Chinthamani News: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -ಜಾಗೃತಿ ಜಾಥಾಗೆ ಚಾಲನೆ
ವಿದ್ಯಾರ್ಥಿಗಳು ಮತದಾನ ನಮ್ಮ ಹಕ್ಕು ಯಾರೂ ಮತದಾನದಿಂದ ವಂಚಿತರಾಗಬೇಡಿ ಎಂಬ ಘೋಷಣೆಗಳಿರುವ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜೂ.30 ರಿಂದ ಜುಲೈ 29ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯಲಿದ್ದು,ಅರ್ಹ ನಾಗರಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಈ ಸಂದರ್ಭದಲ್ಲಿ ಕೋರಲಾಯಿತು.
-
ಚಿಂತಾಮಣಿ: ಮುಂಬರುವ ಮತದಾನದ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಲು ನಗರದಲ್ಲಿ ಬೃಹತ್ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ಭಾರತ ಚುನಾವಣಾ ಆಯೋಗ ಹಾಗೂ ಸ್ವೀಪ್ ಸಮಿತಿಯ ನಿರ್ದೇಶನದಂತೆ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮಕ್ಕೆ ತಾಲ್ಲೂಕು ಆಡಳಿತ ಹಾಗೂ ನಗರಸಭೆಯ ಪ್ರಮುಖ ಅಧಿಕಾರಿಗಳು ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಜಾಥಾದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳು ಮತದಾನ ನಮ್ಮ ಹಕ್ಕು ಯಾರೂ ಮತದಾನದಿಂದ ವಂಚಿತರಾಗಬೇಡಿ ಎಂಬ ಘೋಷಣೆಗಳಿರುವ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜೂ.30 ರಿಂದ ಜುಲೈ 29, 2026 ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯಲಿದ್ದು,ಅರ್ಹ ನಾಗರಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಈ ಸಂದರ್ಭದಲ್ಲಿ ಕೋರಲಾಯಿತು.
ಈ ಕುರಿತು ಮಾಹಿತಿ ನೀಡಿದ ತಾಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವ ಸಲುವಾಗಿ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ. ಬಿಎಲ್‌ಓ ಗಳು ಪ್ರತಿ ಮನೆಗೆ ಭೇಟಿ ನೀಡಿ ಅಗತ್ಯ ನಮೂನೆಗಳನ್ನು (Enumeration Forms) ವಿತರಿಸ ಲಿದ್ದಾರೆ. ನಾಗರಿಕರು ತಮ್ಮ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳು ಹಾಗೂ ಭಾವಚಿತ್ರ ದೊಂದಿಗೆ ಬಿಎಲ್‌ಒಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದರು.
ಯಾವುದೇ ಗೊಂದಲಗಳಿದ್ದಲ್ಲಿ ತಾಲ್ಲೂಕು ಕಚೇರಿ ಅಥವಾ ನಗರಸಭೆ ಕಾರ್ಯಾಲಯದಲ್ಲಿ ಸ್ಥಾಪಿಸಲಾಗಿರುವ 'ಮತದಾರರ ಸಹಾಯ ಕೇಂದ್ರವನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.