Chikkaballapur News: ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ: ಜಿಲ್ಲೆಯಲ್ಲಿ ಸಹಾಯವಾಣಿ ಕೇಂದ್ರಗಳ ಸ್ಥಾಪನೆ: 25,584 ಮತದಾರರು; ಸೆ.29ಕ್ಕೆ ಅಧಿಸೂಚನೆ, ಅ.23ರಂದು ಮತದಾನ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು 25,584 ಪದವೀಧರ ಮತದಾರ ರಿದ್ದು, 14,597 ಪುರುಷರು ಹಾಗೂ 10,987 ಮಹಿಳಾ ಮತದಾರರು ಇದ್ದಾರೆ. ಅರ್ಹ ಪದವೀಧರರು ಸೆ.29ರೊಳಗಾಗಿ ನಮೂನೆ-18ರಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗುವಂತೆ ಮನವಿ ಮಾಡಿದರು.
-
ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ- 2026 ಕ್ಕೆ ಜಿಲ್ಲೆಯಲ್ಲಿ ಸಿದ್ಧತೆ ಚುರುಕುಗೊಂಡಿದ್ದು, ಮತದಾರರು ಹಾಗೂ ಸಾರ್ವಜನಿಕರಿಗೆ ಚುನಾವಣೆಗೆ ಸಂಬಂಧಿಸಿದ ಮಾಹಿತಿ ಮತ್ತು ಮಾರ್ಗದರ್ಶನ ಒದಗಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಚುನಾವಣಾ ಸಿದ್ಧತೆ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿ ನೀಡಿದ ಅವರು, ಸೆ.29ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು 25,584 ಪದವೀಧರ ಮತದಾರರಿದ್ದು, 14,597 ಪುರುಷರು ಹಾಗೂ 10,987 ಮಹಿಳಾ ಮತದಾರರು ಇದ್ದಾರೆ. ಅರ್ಹ ಪದವೀಧರರು ಸೆ.29ರೊಳಗಾಗಿ ನಮೂನೆ-18ರಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಯಾಗುವಂತೆ ಮನವಿ ಮಾಡಿದರು.
ಇದನ್ನೂ ಓದಿ: Chikkaballapur News: ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಖಂಡಿಸಿ ಮನವಿ
ಚುನಾವಣಾ ವೇಳಾಪಟ್ಟಿಯಂತೆ ಅ.6 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಅ.7ರಂದು ನಾಮ ಪತ್ರಗಳ ಪರಿಶೀಲನೆ ಹಾಗೂ ಅ.9ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಅ.23ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅ.27ರಂದು ಮತಗಳ ಎಣಿಕೆ ನಡೆಯಲಿದೆ. ಅ.31ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಚುನಾವಣಾ ಮಾದರಿ ನೀತಿ ಸಂಹಿತೆ(Model Code of Conduct for Elections) ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲೆಯಲ್ಲಿ 15 ಫ್ಲೈಯಿಂಗ್ ಸ್ಕ್ವಾಡ್‌ಗಳು, 8 ವಿಡಿಯೋ ಸರ್ವೆಲೆನ್ಸ್ ತಂಡಗಳು ಹಾಗೂ 8 ಸೆಕ್ಟರ್ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಹಾಯವಾಣಿ ಸಂಖ್ಯೆಗಳು
ಜಿಲ್ಲಾಧಿಕಾರಿ ಕಚೇರಿ–08156-277002, ಚಿಕ್ಕಬಳ್ಳಾಪುರ–08156-272564, ಗೌರಿಬಿದನೂರು–08155-286451, ಮಂಚೇನಹಳ್ಳಿ–9535958765, ಗುಡಿಬಂಡೆ–08156-271250, ಬಾಗೇಪಲ್ಲಿ–08150-200127, ಚೇಳೂರು–9945250817, ಶಿಡ್ಲಘಟ್ಟ–08158-256763, ಚಿಂತಾಮಣಿ–08154-252164.
ಚುನಾವಣೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಕರ್ನಾಟಕ ವೆಬ್‌ಸೈಟ್ ಹಾಗೂ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪಡೆಯಬಹುದು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.