ್ಪರ್ಧೆ ಸಹಕಾರಿ: ಗಿರಿಧರ್

ಜಾನಪದ ಕ್ಷೇತ್ರಕ್ಕೆ ಚನ್ನಬಸಪ್ಪ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಜಾನಪದ ಗೀತೆಗಳ ಬಗ್ಗೆ ಆಸಕ್ತಿ ಮೂಡಿಸುವುದು ಸ್ಪರ್ಧೆಯ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರೋವರ್ಸ್ ಮತ್ತು ರೆಂಜರ್ಸ್ ವಿದ್ಯಾರ್ಥಿಗಳಿಗೆ ಜಾನಪದ ಗೀತ ಗಾಯನ ಸ್ಪರ್ಧೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು ಬೆಳೆಸಲು ಗೀತ ಗಾಯನ ಸ್ಪರ್ಧೆ ಸಹಕಾರಿ

-

Profile
Ashok Nayak Oct 24, 2026 11:52 PM

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಚಿಕ್ಕ ವಯಸ್ಸಿನಿಂದಲೇ ದೇಶಭಕ್ತಿ, ಶಿಸ್ತು, ಸಂಯಮ ಹಾಗೂ ಸೇವಾ ಮನೋಭಾವ ಬೆಳೆಸುವಲ್ಲಿ ಗೀತ ಗಾಯನ ಸ್ಪರ್ಧೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್(Bharat Scouts and Guides) ಜಿಲ್ಲಾ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಗಿರಿಧರ್ ತಿಳಿಸಿದರು.

ನಗರದ ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶನಿವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ದೇಶಭಕ್ತಿ ಹಾಗೂ ಜಾನಪದ ಗೀತ ಗಾಯನ ಸ್ಪರ್ಧೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿ ಸುವುದರ ಜೊತೆಗೆ ದೇಶದ ಸಂಸ್ಕೃತಿ, ಪರಂಪರೆ ಮತ್ತು ದೇಶಪ್ರೇಮದ ಮೌಲ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಜಾನಪದ ಕ್ಷೇತ್ರಕ್ಕೆ ಚನ್ನಬಸಪ್ಪ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಜಾನಪದ ಗೀತೆಗಳ ಬಗ್ಗೆ ಆಸಕ್ತಿ ಮೂಡಿಸುವುದು ಸ್ಪರ್ಧೆಯ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರೋವರ್ಸ್ ಮತ್ತು ರೆಂಜರ್ಸ್ ವಿದ್ಯಾರ್ಥಿಗಳಿಗೆ ಜಾನಪದ ಗೀತ ಗಾಯನ ಸ್ಪರ್ಧೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ; Chikkabalalpur News: ಭೂಮಿ ವಿವಾದದಲ್ಲಿ ಹಲ್ಲೆ, ಗುಡಿಸಲು ತೆರವು ಆರೋಪ: ಸಂತ್ರಸ್ತರಿಗೆ ರಕ್ಷಣೆ ನೀಡುವಂತೆ ಅಂಬೇಡ್ಕರ್ ಸೇನೆ ಆಗ್ರಹ

ತಾಲ್ಲೂಕು ಮಟ್ಟದ ಸ್ಪರ್ಧೆಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ತಂಡಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ದೇಶಭಕ್ತಿ ಮತ್ತು ಜಾನಪದ ಗೀತೆಗಳನ್ನು ಪ್ರಸ್ತುತಪಡಿಸಿದವು. ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ದೇಶದ ಮೇಲಿನ ಪ್ರೀತಿ, ನಾಡಿನ ಸಂಸ್ಕೃತಿ ಹಾಗೂ ಜಾನಪದ ಪರಂಪರೆಯನ್ನು ಬಿಂಬಿಸುವ ಗೀತೆಗಳನ್ನು ಹಾಡಿ ಗಮನ ಸೆಳೆದರು.

ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ತಂಡಗಳಿಗೆ ಪ್ರಮಾಣಪತ್ರ ಮತ್ತು ಪದಕಗಳನ್ನು ವಿತರಿಸಲಾಯಿತು. ಪ್ರಥಮ ಸ್ಥಾನ ಪಡೆದ ತಂಡಗಳು ಬೆಂಗಳೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಅಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತರಲಿ ಎಂದು ಗಿರಿಧರ್ ಆಶಿಸಿದರು.

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಸಂಸ್ಥೆ ಆದ್ಯತೆ ನೀಡುತ್ತಿದ್ದು, ತರಬೇತಿ, ಆರೋಗ್ಯ, ಕ್ರೀಡೆ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವರ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಬೆಳೆಸಲು ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

ಸ್ಪರ್ಧೆಯ ತೀರ್ಪುಗಾರರಾಗಿ ಶಾಂತಲಾ ಮತ್ತು ನಂದೀಶ್ ಕಾರ್ಯನಿರ್ವಹಿಸಿದರು. ಈ ಸಂದರ್ಭ ದಲ್ಲಿ ಗೈಡ್ಸ್ ವಿಭಾಗದ ಜಿಲ್ಲಾ ಆಯುಕ್ತೆ ಉಮಾ, ಜಿಲ್ಲಾ ತರಬೇತಿ ಆಯುಕ್ತೆ ಲಕ್ಷ್ಮೀನಾಯಕ್, ಸ್ಕೌಟ್ಸ್ ವಿಭಾಗದ ತರಬೇತಿ ಆಯುಕ್ತ ರಾಮಪ್ರಸಾದ್, ಸಂಸ್ಥೆಯ ಖಜಾಂಚಿ ಚಂದ್ರಕಲಾ, ಎಎಲ್‌ಟಿ ನಾಗಲಕ್ಷ್ಮಿ, ನಾರಾಯಣಸ್ವಾಮಿ, ದಳನಾಯಕಿ ರಶೀದ, ಸ್ಕೌಟ್ಸ್ ಮಾಸ್ಟರ್‌ಗಳಾದ ನರಸಿಂಹ ಮೂರ್ತಿ, ಕದಿರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.