ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಬಿ.ಬಿ. ರಸ್ತೆಯ ಎರಡೂ ಬದಿಯ ಮಣ್ಣು ತೆರವು; ವಾಹನ ಸವಾರರಿಗೆ ನಿರಾಳ

ರಸ್ತೆಯ ಎರಡೂ ಬದಿಗಳಲ್ಲಿ ಮಣ್ಣು ಜಮೆಯಾಗಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿತ್ತು. ವಿಶೇಷವಾಗಿ ಬೆಳಗಿನ ವೇಳೆಯಲ್ಲಿ ಹೂ ಮಾರುಕಟ್ಟೆಗೆ ತೆರಳುವ ರೈತರು ಹಾಗೂ ಇತರೆ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದು, ಹಲವರು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿದ್ದವು.

ಚಿಕ್ಕಬಳ್ಳಾಪುರ: ನಗರದ ಬಿ.ಬಿ. ರಸ್ತೆಯ ಶನಿಮಹಾತ್ಮ ದೇವಾಲಯದಿಂದ ಅಗಲಗುರ್ಕಿ ದ್ವಾರ ದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಸುಮಾರು ಐದು ಅಡಿ ಅಗಲದಲ್ಲಿ ಜಮೆಯಾಗಿದ್ದ ಮಣ್ಣನ್ನು ನಗರಸಭೆ ವತಿಯಿಂದ ತೆರವುಗೊಳಿಸುವ ಕಾರ್ಯಾಚರಣೆ ಸೋಮವಾರ ಕೈಗೊಳ್ಳಲಾಯಿತು.

ರಸ್ತೆಯ ಎರಡೂ ಬದಿಗಳಲ್ಲಿ ಮಣ್ಣು ಜಮೆಯಾಗಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿತ್ತು. ವಿಶೇಷವಾಗಿ ಬೆಳಗಿನ ವೇಳೆಯಲ್ಲಿ ಹೂ ಮಾರುಕಟ್ಟೆಗೆ ತೆರಳುವ ರೈತರು ಹಾಗೂ ಇತರೆ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದು, ಹಲವರು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿದ್ದವು. ಈ ಸಮಸ್ಯೆ ಕುರಿತು ಪೊಲೀಸ್ ಇಲಾಖೆ, ನಗರಸಭೆ ಹಾಗೂ ನಗರಾಭಿವೃದ್ಧಿ ಯೋಜನಾ ನಿರ್ದೇಶನಾಲಯಕ್ಕೆ ತಾಲೂಕು ಕೃಷಿಕ ಸಮಾಜವು ಹಲವು ಬಾರಿ ಮನವಿ ಸಲ್ಲಿಸಿತ್ತು.

ಇದನ್ನೂ ಓದಿ: Chinthamani News: ವಯೋನಿವೃತ್ತ ವೆಂಕಟಚಲಪತಿ ಎನ್.ದಂಪತಿಗೆ ಗಣ್ಯರಿಂದ ಆತ್ಮೀಯ ಸನ್ಮಾನ

ಮನವಿಗೆ ಸ್ಪಂದಿಸಿದ ನಗರಸಭೆ, ಮುಖ್ಯ ಎಂಜಿನಿಯರ್ ಉಮಾಶಂಕರ್ ನೇತೃತ್ವದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಸಿತು. ರಸ್ತೆಗೆ ಗಟ್ಟಿಯಾಗಿ ಅಂಟಿಕೊಂಡಿದ್ದ ಮಣ್ಣನ್ನು ಟ್ಯಾಂಕರ್ ಮೂಲಕ ನೀರು ಸಿಂಪಡಿಸಿ ಯಂತ್ರೋಪಕರಣಗಳ ಸಹಾಯದಿಂದ ಸಂಪೂರ್ಣವಾಗಿ ಸ್ವಚ್ಛ ಗೊಳಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ ಮಾತನಾಡಿ, ನಗರಸಭೆ ನಮ್ಮ ಮನವಿಗೆ ಸ್ಪಂದಿಸಿ ಮಣ್ಣು ತೆಗೆಯುತ್ತಿರುವುದು ಸಂತೋಷದ ವಿಚಾರ. ಇದಕ್ಕಾಗಿ ನಗರಸಭೆ ಆಯುಕ್ತರಿಗೆ  ಇಂಜಿನಿಯರ್ ಗಳಿಗೆ ಧನ್ಯವಾದ ಹೇಳುತ್ತೇನೆ.

ಇದೇ ರಸ್ತೆಯ ರೈಲ್ವೆ ಗೇಟ್ ಸಮೀಪ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು, ಶಾಲಾ ವಾಹನಗಳು, ಹೂ ಮಾರುಕಟ್ಟೆಗೆ ತೆರಳುವ ರೈತರು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದರು.