ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Health Camp: ಎಸ್.ಗೊಲ್ಲಹಳ್ಳಿಯಲ್ಲಿ ಆರನೇ ಆರೋಗ್ಯ ಶಿಬಿರ; ಅಗತ್ಯವಿರುವವರಿಗೆ ಉಚಿತ ಔಷಧಿ, ಕನ್ನಡಕ ಹಾಗೂ ಶಸ್ತ್ರಚಿಕಿತ್ಸೆ ವ್ಯವಸ್ಥೆ

ಶಿಬಿರದಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದ 400ಕ್ಕೂ ಹೆಚ್ಚು ಮಂದಿ ಭಾಗವಹಿಸಿ, ಹೃದಯ, ಕಣ್ಣು, ಮೂಳೆ, ಕಿವಿ-ಮೂಗು-ಗಂಟಲು, ಚರ್ಮ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ತಪಾಸಣೆ ಮಾಡಿಸಿಕೊಂಡರು. ರೋಗಿಗಳಿಗೆ ಅಗತ್ಯ ವೈದ್ಯಕೀಯ ಸಲಹೆ ನೀಡುವುದರ ಜತೆಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಯಿತು. ಅಗತ್ಯವಿರುವವರಿಗೆ ಕನ್ನಡಕಗಳನ್ನೂ ವಿತರಿಸಲಾಯಿತು.

ಬಡವರ ಆರೋಗ್ಯಕ್ಕೆ ಉಚಿತ ಶಿಬಿರ; 400ಕ್ಕೂ ಹೆಚ್ಚು ಮಂದಿಗೆ ತಜ್ಞರಿಂದ ತಪಾಸಣೆ

-

Profile
Ashok Nayak Aug 31, 2026 12:26 PM

ಚಿಕ್ಕಬಳ್ಳಾಪುರ: ಬಡ ಹಾಗೂ ಅಗತ್ಯವಿರುವ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆಯ ಸಹಯೋಗದಲ್ಲಿ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ಬಿ. ರೆಡ್ಡಿ ಅವರ ವತಿಯಿಂದ ತಾಲ್ಲೂಕಿನ ಎಸ್.ಗೊಲ್ಲಹಳ್ಳಿ ಗ್ರಾಮದಲ್ಲಿ ಆರನೇ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರದಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದ 400ಕ್ಕೂ ಹೆಚ್ಚು ಮಂದಿ ಭಾಗವಹಿಸಿ, ಹೃದಯ, ಕಣ್ಣು, ಮೂಳೆ, ಕಿವಿ-ಮೂಗು-ಗಂಟಲು, ಚರ್ಮ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ತಪಾಸಣೆ ಮಾಡಿಸಿಕೊಂಡರು. ರೋಗಿಗಳಿಗೆ ಅಗತ್ಯ ವೈದ್ಯಕೀಯ ಸಲಹೆ ನೀಡುವುದರ ಜತೆಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಯಿತು. ಅಗತ್ಯವಿರುವವರಿಗೆ ಕನ್ನಡಕಗಳನ್ನೂ ವಿತರಿಸಲಾಯಿತು.

ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ ಮತ್ತೆ ಗ್ರಾಮಕ್ಕೆ ಕರೆತರುವ ವ್ಯವಸ್ಥೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದರು.

ಇದನ್ನೂ ಓದಿ: Vishwavani Health: ಜೆನ್ ಝೀಗಳಲ್ಲಿ ಹೆಚ್ಚುತ್ತಿದೆ ಎಚ್ಐವಿ ಸೋಂಕಿತರ ಸಂಖ್ಯೆ; ಕಾರಣವೇನು?

ಈ ಸಂದರ್ಭದಲ್ಲಿ ಮಾತನಾಡಿದ ಸಂದೀಪ್ ಬಿ. ರೆಡ್ಡಿ, “ಬಡವರಿಗೆ ಜೀವನ ನಿರ್ವಹಣೆಯೇ ಕಷ್ಟವಾಗಿರುವ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆಗಳು ಎದುರಾದರೆ ವೈದ್ಯಕೀಯ ವೆಚ್ಚ ಭರಿಸುವುದು ಮತ್ತಷ್ಟು ಹೊರೆಯಾಗುತ್ತದೆ. ಇಂತಹ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸಲಾಗುತ್ತಿದೆ” ಎಂದರು.

Health camp_2

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ಲಭ್ಯವಾದರೆ ಇಂತಹ ಶಿಬಿರಗಳ ಅವಶ್ಯಕತೆ ಕಡಿಮೆಯಾಗಲಿದೆ. ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯುವಂತಾಗಬೇಕು ಎಂದು ಅವರು ಹೇಳಿದರು. ಶಿಬಿರದಲ್ಲಿ ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಲಾಗಿರುವವರು ಸೋಮವಾರ ಬೆಂಗಳೂರಿಗೆ ತೆರಳುವ ವ್ಯವಸ್ಥೆಯ ಸದುಪಯೋಗ ಪಡೆದು ಕೊಳ್ಳುವಂತೆ ಮನವಿ ಮಾಡಿದರು.

ನಾಗೇಂದ್ರ ರಾಜೀನಾಮೆ ತಡವಾದರೂ ಸ್ವಾಗತಾರ್ಹ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಸಂದೀಪ್ ರೆಡ್ಡಿ, “ಆರೋಪ ಎದುರಿಸುತ್ತಿದ್ದ ನಾಗೇಂದ್ರ ಅವರು ಈ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು. ತಡವಾದರೂ ಇದೀಗ ರಾಜೀನಾಮೆ ನೀಡಿರುವುದು ಒಳ್ಳೆಯ ಬೆಳವಣಿಗೆ” ಎಂದರು.

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ. ಇದೀಗ ಖಾಲಿಯಾಗಿರುವ ಸಚಿವ ಸ್ಥಾನಕ್ಕೆ ಈ ಎರಡೂ ಜಿಲ್ಲೆಗಳಲ್ಲಿ ಕನಿಷ್ಠ ಒಬ್ಬರಿಗಾದರೂ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.