ಚಿಕ್ಕಬಳ್ಳಾಪುರ: ಹಿಂದೂಗಳ ಪವಿತ್ರ ದಿನವಾದ ವೈಕುಂಠ ಏಕಾದಶಿ(Vaikuntha Ekadashi)ಯ ಪ್ರಯುಕ್ತ ದೇವಾಲಯ ಗಳಲ್ಲಿ ವಿಶೇಷ ಪೂಜೆ ನೆರವೇರಿಸಿ, ಹೂವಿನ ಅಲಂಕಾರಗಳಿಂದ ಸಿಂಗರಿಸ ಲಾಗಿತ್ತು. ಭಕ್ತರು ಬೆಳಗ್ಗೆಯಿಂದಲೇ ದೇವಾಲಯಗಳಿಗೆ ಭೇಟಿ ನೀಟಿ ದೇವರ ದರ್ಶನ ಪಡೆದ ದೃಶ್ಯಗಳು ಸಾಮಾನ್ಯ ವಾಗಿತ್ತು.
ವಿಷ್ಣು ದೇವರಿಗೆ ಪ್ರಿಯವಾದ ಈ ಪವಿತ್ರ ದಿನದಂದು ಮಾಡುವ ಪೂಜೆ ಮತ್ತು ಉಪವಾಸ, ವ್ರತಗಳು ವಿಶೇಷ ಫಲವನ್ನು ನೀಡುತ್ತದೆ ಎಂಬುದು ನಂಬಿಕೆ. ಈ ನಿಟ್ಟಿನಲ್ಲಿ ಬಹುತೇಕ ದೇವಾಲಯಗಳಲ್ಲಿ ವೈಕುಂಠ ದ್ವಾರ ನಿರ್ಮಿಸಲಾಗುತ್ತದೆ. ಎಂದಿನಂತೆ ಈ ಬಾರಿಯೂ ಈ ದಿನದಲ್ಲಿ ಜಿಲ್ಲೆಯಾದ್ಯಂತ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ಶ್ರೀ ಸ್ವಾಮಿಯವರಿಗೆ ವಿಶೇಷ ಪೂಜಾಧಿಗಳು ನಡೆದವು. ವೈಕುಂಠ ದ್ವಾರ ಪ್ರವೇಶಿಸಿ, ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ಮುಂದಾ ದರು.
ಇದನ್ನೂ ಓದಿ: Vaikuntha Ekadashi: ಗುಬ್ಬಿ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಣೆ
ನಗರದ ಪ್ರಮುಖ ವೈಷ್ಣವ ದೇವಾಲಯಗಳಾದ ಕಂದವಾರಪೇಟೆಯ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಾಲಯ, ಗಂಗಮ್ಮ ಗುಡಿ ರಸ್ತೆಯ ಪೇಟೆ ಆಂಜನೇಯಸ್ವಾಮಿ ದೇವಾಲಯ, ವಾಪ ಸಂದ್ರದ ಶ್ರೀರಂಗನಾಥ ದೇವಾಲಯ, ರಂಗಸ್ಥಳದ ಶ್ರೀ ರಂಗನಾಥಸ್ವಾಮಿ ದೇವಾಲಯ, ಶ್ರೀನಿವಾಸ ಸಾಗರದ ಶ್ರೀವೆಂಕಟರಮಣಸ್ವಾಮಿ ದೇವಾಲಯ, ಜಾಲಾರಿ ನರಸಿಂಹ ದೇವರ ಬೆಟ್ಟದಲ್ಲಿರುವ ಶ್ರೀ ಯೋಗ ಮತ್ತು ಭೋಗ ನರಸಿಂಹಸ್ವಾಮಿ ದೇವಾಲಯ, ಅರೂರಿನ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.
ಅಲ್ಲದೆ ಅಣಕನೂರು, ಜಾತವಾರ, ಗವಿಗಾನ ಹಳ್ಳಿ, ಚಿಕ್ಕಕಾಡಿಗೇನಹಳ್ಳಿಗಳ ರಂಗನಾಥ ದೇವಾ ಲಯಗಳು, ಮಂಡಿಕಲ್ ಬಳಿಯ ಆವುಲ ಬೆಟ್ಟದ ನರಸಿಂಹ ದೇಗುಲ, ಬಾಗೇಪಲ್ಲಿ ತಾಲೂಕಿನ ಗಡದಿಂ ವೆಂಕಟೇಶ್ವರ ಸ್ವಾಮಿ ದೇಗುಲ, ಶಿಡ್ಲಘಟ್ಟ ತಾಲೂಕಿನ ತಲಕಾಯಲ ಬೆಟ್ಟದ ವೆಂಕಟೇಶ್ವರ ದೇವಾಲಗಳು ಒಳಗೊಂಡAತೆ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ಉತ್ತರ ದ್ವಾರದ ಮೂಲಕ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿತ್ತು.
