ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IQAC: ಬಿ.ಸಿ.ಎ. ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯ, ತಂತ್ರಜ್ಞಾನ ಕುರಿತು ವಿಶೇಷ ಉಪನ್ಯಾಸ

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪರಿಣತ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವ ವಿದ್ಯಾಲಯದ ಸ್ಕೂಲ್ ಆಫ್ ಲಾ ಮುಖ್ಯಸ್ಥೆ ಡಾ. ಜಿ.ಎಂ. ಮಮತಾ ಅವರು ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೌಶಲ್ಯಗಳು ಕುರಿತು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉದ್ಯೋಗ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು

ಗೌರಿಬಿದನೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಸಿ.ಎ. ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ವತಿಯಿಂದ ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಜ್ಞಾನ, ವೃತ್ತಿ ಕೌಶಲ್ಯ ಹಾಗೂ ಉದ್ಯೋಗಾವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ವಿಷಯಗಳ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪರಿಣತ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವ ವಿದ್ಯಾಲಯದ ಸ್ಕೂಲ್ ಆಫ್ ಲಾ ಮುಖ್ಯಸ್ಥೆ ಡಾ. ಜಿ.ಎಂ. ಮಮತಾ ಅವರು ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೌಶಲ್ಯಗಳು ಕುರಿತು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉದ್ಯೋಗ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Gauribidanur News: ರೈತರ ಸಮಸ್ಯೆಗಳಿಗೆ ಅಧಿಕಾರಿಗಳ ಸ್ಪಂದನೆ ಇಲ್ಲ: ರೈತ ಸಂಘಟನೆಗಳ ಆರೋಪ

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಲಾ ಸಹಾಯಕ ಪ್ರಾಧ್ಯಾಪಕ ಡಾ. ಮಣೀಂದ್ರ ಸಿಂಗ್ ಹಂಸ್‌ಪಾಲ್ ಅವರು  ಫ್ರಂ ಕೋಡಿಂಗ್ ಟು ಎಮರ್ಜಿಂಗ್ ಟೆಕ್ನಾಲಜೀಸ್  ‘From Coding to Emerging Technologies’ ವಿಷಯದ ಕುರಿತು ಉಪನ್ಯಾಸ ನೀಡಿದರು. ಐಬಿಎಂ, ಬೆಂಗಳೂರಿನ ಹಿರಿಯ ಅಪ್ಲಿಕೇಶನ್ ಕನ್ಸಲ್ಟೆಂಟ್ ರಂಜಿತ್ ಪಿ. ಅವರು ಜಾವಾ ಪ್ರೋಗ್ರಾಮಿಂಗ್ ವೆಬ್ ಟೆಕ್ನಾಲಜಿ ಮತ್ತು ಎಐ ಟೂಲ್ಸ್ ‘Java Programming, Web Technologies and AI Tools’ ಕುರಿತು ವಿದ್ಯಾರ್ಥಿ ಗಳಿಗೆ ಮಾಹಿತಿ ನೀಡಿದರು.

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಅಂತಿಮ ವರ್ಷದ ಸಿ.ಎಸ್. ಎಂಜಿನಿಯರಿಂಗ್ ವಿದ್ಯಾರ್ಥಿ ಮೊಹಮ್ಮದ್ ಝುಬೇರ್ ನಾಯಕ್ ಅವರು ಸಿ ಪ್ರೋಗ್ರಾಮಿಂಗ್ ‘C-Programming’ ಕುರಿತು ಪ್ರಾಯೋಗಿಕ ಮಾರ್ಗದರ್ಶನ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಹೆಚ್.ಎಸ್. ವೆಂಕಟಾಚಲಪತಿ, IQAC ಸಂಯೋಜಕ ಡಾ. ವೆಂಕಟೇಶ್ ವಿ., ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಜಶೇಖರ್ ರೆಡ್ಡಿ, ಬಿ.ಸಿ.ಎ. ವಿಭಾಗದ ಉಪನ್ಯಾಸಕ ನೀಲಾಬ್ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.