Shidlaghatta News: ಮಹನೀಯರ ಮಾರ್ಗದಲ್ಲಿ ಸಾಗಿದರೆ ಸಮಾಜ ಅಭಿವೃದ್ಧಿ: ಶಾಸಕ ಬಿ.ಎನ್.ರವಿಕುಮಾರ್
ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಮಹನೀಯರ ಆದರ್ಶಗಳನ್ನು ಅಳವಡಿಸಿ ಕೊಂಡರೆ ಸಮಾಜದ ಅಭಿವೃದ್ಧಿಗೆ ದಾರಿಯಾಗುತ್ತದೆ. ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ಮಾಡಲು ಎಲ್ಲರೂ ಒಂದಾಗಿ ಶ್ರಮಿಸಬೇಕು. ಮತದಾರರು ನೀಡಿದ ಅಧಿಕಾರವನ್ನು ಗೌರವದಿಂದ ಸ್ವೀಕರಿಸಿ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರ ತತ್ವಗಳನ್ನು ಅನುಸರಿಸಿ ಎಲ್ಲಾ ಸಮುದಾಯಗಳ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡು ತ್ತಿರುವುದಾಗಿ ತಿಳಿಸಿದರು
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಬಸವೇಶ್ವರ ಜಯಂತೋತ್ಸವದಲ್ಲಿ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. -
ಶಿಡ್ಲಘಟ್ಟ:12ನೇ ಶತಮಾನದಲ್ಲೇ ಸಮಾನತೆ, ಸತ್ಯ ಹಾಗೂ ಶ್ರಮದ ಮಹತ್ವವನ್ನು ಸಾರಿದ ಬಸವಣ್ಣನವರು ದೇಶದ ಅಭಿವೃದ್ಧಿಗೆ ಮಾರ್ಗದರ್ಶಕರಾಗಿದ್ದಾರೆ. ಇಂದಿಗೂ ಅವರ ತತ್ವಗಳನ್ನು ಜಗತ್ತಿನಾದ್ಯಂತ ಕೊಂಡಾಡಲಾಗುತ್ತಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್(MLA B.N. Ravikumar) ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾದ ಶ್ರೀ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ಮಹನೀಯರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: Shidlaghatta News: ಬಡವರಿಗೆ ಮನೆಗಾಗಿ ಹೋರಾಟಕ್ಕೆ ಘೋಷಣೆ: ಡಾ.ಬಿ.ಎನ್.ವೆಂಕಟೇಶ್
ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಮಹನೀಯರ ಆದರ್ಶಗಳನ್ನು ಅಳವಡಿಸಿ ಕೊಂಡರೆ ಸಮಾಜದ ಅಭಿವೃದ್ಧಿಗೆ ದಾರಿಯಾಗುತ್ತದೆ. ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ಮಾಡಲು ಎಲ್ಲರೂ ಒಂದಾಗಿ ಶ್ರಮಿಸಬೇಕು. ಮತದಾರರು ನೀಡಿದ ಅಧಿಕಾರವನ್ನು ಗೌರವದಿಂದ ಸ್ವೀಕರಿಸಿ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರ ತತ್ವಗಳನ್ನು ಅನುಸರಿಸಿ ಎಲ್ಲಾ ಸಮುದಾಯಗಳ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡು ತ್ತಿರುವುದಾಗಿ ತಿಳಿಸಿದರು.
ತಹಶೀಲ್ದಾರ್ ಗಗನ ಸಿಂಧು ಮಾತನಾಡಿ, ಬಸವಣ್ಣನವರ ಸಂದೇಶಗಳು ಇಂದಿನ ಯುವಜನತೆಗೆ ದಾರಿದೀಪವಾಗಿವೆ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ,
ಇಒ ಹೇಮಾವತಿ ಆರ್, ಆರೋಗ್ಯಾಧಿಕಾರಿ ವೆಂಕಟೇಶ್ ಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ವೃತ್ತ ನಿರೀಕ್ಷಕ ಆನಂದ್, ವಕೀಲ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ,ಬಸವೇಶ್ವರ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಬಿ.ಸಿ. ನಂದೀಶ್,ಬಿ.ಎನ್. ಜಗದೀಶ್, ಕಾರ್ಯದರ್ಶಿ ಚಂದ್ರಶೇಖರ್ ಬಾಬು, ಶಿವಕುಮಾರ್, ಖಜಾಂಚಿ ನಾಗರಾಜ್,ನಗರ್ತ ಮಂಡಳಿ ಅಧ್ಯಕ್ಷ ಶಿವಶಂಕರ್, ಉಪಾಧ್ಯಕ್ಷ ಎಸ್. ನಾಗರಾಜ್, ವಿಶ್ವವಾಣಿ ತಾಲೂಕು ವರದಿಗಾರ ಎಸ್ ಮಾನಸ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.