ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gauribidanur News: ಕ್ರೀಡಾಕೂಟದಿಂದ ಶಿಕ್ಷಕರಿಗೆ ಚೈತನ್ಯ ದೊರೆಯುತ್ತದೆ

ಶಿಕ್ಷಕರು ಶಾಲೆಯಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪೋತ್ಸಾಹಿಸುವುದಲ್ಲಿ ಹೆಚ್ಚಿನ ಗಮನ ವಿರಿಸುವುದರಿಂದ ಬಹುತೇಕ ಸಂದರ್ಭಗಳಲ್ಲಿ ತಮ್ಮ ಆಸಕ್ತಿಯ ಕ್ರೀಡೆ, ಹವ್ಯಾಸಗಳನ್ನು ಮರೆತು ಬಿಟ್ಟಿರುತ್ತಾರೆ. ಹೀಗಾಗಿ ಇಂತಹ ಕ್ರೀಡಾಕೂಟಗಳು ವೃತ್ತಿ ಜೀವನದಲ್ಲಿ ಚಿರಸ್ಮರಣಿಯವಾಗಿ ಉಳಿಯುತ್ತವೆ. ಕ್ರೀಡಾಕೂಟದಲ್ಲಿ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡಿರುವುದು ಒಳ್ಳೆಯ ಬೆಳವಣಿಗೆ

Ashok Nayak Ashok Nayak Aug 31, 2025 11:22 PM

ಖಾಸಗಿ ಶಾಲೆಗಳ ಕ್ರೀಡಾಕೂಟ 

ಗೌರಿಬಿದನೂರು: ಸದಾ ವಿದ್ಯಾರ್ಥಿಗಳ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಬಗ್ಗೆ ಯೋಚಿ ಸುವ ಶಿಕ್ಷಕರಿಗೆ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚಿನ ಚೈತನ್ಯ ನೀಡುತ್ತದೆ ಎಂದು ಅಧ್ಯಕ್ಷ ಚಂದ್ರಶೇಖರ ರೆಡ್ಡಿ ತಿಳಿಸಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕು ಖಾಸಗಿ ಶಾಲೆಯ ಆಡಳಿತ ಮಂಡಳಿಗಳ ಒಕ್ಕೂಟ ದಿಂದ ನಗರದ ನೇತಾಜಿ ಕ್ರೀಡಾಂಗಣದಲ್ಲಿ ಖಾಸಗಿ ಶಾಲೆಯ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರು ಶಾಲೆಯಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪೋತ್ಸಾಹಿಸುವುದಲ್ಲಿ ಹೆಚ್ಚಿನ ಗಮನ ವಿರಿಸುವುದರಿಂದ ಬಹುತೇಕ ಸಂದರ್ಭಗಳಲ್ಲಿ ತಮ್ಮ ಆಸಕ್ತಿಯ ಕ್ರೀಡೆ, ಹವ್ಯಾಸಗಳನ್ನು ಮರೆತು ಬಿಟ್ಟಿರುತ್ತಾರೆ. ಹೀಗಾಗಿ ಇಂತಹ ಕ್ರೀಡಾಕೂಟಗಳು ವೃತ್ತಿ ಜೀವನದಲ್ಲಿ ಚಿರಸ್ಮರಣಿಯವಾಗಿ ಉಳಿಯುತ್ತವೆ. ಕ್ರೀಡಾಕೂಟದಲ್ಲಿ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.

ಇದನ್ನೂ ಓದಿ: Gauribidanur News: ಸರಕಾರಿ ಶಾಲೆ ಮಕ್ಕಳಿಗೆ ನೋಟ್‌ಪುಸ್ತಕ ವಿತರಿಸಿದ ದಾನಿಗಳು

ಖಾಸಗಿ ಶಾಲೆ ಒಕ್ಕೂಟದ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಕ್ರೀಡೆ ಪರಸ್ಪರರಲ್ಲಿ ಸ್ಪರ್ಧಾ ತ್ಮಕ ಮನೋಭಾವನೆ ಮೂಡಿಸುವುದಲ್ಲದೆ, ಒತ್ತಡ ನಿಯಂತ್ರಣಕ್ಕೆ ಅವಕಾಶ ಮಾಡಿಕೊಡುತ್ತದೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಇಂದು ಶಿಕ್ಷಕರು ಮಾಡದ ಕೆಲಸವಿಲ್ಲ. ಶಾಲೆಯಲ್ಲಿ

ಹೆಚ್ಚು ಕಾರ್ಯಕ್ರಮಗಳನ್ನು ಶಿಕ್ಷಕರು ನಿರ್ವಹಿಸಬೇಕಾಗಿದ್ದು, ಒತ್ತಡ ಹೆಚ್ಚಿರುತ್ತದೆ. ವರ್ಷದಲ್ಲಿ ಕನಿಷ್ಠ ಎರಡು ದಿನಗಳಾದರೂ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿದಲ್ಲಿ ಮನಸ್ಸಿನ ಮೇಲಿನ ಒತ್ತಡ ಕಡಿಮೆ ಮಾಡಿಕೊಳ್ಳಬಹುದು ಎಂದರು ತಿಳಿಸಿದರು.

ಗೌರವಾಧ್ಯಕ್ಷರು-ಎಸ್.ಎಸ್.ರೆಡ್ದಿ, ಜನರಲ್ಲಿ ದೈಹಿಕ ಕಸರತ್ತುಗಳು ಕಡಿಮೆಯಾಗುತ್ತಿದ್ದು, ನಾನಾ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕ ಸದೃಢತೆ ಹೊಂದಬೇಕು ಎಂದು ಅಭಿಪ್ರಾಯ ಪಟ್ಟರು.

ಶಿಕ್ಷಕರು ವರ್ಷಕ್ಕೊಮ್ಮೆ ನಡೆಯುವ ಕ್ರೀಡಾಕೂಟದಲ್ಲಿ ಮಾತ್ರ ಪಾಲ್ಗೊಳ್ಳುವುದಲ್ಲದೆ ನಿತ್ಯ ದೈಹಿಕ ಚಟುವಟಿಕೆ ನಡೆಸಬೇಕು. ಶಿಕ್ಷಕರು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡರೇ ಅದು ಮಕ್ಕಳ ಮೇಲೆಯೂ ಪರಿಣಾಮ ಬೀರಲಿದೆ. ದೈಹಿಕ ಶಿಕ್ಷಕರಾದವರಂತೂ ನಿತ್ಯ ವ್ಯಾಯಾಮ ಮಾಡುವುದರ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಖಾಸಗಿ ಶಾಲೆಯ ಅಧ್ಯಕ್ಷ ಚಂದ್ರಶೇಖರರೆಡ್ಡಿ, ಗೌರವಾಧ್ಯಕ್ಷರು-ಎಸ್.ಎಸ್.ರೆಡ್ದಿ, ರವಿಕುಮಾರ್-ಕಾರ್ಯದರ್ಶಿ, ಚಂದ್ರಮೌಳಿ-ನಿರ್ದೇಶಕರು, ಪಠಾಣ್ ಸೈಫುಲ್ಲಾ-ಉಪಾಧ್ಯಕ್ಷರು, ರಾಜಾ ಸಾಲೊಮಾನ್-ಜಂಟಿಕಾರ್ಯದರ್ಶಿ, ಸ್ಯಾಮ್ಸನ್ ನಿರ್ದೇಶಕರು, ನಾಗಭೂಷಣ್ ಖಜಾಂಚಿ ಮತ್ತು ಖಾಸಗಿ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಸಹಶಿಕ್ಷಕರು ಭಾಗವಹಿಸಿದ್ದರು.