ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನಗರದಲ್ಲಿ ಶೇ.50, ಗ್ರಾಮಾಂತರದಲ್ಲಿ ಶೇ.61 ಎಸ್‌ಐಆರ್ ಪ್ರಗತಿ: ಎನ್ಯೂಮರೇಷನ್ ಫಾರಂ ಸಲ್ಲಿಕೆಯಲ್ಲಿ ನಿರ್ಲಕ್ಷ್ಯ ಬೇಡ: ತಹಶೀಲ್ದಾರ್ ಗಗನ ಸಿಂಧು

ತಾಲೂಕು ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ನಿಖರ ಹಾಗೂ ನವೀಕೃತವಾಗಿಡುವ ಉದ್ದೇಶದಿಂದ ಎಸ್‌ಐಆರ್ ಪ್ರಕ್ರಿಯೆ ನಡೆಯು ತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಎನ್ಯೂಮರೇಷನ್ ಫಾರಂ ಅನ್ನು ಕಡ್ಡಾಯವಾಗಿ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸಲ್ಲಿಸಬೇಕು

ನಗರದಲ್ಲಿ ಶೇ.50, ಗ್ರಾಮಾಂತರದಲ್ಲಿ ಶೇ.61 ಎಸ್‌ಐಆರ್ ಪ್ರಗತಿ

-

Profile
Ashok Nayak Jul 15, 2026 12:53 PM

ಶಿಡ್ಲಘಟ್ಟ: ತಾಲೂಕಿನ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವು ಉತ್ತಮವಾಗಿ ಸಾಗು ತ್ತಿದ್ದು, ನಗರ ಪ್ರದೇಶದಲ್ಲಿ ಶೇ.50 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಶೇ.61ರಷ್ಟು ಪ್ರಗತಿ ದಾಖಲಾಗಿದೆ ಎಂದು ತಹಶೀಲ್ದಾರ್ ಎನ್. ಗಗನ ಸಿಂಧು ತಿಳಿಸಿದರು.

ತಾಲೂಕು ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ನಿಖರ ಹಾಗೂ ನವೀಕೃತವಾಗಿಡುವ ಉದ್ದೇಶದಿಂದ ಎಸ್‌ಐಆರ್ ಪ್ರಕ್ರಿಯೆ ನಡೆಯು ತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಎನ್ಯೂಮರೇಷನ್ ಫಾರಂ ಅನ್ನು ಕಡ್ಡಾಯವಾಗಿ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Shidlaghatta News: ಎಸ್‌ಐಆರ್ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ, ಮತದಾನದ ಹಕ್ಕು ಉಳಿಸಿಕೊಳ್ಳಿ: ತಹಶೀಲ್ದಾರ್ ಗಗನ ಸಿಂಧು

ಜಂಟಿ ಕೃಷಿ ನಿರ್ದೇಶಕರು ಹಾಗೂ ಮತದಾರರ ನೋಂದಣಾಧಿಕಾರಿ ಎಸ್.ಎಸ್. ಅಬೀದ್ ಮಾತನಾಡಿ, ಬಿಎಲ್‌ಒಗಳು ಮನೆ ಮನೆಗೆ ತೆರಳಿ ಫಾರಂ ವಿತರಣೆ ಹಾಗೂ ಸಂಗ್ರಹ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಸರಿಯಾದ ಮಾಹಿತಿ ಯೊಂದಿಗೆ ಫಾರಂ ಸಲ್ಲಿಸಿ ಚುನಾವಣಾ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

*

2002ಕ್ಕೂ ಮೊದಲು ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರು ಅಗತ್ಯ ದಾಖಲೆಗಳು ತಕ್ಷಣ ಲಭ್ಯವಿಲ್ಲದಿದ್ದರೂ ಮೊದಲು ಎನ್ಯೂಮರೇಷನ್ ಫಾರಂಗೆ ಸಹಿ ಮಾಡಿ ಬಿಎಲ್‌ಒಗಳಿಗೆ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಫಾರಂ ಸಲ್ಲಿಕೆಯನ್ನು ನಿರ್ಲಕ್ಷಿಸಬಾರದು.