ನಗರದ ಕಂದವಾರ ಪೇಟೆಯ ಶ್ರೀಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ಬೆಳಗಿನ ಜಾವದಿಂದಲೇ ಭಕ್ತ ಸಾಗರ ಹರಿದು ಬಂದಿತ್ತು. ಸಂಜೆಯಾದರೂ ಸಹಾ ಭಕ್ತರು ಕಿ.ಮೀ. ಗಟ್ಟಲೆ ಸರತಿ ಸಾಲಿನಲ್ಲಿ ಗಂಟೆ ಗಟ್ಟಲೆ ನಿಂತು ದರ್ಶನ ಪಡೆಯುತ್ತಿದ್ದರು.
ಶ್ರೀಲಕ್ಷ್ಮೀವೆಂಕಟರಮಣಸ್ವಾಮಿ ದೇವರಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು ಅಲ್ಲದೆ ಮುತ್ತಿನ ಕವಚ ಧಾರಣೆ ಮಾಡಲಾಗಿತ್ತು. ಭಕ್ತರಿಗೆ ಉತ್ತರ ದ್ವಾರದಿಂದ ದೇವಾಲಯ ಪ್ರವೇಶ ಹಾಗೂ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿತ್ತು.
ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ
ಬಾಗೇಪಲ್ಲಿ: ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯ ದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದು ಬಂದಿದೆ. ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ.
ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ, ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ(MLA S.N. Subbareddy) ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು.
ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿ ನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ.
ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾ ಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್.ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಲಕ್ಷ್ಮಿ ವೆಂಕಟೇಶ್ವರ ಸನ್ನಿಧಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ; ಉತ್ತರ ದ್ವಾರದಲ್ಲಿ ದರ್ಶನ ಪಡೆದ ಭಕ್ತಸಾಗರ
ಗುಡಿಬಂಡೆ : ಪಟ್ಟಣದ ಪ್ರಸಿದ್ಧ ಹಾಗೂ ಪುರಾತನ ಭೂನಿಳಾ ಸಮೇತ ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ(Vaikuntha Ekadashi)ಯನ್ನು ಅತ್ಯಂತ ಸಡಗರ-ಸಂಭ್ರಮ ದಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಹರಿದುಬಂದ ಭಕ್ತಾದಿಗಳ ದಂಡು, ಉತ್ತರ ದ್ವಾರದ ಮೂಲಕ ಶ್ರದ್ಧಾಭಕ್ತಿಯಿಂದ ದೇವರ ದರ್ಶನ ಪಡೆದರು.
ವೈಕುಂಠ ಏಕಾದಶಿಯ ಅಂಗವಾಗಿ ದೇವಾಲಯದ ಟ್ರಸ್ಟ್ ವತಿಯಿಂದ ಇಡೀ ಆವರಣವನ್ನು ತಳಿರು-ತೋರಣ, ವಿದ್ಯುತ್ ದೀಪಾಲಂಕಾರ ಹಾಗೂ ವೈವಿಧ್ಯಮಯ ಪುಷ್ಪಗಳಿಂದ ಅದ್ಧೂರಿ ಯಾಗಿ ಶೃಂಗರಿಸಲಾಗಿತ್ತು. ವಿಶೇಷವಾಗಿ, ಭೂನಿಳಾ ಸಮೇತ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿಗೆ ವಿವಿಧ ಆಭರಣಗಳು ಹಾಗೂ ಪುಷ್ಪಗಳಿಂದ 'ವಜ್ರಾಲಂಕಾರ' ಮಾಡಲಾಗಿತ್ತು. ದೇವರ ಈ ದಿವ್ಯ ರೂಪವನ್ನು ಕಣ್ತುಂಬಿಕೊಳ್ಳಲು ಭಕ್ತರು ಸಾಲುಗಟ್ಟಿ ನಿಂತಿದ್ದರು.
ದೇವಾಲಯದ ಪ್ರಧಾನ ಅರ್ಚಕರಾದ ಶರತ್ ಭಾರದ್ವಾಜ್ ಅವರ ನೇತೃತ್ವದಲ್ಲಿ ಮುಂಜಾನೆ ಯಿಂದಲೇ ಸ್ವಾಮಿಗೆ ವಿಶೇಷ ಅಭಿಷೇಕ, ಹೋಮ-ಹವನ ಹಾಗೂ ವಿಶೇಷ ಪೂಜೆಗಳು ನಡೆದವು. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಉತ್ತರ ದ್ವಾರದ ಮೂಲಕ ಪ್ರವೇಶಿಸಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ದೇವಾಲಯ ಟ್ರಸ್ಟ್‌ನ ಮಾಜಿ ಅಧ್ಯಕ್ಷ ವೆಂಕಟರಾಯಪ್ಪ, ಕಾರ್ಯದರ್ಶಿ ಜಿ. ಲಕ್ಷ್ಮೀಪತಿ, ಶಾಂಬುಮೂರ್ತಿ, ಗಜನಾಣ್ಯ ನಾಗರಾಜ್ ಸೇರಿದಂತೆ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭೇಟಿ ನೀಡಿದ ಎಲ್ಲಾ ಭಕ್ತಾದಿಗಳಿಗೆ ಟ್ರಸ್ಟ್ ವತಿಯಿಂದ ಲಡ್ಡು ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.