ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

B N Ravikumar: ಕುಮಾರಸ್ವಾಮಿ ಮೂರನೇ ಬಾರಿ ಸಿಎಂ ಆದಾಗ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ: ಬಿ.ಎನ್.ರವಿಕುಮಾರ್

ತಾಲ್ಲೂಕಿನ ಹಂಡಿಗನಾಳ ಗ್ರಾಮದ ಕೆ.ವಿ. ಭವನದ ಆವರಣದಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಅಂಗನವಾಡಿ, ಆಶಾ ಹಾಗೂ ಅಕ್ಷರ ದಾಸೋಹ ಕಾರ್ಯಕರ್ತೆಯರಿಗೆ ಆಯೋಜಿಸಿದ್ದ ಬಾಗಿನೋ ತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರನ್ನು ಗೌರವಿಸುವ ಹಾಗೂ ಅವರ ಸೇವೆಯನ್ನು ಗುರುತಿಸುವ ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ತಾಲ್ಲೂಕಿನಲ್ಲೂ ನಡೆಯಬೇಕು

ಮಹಿಳಾ ಕಾರ್ಯಕರ್ತೆಯರ ಗೌರವಕ್ಕೆ ಶಿಡ್ಲಘಟ್ಟದಲ್ಲಿ ವಿಶೇಷ ಬಾಗಿನೋತ್ಸವ

-

Profile
Ashok Nayak Sep 13, 2026 11:27 PM

ಶಿಡ್ಲಘಟ್ಟ: ಎಚ್.ಡಿ.ಕುಮಾರಸ್ವಾಮಿ(H D Kumaraswamy) ಅವರು ಮೂರನೇ ಬಾರಿ ಮುಖ್ಯ ಮಂತ್ರಿಯಾದ ಸಂದರ್ಭದಲ್ಲಿ ಕ್ಷೇತ್ರದ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿರುವ ಅಂಗನವಾಡಿ, ಆಶಾ ಹಾಗೂ ಅಕ್ಷರ ದಾಸೋಹ ಕಾರ್ಯಕರ್ತರ ಬೇಡಿಕೆಗಳಿಗೂ ಸೂಕ್ತ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್(MLA B N Ravikumar) ಹೇಳಿದರು.

ತಾಲ್ಲೂಕಿನ ಹಂಡಿಗನಾಳ ಗ್ರಾಮದ ಕೆ.ವಿ. ಭವನದ ಆವರಣದಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಅಂಗನವಾಡಿ, ಆಶಾ ಹಾಗೂ ಅಕ್ಷರ ದಾಸೋಹ ಕಾರ್ಯಕರ್ತೆಯರಿಗೆ ಆಯೋಜಿಸಿದ್ದ ಬಾಗಿನೋ ತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರನ್ನು ಗೌರವಿಸುವ ಹಾಗೂ ಅವರ ಸೇವೆಯನ್ನು ಗುರುತಿಸುವ ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ತಾಲ್ಲೂಕಿನಲ್ಲೂ ನಡೆಯಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಇದನ್ನೂ ಓದಿ: Shidlaghatta News: ಶಿಡ್ಲಘಟ್ಟ ನಗರದಲ್ಲಿ ಪಿಎಸ್ಐ ಸುನಿಲ್ ನೇತೃತ್ವದಲ್ಲಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮಕ್ಕಳ ಆರೋಗ್ಯ, ಪೌಷ್ಟಿಕತೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಂಗನವಾಡಿ, ಆಶಾ ಮತ್ತು ಅಕ್ಷರ ದಾಸೋಹ ಕಾರ್ಯಕರ್ತರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳು ಜನರಿಗೆ ತಲುಪುವಲ್ಲಿ ಇವರ ಪಾತ್ರ ಮಹತ್ವ ದ್ದಾಗಿದೆ. ಹೀಗಾಗಿ ಅವರ ಸೇವೆಯನ್ನು ಗುರುತಿಸಿ ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದರು.

ದೇಶದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಹೆಚ್ಚಿಸುವಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಹತ್ವದ ಕೊಡುಗೆ ನೀಡಿದ್ದಾರೆ. ಮಹಿಳೆಯರು ಹಾಗೂ ವಿವಿಧ ವರ್ಗಗಳ ಹಕ್ಕುಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅವರು ಕೈಗೊಂಡ ಕ್ರಮಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ವೆಂಕಟೇಶಮೂರ್ತಿ, ಬಿಇಒ ಪಿ.ಸ್ವಾಮಿ, ಸುಬ್ಬಾರೆಡ್ಡಿ, ಬಂಕ್ ಮುನಿಯಪ್ಪ, ರಾಮಯ್ಯ, ತಾದೂರು ರಘು, ಉಮೇಶ್, ರಮೇಶ್, ನಗರಸಭೆ ಮಾಜಿ ಸದಸ್ಯ ಅನಿಲ್ ಕುಮಾರ್, ಗಜೇಂದ್ರ, ಕೈವಾರ ಆವಲಪ್ಪ, ಕೃಷ್ಣಾರೆಡ್ಡಿ, ಪಿಎಲ್‌ಡಿ ಸುರೇಶ್, ಲಕ್ಷ್ಮೀನಾರಾಯಣ್, ಜಿಲ್ಲಾಜಾಗೃತಿ ಸಮಿತಿ ಜಗದೀಶ್, ಮೇಲೂರು ಮಂಜುನಾಥ್, ತಹಶೀಲ್ದಾರ್ ಗಗನ ಸಿಂಧು, ಇಒ ಆರ್.ಹೇಮಾವತಿ, ನಗರಸಭೆ ಪೌರಾಯುಕ್ತೆ ಅಮೃತ ಜಿ., ಸಿಡಿಪಿಒ ವಿದ್ಯಾ ವಸ್ತ್ರದ, ರೂಪಸಿ ರಮೇಶ್ ಸೇರಿದಂತೆ ಮುಖಂಡರು, ನಗರಸಭೆ ಮಾಜಿ ಸದಸ್ಯರು, ಅಂಗನವಾಡಿ, ಆಶಾ ಹಾಗೂ ಅಕ್ಷರ ದಾಸೋಹ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಂಪ್ರದಾಯದ ಮೂಲಕ ಮಹಿಳೆಯರಿಗೆ ಗೌರವ
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಹೆಣ್ಣು ಮಕ್ಕಳಿಗೆ ಬಾಗಿನ ನೀಡುವ ಕಾರ್ಯಕ್ರಮದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಅವರು ಸ್ವತಃ ಅಣ್ಣನ ಸ್ನಾನದಲ್ಲಿ ನಿಂತು ಬಾಗಿನ ಅರ್ಪಿಸಿದ ಕ್ಷಣ ವಿಶೇಷ ಗಮನ ಸೆಳೆಯಿತು. ಮಹಿಳೆಯರನ್ನು ಗೌರವಿಸುವ ಸಂಪ್ರದಾಯವನ್ನು ಜನಪ್ರತಿನಿಧಿಯೊಬ್ಬರು ಸ್ವತಃ ಪಾಲಿಸಿದ ದೃಶ್ಯ ಕಂಡು ವೇದಿಕೆಯಲ್ಲಿದ್ದ ಅಧಿಕಾರಿಗಳು ಹಾಗೂ ಗಣ್ಯರು ಭಾವುಕರಾದರು.

ಅಂಗನವಾಡಿ, ಆಶಾ ಹಾಗೂ ಅಕ್ಷರ ದಾಸೋಹ ಕಾರ್ಯಕರ್ತೆಯರ ಸೇವೆಯನ್ನು ಗುರುತಿಸಿ ಅವರಿಗೆ ಬಾಗಿನದ ಮೂಲಕ ಗೌರವ ಸಲ್ಲಿಸಿರುವುದು ಕಾರ್ಯಕ್ರಮದ ವಿಶೇಷವಾಗಿತ್ತು. ಇಂತಹ ಗೌರವದ ಕಾರ್ಯಕ್ರಮಗಳು ಶಿಡ್ಲಘಟ್ಟಕ್ಕೆ ಮಾತ್ರ ಸೀಮಿತವಾಗದೆ ಪ್ರತಿಯೊಂದು ತಾಲ್ಲೂಕಿನಲ್ಲೂ ನಡೆಯಬೇಕು ಎಂಬ ಅಭಿಪ್ರಾಯವೂ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.